ಸೆಪ್ಟೆಂಬರ್ 24ರ ತನಕ ಕರ್ನಾಟಕದಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು, ಸೆಪ್ಟೆಂಬರ್ 21; ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿದ ಪರಿಣಾಮ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮತ್ತೆ ಮಳೆ ಆರಂಭವಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 24ರ ತನಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಮಳೆ ಬಿರುಸಾಗುವ ಸಾಧ್ಯತೆ ಇದೆ. ಬೆಂಗಳೂರು ನಗರದಲ್ಲಿ ಸೋಮವಾರ ಮಧ್ಯಾಹ್ನ, ಸಂಜೆಯೂ ಮಳೆಯಾಗಿದ್ದು, ಇಂದು ಸಹ ಮಳೆ ಮುಂದುವರೆಯಲಿದೆ.

ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ.

IMD Predicts Rain To Continue In Karnataka Till September 24

ಮಂಗಳವಾರ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ. ಹಾಸನ, ಕೊಡಗು, ಮೈಸೂರು, ರಾಮನಗರ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಹೆಚ್ಚು ಮಳೆ ಸುರಿಯಲಿದೆ.

ಸೆಪ್ಟೆಂಬರ್ ತಿಂಗಳ ಆರಂಭದಿಂದಲೂ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಆದರೆ ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ಮಳೆಯ ಅರ್ಭಟ ಹೆಚ್ಚಾಗಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಕಾರಣ ದಕ್ಷಿಣ ಭಾರತದ ರಾಜ್ಯಗಳಲ್ಲಿ ಮಳೆ ಹೆಚ್ಚಾಗಲಿದೆ.

ಸೋಮವಾರ ಮಧ್ಯಾಹ್ನ 3 ಗಂಟೆ ವೇಳೆಗೆ ಬೆಂಗಳೂರು ನಗರದಲ್ಲಿ ಮಳೆ ಆರಂಭವಾಯಿತು. ವಿವಿಧ ಪ್ರದೇಶಗಳಲ್ಲಿ ಸುರಿದ ಮಳೆಗೆ ರಸ್ತೆಗಳು ಜಲಾವೃತವಾಗಿದ್ದವು. ಸಂಜೆ 7 ಗಂಟೆ ಬಳಿಕ ಪುನಃ ಮಳೆಯಾಗಿದೆ. ಮಂಗಳವಾರ ಬೆಳಗ್ಗೆಯೂ ಮೋಡ ಕವಿದ ವಾತಾವರಣವಿದೆ.

ಬೆಂಗಳೂರು ನಗರದ ಮೆಜೆಸ್ಟಿಕ್, ವಿಧಾನಸೌಧದ ಸುತ್ತಮುತ್ತ, ಮಲ್ಲೇಶ್ವರ, ಹೆಬ್ಬಾಳ, ಕೋರಮಂಗಲ, ರಾಜಾಜಿನಗರ, ಜೆಪಿ ನಗರ, ಆರ್. ಆರ್. ನಗರ, ಕೆಂಗೇರಿ ಮುಂತಾದ ಪ್ರದೇಶಗಳಲ್ಲಿ ಸೋಮವಾರ ಭಾರೀ ಮಳೆಯಾಗಿದೆ.

ಸೆಪ್ಟೆಂಬರ್ ತಿಂಗಳ ಅಂತ್ಯದ ತನಕ ಕರ್ನಾಟಕದಲ್ಲಿ ಮಳೆ ಮುಂದುವರೆಯಲಿದೆ. ವಿವಿಧ ರಾಜ್ಯಗಳಲ್ಲಿ ಇನ್ನೂ 4 ದಿನ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನಿಡಿದೆ. ಗುಜರಾತ್‌ನಲ್ಲಿ ಇನ್ನೂ 4 ದಿನ, ಕೇರಳದಲ್ಲಿ ಸೆಪ್ಟೆಂಬರ್ 23ರ ತನಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ವಾಡಿಕೆಗಿಂತ ಹೆಚ್ಚು ಮಳೆ ಸೆಪ್ಟೆಂಬರ್ ತಿಂಗಳಿನಲ್ಲಿ ಸುರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಜುಲೈ ತಿಂಗಳಿನಲ್ಲಿ ಉತ್ತಮ ಮಳೆಯಾಗಿತ್ತು. ಜುಲೈಗೆ ಹೋಲಿಕೆ ಮಾಡಿದರೆ ಆಗಸ್ಟ್‌ನಲ್ಲಿ ಮಳೆಯ ಪ್ರಮಾಣ ಕಡಿಮೆ ಇತ್ತು. ಆದರೆ ಸೆಪ್ಟೆಂಬರ್‌ನಲ್ಲಿ ವಾಯುಭಾರ ಕುಸಿತದಿಂದಾಗಿ ವಿವಿಧ ರಾಜ್ಯಗಳಲ್ಲಿ ಮಳೆಯಾಗುತ್ತಿದೆ.

ರಾಜಸ್ಥಾನ, ಗುಜರಾತ್, ತಮಿಳುನಾಡು, ಪಶ್ಚಿಮ ಬಂಗಾಳ, ಒಡಿಶಾ, ಉತ್ತರಾಖಂಡ್, ಮಧ್ಯಪ್ರದೇಶ, ನಾಗಾಲ್ಯಾಂಡ್, ಮಣಿಪುರ, ಸಿಕ್ಕಿಂ, ಕೇರಳ, ಮೇಘಾಲಯ, ಬಿಹಾರ, ಲಕ್ಷದ್ವೀಪ, ತೆಲಂಗಾಣದಲ್ಲಿ ಇನ್ನೂ ಎರಡು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜುಲೈ ಮತ್ತು ಆಗಸ್ಟ್ ತಿಂಗಳಿನಲ್ಲಿ ಸುರಿದ ಮಳೆಯಿಂದಾಗಿ ರಾಜ್ಯದ ಬಹುತೇಕ ಜಲಾಶಯಗಳು ಭರ್ತಿಯಾಗಿವೆ. ಆದರೆ ಕಾವೇರಿ ಕೊಳ್ಳದ ಪ್ರಮುಖ ಜಲಾಶಯ ಕೆಆರ್‌ಎಸ್ ಇನ್ನೂ ಭರ್ತಿಯಾಗಿಲ್ಲ. 38.04 ಮೀಟರ್ ಎತ್ತರ ಜಲಾಶಯದಲ್ಲಿ 35.33ರಷ್ಟು ನೀರಿನ ಸಂಗ್ರಹವಿದೆ.

ಕೆಆರ್‌ಎಸ್ ಜಲಾಶಯಕ್ಕೆ 5097 ಕ್ಯುಸೆಕ್ ಒಳಹರಿವು ಇದೆ. 10858 ನೀರನ್ನು ಡ್ಯಾಂನಿಂದ ಹೊರಬಿಡಲಾಗುತ್ತಿದೆ. ತಮಿಳುನಾಡಿಗೆ ಆಗಸ್ಟ್ 31ರ ತನಕ ಹರಿಸಬೇಕಾದ ನೀರಿನ ಪೈಕಿ ಸದ್ಯಕ್ಕೆ 7 ಟಿಎಂಸಿ ನೀರನ್ನು ಹರಿಸುವಂತೆ ಕರ್ನಾಟಕಕ್ಕೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಸೂಚನೆ ನೀಡಿತ್ತು.

ಕರ್ನಾಟಕ ಆಗಸ್ಟ್ 30ರ ತನಕ 57.04 ಟಿಎಂಸಿ ಅಡಿ ನೀರನ್ನು ಮಾತ್ರ ತಮಿಳುನಾಡಿಗೆ ಹರಿಸಿದೆ. ಸೆಪ್ಟೆಂಬರ್‌ನಲ್ಲಿ ಉತ್ತಮ ಮಳೆಯಾದರೆ ಬಾಕಿ ನೀರನ್ನು ತಮಿಳುನಾಡಿಗೆ ಹರಿಸುವುದಾಗಿ ಕರ್ನಾಟಕದ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ತಿಳಿಸಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+