Karnataka Rain: ಬೇಸಿಗೆ ಕಾಲಕ್ಕೆ ಮುನ್ನುಡಿ ಬರೆಯಲಿರುವ ವರುಣ: ಫೆಬ್ರವರಿ ಆರಂಭದಲ್ಲೇ ರಾಜ್ಯದ ಹಲವೆಡೆ ಭರ್ಜರಿ ಮಳೆ

ಬೆಂಗಳೂರು ಜನವರಿ 28: ಕರ್ನಾಟಕದಲ್ಲಿ ದಿನ ಕಳೆದಂತೆ ಚಳಿ ಪ್ರಮಾಣ ಕಡಿಮೆಯಾಗುತ್ತಿದ್ದು ಸೂರ್ಯನ ಕಿರಣಗಳು ಹೆಚ್ಚು ಪ್ರಕಾಶಮಾನವಾಗಿ ಬೀಳುತ್ತಿವೆ. ಈ ಹವಾಮಾನ ಬದಲಾವಣೆ ಚಳಿಗಾಲದ ಅಂತ್ಯವನ್ನು ಸೂಚಿಸುತ್ತಿದೆ. ಜನವರಿ ಅಂತ್ಯದಲ್ಲೇ ಬೇಸಿಗೆ ಬಿಸಿಲು ಹೆಚ್ಚಾಗಿದ್ದು ಫೆಬ್ರವರಿಯಲ್ಲಿ ಬಿಸಿ ಶಾಖ ಮತ್ತಷ್ಟು ಏರಿಕೆಯಾಗುವ ಸೂಚನೆ ಇದು. ಇದರಿಂದಾಗಿ ಫೆಬ್ರವರಿಯ ಮೊದಲ ವಾರದಲ್ಲಿ ರಾಜ್ಯದ ಹಲವೆಡೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ಹಂಚಿಕೊಂಡಿದೆ. ಹಾಗಾದರೆ ರಾಜ್ಯದ ಯಾವ ಭಾಗದಲ್ಲಿ ಮಳೆಯಾಗಲಿದೆ? ಬೆಂಗಳೂರು ಹವಾಮಾನ ಹೇಗಿರಲಿದೆ? ಐಎಂಡಿ ಹೇಳುವುದೇನು?

ಬೆಂಗಳೂರು ಸೇರಿದಂತೆ ರಾಜ್ಯದ 11 ಜಿಲ್ಲೆಗಳಲ್ಲಿ ಫೆಬ್ರವರಿ 2ರಿಂದ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬೆಂಗಳೂರು, ಮೈಸೂರು, ಮಂಡ್ಯ, ರಾಮನಗರ, ಕೊಡಗು, ಹಾಸನ, ಚಿಕ್ಕಮಗಳೂರು, ಉಡುಪಿ ಸೇರಿದಂತೆ ಹಲವೆಡೆ ಫೆಬ್ರವರಿ ಎರಡರಿಂದ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಭವಿಷ್ಯ ನುಡಿದಿದೆ. ಇನ್ನೂ ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಶಿವಮೊಗ್ಗ, ಬೆಳಗಾವಿಯಲ್ಲೂ ಹಗುರದಿಂದ ಸಾಧಾರಣ ಮಳೆ ಬೀಳುವ ಸೂಚನೆ ನೀಡಲಾಗಿದೆ.

IMD predicts rain in many parts of Karnataka from February 2

ಕರ್ನಾಟಕದ ಕಿರೀಟ ಬೀದರ್, ಅವಳಿ ನಗರ ಧಾರವಾಡ ಹಾಗೂ ಹುಬ್ಬಳ್ಳಿ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ತುಮಕೂರು, ವಿಜಯನಗರ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಯಾದಗಿರಿಯಲ್ಲಿ ಒಣಹವೆ ಮುಂದುವರೆಯಲಿದೆ.

ಹಾವೇರಿಯಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 12.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 32.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 35,8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಪಣಂಬೂರಿನಲ್ಲಿ 35.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 37.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹೊನ್ನಾವರದಲ್ಲಿ 37,2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.5ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬಾಗಲಕೋಟೆಯಲ್ಲಿ 34.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.0ಡಿಗ್ರಿ ಸೆಲ್ಸಿಯಸ್ ಸೆಲ್ಸಿಯಸ್ ಕನಿಷ್ಠ ಇಷ್ಣಾಂಶ, ಧಾರವಾಡದಲ್ಲಿ 32.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 12.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್‌ನಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 12.5ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.5ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರಿನ ಎಚ್‌ಎಎಲ್‌ನಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 31.10 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, 15.4 ಡಿಗ್ರಿ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 30.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 12.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ಹಾಗೂ ದಾವಣಗೆರೆಯಲ್ಲಿ 10.5 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+