Get Updates
Get notified of breaking news, exclusive insights, and must-see stories!

Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ

Imd Weather Forecast: ಕರ್ನಾಟಕ ಸೇರಿದಂತೆ ದೇಶದಾದ್ಯಂತ ಬಿಸಿಲು ಹೆಚ್ಚಳವಾಗಿದೆ. ಇದರ ನಡುವೆ ವಿವಿಧ ಪ್ರದೇಶಗಳಲ್ಲಿ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಭಾರತದಲ್ಲಿ ಈ ಬಾರಿ ಬೇಸಿಗೆಯು ತುಂಬಾ ಬೇಗ ಪ್ರಾರಂಭವಾಗಿದೆ. ಮಾರ್ಚ್‌ ಮೊದಲ ವಾರದಲ್ಲೇ ಬಿರುಬಿಸಿಲು ಹೆಚ್ಚಾಗಿದೆ. ಮುಂದಿನ ದಿನಗಳಲ್ಲಿ ಬಿರುಬಿಸಿಲು ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ.

ಮಾರ್ಚ್ ಆರಂಭದಲ್ಲಿಯೇ ದೇಶಾದ್ಯಂತ ಕೆಲವು ಪ್ರದೇಶಗಳಲ್ಲಿ ಬಿಸಿಲಿನ ಝಳ ತೀವ್ರ ಸ್ವರೂಪ ಪಡೆದುಕೊಂಡಿದೆ. ಹೆಚ್ಚುತ್ತಿರುವ ತಾಪಮಾನವು ಬಯಲು ಪ್ರದೇಶಗಳಲ್ಲಿ ಜನರನ್ನು ಕಂಗಾಲಾಗಿಸಿದೆ. ಸಾಮಾನ್ಯವಾಗಿ ಮಾರ್ಚ್ ತಿಂಗಳಿನ ಅಂತ್ಯದ ವೇಳೆಗೆ ಬಿಸಿಲು ಹೆಚ್ಚಳವಾಗುತ್ತಿತ್ತು. ಆದರೆ ಈ ಬಾರಿ ಮೊದಲ ವಾರವೇ ಗರಿಷ್ಠ ತಾಪಮಾನದಲ್ಲಿ ಭಾರೀ ಹೆಚ್ಚಳವಾಗಿದೆ. ಗುಡ್ಡಗಾಡು ರಾಜ್ಯಗಳಲ್ಲಿಯೂ ಗರಿಷ್ಠ ತಾಪಮಾನ ಹೆಚ್ಚಳವಾಗಿದೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಪ್ರಕಾರ, ಜಮ್ಮು ಮತ್ತು ಕಾಶ್ಮೀರ ಮತ್ತು ಹಿಮಾಚಲ ಪ್ರದೇಶದಂತಹ ಗುಡ್ಡಗಾಡು ಪ್ರದೇಶಗಳಲ್ಲಿ ತಾಪಮಾನವು ಸಾಮಾನ್ಯಕ್ಕಿಂತ 5 ರಿಂದ 8 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ. ವಾಯುವ್ಯ ಭಾರತದ ಬಯಲು ಪ್ರದೇಶಗಳಲ್ಲಿ ತಾಪಮಾನವು ಸಾಮಾನ್ಯಕ್ಕಿಂತ 3 ರಿಂದ 5 ಡಿಗ್ರಿಗಳಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಶಾಖದ ಅಲೆಯು ಮುಂದಿನ ಮೂರು ದಿನಗಳವರೆಗೆ ಮುಂದುವರಿಯುವ ಸಾಧ್ಯತೆಯಿದೆ. ಆದರೆ ಈ ನಡುವೆ ವಿವಿಧ ಪ್ರದೇಶಗಳಲ್ಲಿ ಮಳೆ ಆಗಲಿದೆ ಎನ್ನುವುದು ನಿರಾಳತೆ ಮೂಡಿಸಿದೆ.

IMD Weather Forecast

ಮಾರ್ಚ್ 9 ಮತ್ತು 11 ರ ನಡುವೆ ಪಶ್ಚಿಮ ಹಿಮಾಲಯ ಪ್ರದೇಶ ಹಾಗೂ ಕೇರಳ ಸೇರಿದಂತೆ ವಿವಿಧ ಭಾಗಗಳಲ್ಲಿ ಮಳೆ ಆಗಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ಈ ಅವಧಿಯಲ್ಲಿ, ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶದಲ್ಲಿ ಗಂಟೆಗೆ 30 ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸಬಹುದು, ಇದು ಹವಾಮಾನ ಬದಲಾವಣೆಗೆ ಕಾರಣವಾಗಲಿದೆ.

ಈ ಭಾಗಗಳಲ್ಲಿ ಮಳೆ

ಭಾರತದ ವಿವಿಧ ಭಾಗಗಳಲ್ಲಿ ಮುಂದಿನ 5 ದಿನಗಳ ವರೆಗೆ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ. ಮಾರ್ಚ್ 9 ರಿಂದ 14 ರವರೆಗೆ 8 ರಾಜ್ಯಗಳಲ್ಲಿ ಮಳೆ ಆಗಲಿದೆ. ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಾಖಂಡ, ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ, ಒಡಿಶಾ ಹಾಗೂ ಕೇರಳದಲ್ಲಿ ಮಳೆ ಆಗುವ ಸಾಧ್ಯತೆ ಇದೆ ಎಂದು ಐಎಂಡಿ ವರದಿ ಉಲ್ಲೇಖಿಸಿದೆ. ಈ ಪ್ರದೇಶಗಳಲ್ಲಿನ ಶಾಖದ ಅಲೆಯು ಕಡಿಮೆಯಾಗುವ ಸಾಧ್ಯತೆ ಇದೆ.

ಏತನ್ಮಧ್ಯೆ, ಮಾರ್ಚ್ 8 ರಿಂದ 12 ರವರೆಗೆ ವಿದರ್ಭ, ಪಶ್ಚಿಮ ರಾಜಸ್ಥಾನ ಮತ್ತು ಗುಜರಾತ್‌ನ ಕೆಲವು ಭಾಗಗಳಿಗೆ ಶಾಖದ ಅಲೆಯ ಎಚ್ಚರಿಕೆ ನೀಡಲಾಗಿದೆ. ಇಲ್ಲಿ ತಾಪಮಾನ ಗಮನಾರ್ಹವಾಗಿ ಹೆಚ್ಚಾಗಬಹುದು ಎಂದು ಹೇಳಲಾಗಿದೆ.

ದೆಹಲಿಯಲ್ಲಿ ಹವಾಮಾನ ಹೇಗಿರಲಿದೆ

ರಾಜಧಾನಿ ದೆಹಲಿಯಲ್ಲಿ ಈಗ ಸಂಪೂರ್ಣ ಬಿಸಿಲು ಇದೆ. ಜನರು ಈಗಾಗಲೇ ಎಸಿ ಮತ್ತು ಕೂಲರ್‌ಗಳ ಮೊರೆ ಹೋಗಿದ್ದಾರೆ. ಹವಾಮಾನ ಇಲಾಖೆಯ ಪ್ರಕಾರ, ದೆಹಲಿ ನಾಳೆ ಭಾಗಶಃ ಮೋಡ ಕವಿದಿರುವ ಸಾಧ್ಯತೆ ಇದೆ. ಗರಿಷ್ಠ ತಾಪಮಾನವು 36 ರಿಂದ 38 ಡಿಗ್ರಿ ಸೆಲ್ಸಿಯಸ್ ತಲುಪುವ ಸಾಧ್ಯತೆ ಇದೆ. ಬೆಳಿಗ್ಗೆ ಮತ್ತು ಸಂಜೆ ಸಮಯದಲ್ಲಿ ಚಳಿ ಇರಬಹುದು. ಆದರೆ ಮಧ್ಯಾಹ್ನ ಬಿಸಿಲ ಝಳ ಹೆಚ್ಚಾಗಿ ಇರಲಿದೆ ಎಂದು ಐಎಂಡಿ ವರದಿಯು ಉಲ್ಲೇಖಿಸಿದೆ.

ಈ ಭಾಗಗಳಲ್ಲಿ ಭಾರೀ ಬಿಸಿಲು

ಇನ್ನು ಉತ್ತರ ಪ್ರದೇಶ, ಬಿಹಾರ್ ಹಾಗೂ ರಾಜಸ್ಥಾನ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಭಾರೀ ಬಿಸಿಲು ಇರಲಿದೆ. ಮಾರ್ಚ್ 10 ರವರೆಗೆ ಹಗಲಿನ ತಾಪಮಾನವು ಸಾಮಾನ್ಯಕ್ಕಿಂತ 3 ರಿಂದ 5 ಡಿಗ್ರಿಗಳಷ್ಟು ಹೆಚ್ಚಾಗುವ ನಿರೀಕ್ಷೆಯಿದೆ. ಬಿಹಾರದಲ್ಲಿ ಮಾರ್ಚ್ 9 ಮತ್ತು 11ರ ನಡುವೆ ರಾಜ್ಯದ ಕೆಲವು ಭಾಗಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ನಿರೀಕ್ಷೆಯಿದೆ. ಜೊತೆಗೆ ಮಿಂಚು - ಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಇದೆ. ಈ ಅವಧಿಯಲ್ಲಿ, ಗಂಟೆಗೆ 30 ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸಬಹುದು. ರಾಜಸ್ಥಾನದಲ್ಲಿ ಉಷ್ಣ ಅಲೆಯು ಮುಂದುವರಿದಿದ್ದು, ಮಾರ್ಚ್ 8 ರಿಂದ 10 ರವರೆಗೆ ಪಶ್ಚಿಮ ರಾಜಸ್ಥಾನದ ಕೆಲವು ಪ್ರದೇಶಗಳಲ್ಲಿ ಉಷ್ಣ ಅಲೆಯ ವಾತಾವರಣ ಇರಲಿದೆ.

ದಕ್ಷಿಣ ಭಾರತದಲ್ಲಿ ಹೇಗಿದೆ ಹವಾಮಾನ

ಇನ್ನು ದಕ್ಷಿಣ ಭಾರತದ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಭಾರೀ ಬಿಸಿಲಿನ ವಾತಾವರಣ ಇದೆ. ಕೇರಳದಲ್ಲಿ ಮಳೆ ಆಗುವ ಸಾಧ್ಯತೆ ಇದ್ದು, ವಿವಿಧ ಭಾಗದಲ್ಲಿ ಬಿಸಿಲು ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+