ಡಿ.18,19ರಂದು ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆ ಸಾಧ್ಯತೆ
ಬೆಂಗಳೂರು, ಡಿಸೆಂಬರ್ 15: ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಡಿಸೆಂಬರ್ 18 ಹಾಗೂ ಡಿಸೆಂಬರ್ 19 ರಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ಮೈಸೂರು, ಚಿಕ್ಕಮಗಳೂರಿನಲ್ಲಿ ಮಳೆಯಾಗಲಿದೆ.
ದಾವಣಗೆರೆಯಲ್ಲಿ 12.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಚಿತ್ರದುರ್ಗ, ಬಳ್ಳಾರಿ, ಚಿಕ್ಕಬಳ್ಳಾಪುರ, ದಾವಣಗೆರೆ, ಶಿವಮೊಗ್ಗ, ತುಮಕೂರಿನಲ್ಲಿ ಒಣಹವೆ ಮುಂದುವರೆಯಲಿದೆ.

ಬೆಂಗಳೂರಿನಲ್ಲಿ ಗರಿಷ್ಠ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.ಕರ್ನಾಟಕ ಮಾತ್ರವಲ್ಲದೆ ಮುಂಬೈನಲ್ಲಿ ಕಳೆದ ಎರಡು ದಿನಗಳಿಂದ ಮಳೆಯಾಗುತ್ತಿದೆ. ಮುಂದಿನ 24 ಗಂಟೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂಬೈ, ಥಾನೆ, ಪಾಲ್ಘರ್ ನಲ್ಲಿ ಮಳೆಯಾಗಲಿದೆ. ಮುಂಬೈನಲ್ಲಿ ತಾಪಮಾನವು ಕಡಿಮೆಯಾಗಿದೆ. ಮುಂಬೈ, ರಾಯ್‌ಗಢ, ಮಧ್ಯಪ್ರದೇಶದಲ್ಲಿ ಕೂಡ ಮಳೆಯಾಗಲಿದೆ.












Click it and Unblock the Notifications