ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನ.4ರಿಂದ ಭಾರಿ ಮಳೆ ಮುನ್ಸೂಚನೆ, ಹಲವೆಡೆ ಯೆಲ್ಲೋ ಅಲರ್ಟ್

|
Google Oneindia Kannada News

ಬೆಂಗಳೂರು, ನವೆಂಬರ್ 3: ದೀಪಾವಳಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ಹಲವೆಡೆ ಮೋಡ ಮುಸುಕಿದ ವಾತಾವರಣ ಮುಂದುವರೆದಿದೆ. ನವೆಂಬರ್ 4ರಿಂದ ಭಾರಿ ಮಳೆ ಸುರಿಯುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಾಯುಭಾರ ಕುಸಿತದ ಪರಿಣಾಮ ಬೆಂಗಳೂರಲ್ಲೂ ಕಾರ್ಮೋಡ, ತಣ್ಣನೆ ಗಾಳಿ, ಕೆಲವೊಮ್ಮೆ ಮಳೆ ಸುರಿಯುವ ನಿರೀಕ್ಷೆ ಇದೆ.

ಮಳೆ ಮುನ್ಸೂಚನೆ: ರಾಜ್ಯದ ದಕ್ಷಿಣ ಒಳನಾಡು, ಕರಾವಳಿ, ಮತ್ತು ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧರಣ ಮಳೆ ಹಾಗೂ ಅಲ್ಲಲ್ಲಿ ಅಧಿಕ ಮಳೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಅಧಿಕ ಮಳೆಯಾಗುವ ಸಾಧ್ಯತೆಯಿದೆ.

ಯೆಲ್ಲೋ ಅಲರ್ಟ್: ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ನವೆಂಬರ್ 2 ರಿಂದ 6ರ ತನಕ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ

IMD rainfall forecast and heavy rain from November 4 across Karnataka

ಕರಾವಳಿ ಭಾಗದ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ನವೆಂಬರ್ 3 ರಿಂದ ಮತ್ತು ನವೆಂಬರ್ 6ರಿಂದ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಿಡಿಲು ಇರಲಿದ್ದು, ನ.4ರಿಂದ ಮಳೆ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಬಂಗಾಳಕೊಲ್ಲಿಯ ಮಧ್ಯ ಭಾಗದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಬೆಂಗಳೂರು ನಗರದಲ್ಲಿ ಸಹ ನ.4ರಿಂದ ಎರಡು ದಿನಗಳ ಕಾಲ ಸಾಧಾರಣ ಗಾಳಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.

ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ ನ.4ರಿಂದ ಗುಡುಗು, ಸಿಡಿಲು ಹೆಚ್ಚಾಗಲಿದ್ದು, ಕೆಲವೆಡೆ ಸಾಧಾರಣ ಮಳೆಯಾಗಲಿದೆ. ಮುಂದಿನ ಎರಡು ದಿನಗಳವರೆಗೆ ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ.

Recommended Video

ಮುಂಬೈ ಇಂಡಿಯನ್ಸ್ ಹಾರ್ದಿಕ್ ಕೈ ಬಿಡೋದಕ್ಕೆ ಕಾರಣ ಏನು ಗೊತ್ತಾ? | Oneindia Kannada

ಇನ್ನು ಕೇರಳದ ಕೇರಳದ ಐದು ಜಿಲ್ಲೆಗಳಾದ ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಅಲಪ್ಪುಳ, ಕೊಟ್ಟಾಯಂ ಮತ್ತು ಇಡುಕ್ಕಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು IMD ಮುನ್ಸೂಚನೆ ನೀಡಿದೆ. ತಮಿಳುನಾಡು, ಕರ್ನಾಟಕ, ಕೇರಳ ಮತ್ತು ಮಾಹೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

English summary
Rainfall Forecast: Widespread very light to moderate rains with isolated heavy rains likely over South Interior Karnataka, Malnad, and Coastal Karnataka districts. Heavy rainfall expected from Nov 4 onwards alerts IMD.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X