Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ
Imd Weather Forecast: ಕರ್ನಾಟಕ ಸೇರಿದಂತೆ ದೇಶದಾದ್ಯಂತ ಬಿಸಿಲು ಹೆಚ್ಚಳವಾಗಿದೆ. ಇದರ ನಡುವೆ ವಿವಿಧ ಪ್ರದೇಶಗಳಲ್ಲಿ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಭಾರತದಲ್ಲಿ ಈ ಬಾರಿ ಬೇಸಿಗೆಯು ತುಂಬಾ ಬೇಗ ಪ್ರಾರಂಭವಾಗಿದೆ. ಮಾರ್ಚ್ ಮೊದಲ ವಾರದಲ್ಲೇ ಬಿರುಬಿಸಿಲು ಹೆಚ್ಚಾಗಿದೆ. ಮುಂದಿನ ದಿನಗಳಲ್ಲಿ ಬಿರುಬಿಸಿಲು ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ.
ಮಾರ್ಚ್ ಆರಂಭದಲ್ಲಿಯೇ ದೇಶಾದ್ಯಂತ ಕೆಲವು ಪ್ರದೇಶಗಳಲ್ಲಿ ಬಿಸಿಲಿನ ಝಳ ತೀವ್ರ ಸ್ವರೂಪ ಪಡೆದುಕೊಂಡಿದೆ. ಹೆಚ್ಚುತ್ತಿರುವ ತಾಪಮಾನವು ಬಯಲು ಪ್ರದೇಶಗಳಲ್ಲಿ ಜನರನ್ನು ಕಂಗಾಲಾಗಿಸಿದೆ. ಸಾಮಾನ್ಯವಾಗಿ ಮಾರ್ಚ್ ತಿಂಗಳಿನ ಅಂತ್ಯದ ವೇಳೆಗೆ ಬಿಸಿಲು ಹೆಚ್ಚಳವಾಗುತ್ತಿತ್ತು. ಆದರೆ ಈ ಬಾರಿ ಮೊದಲ ವಾರವೇ ಗರಿಷ್ಠ ತಾಪಮಾನದಲ್ಲಿ ಭಾರೀ ಹೆಚ್ಚಳವಾಗಿದೆ. ಗುಡ್ಡಗಾಡು ರಾಜ್ಯಗಳಲ್ಲಿಯೂ ಗರಿಷ್ಠ ತಾಪಮಾನ ಹೆಚ್ಚಳವಾಗಿದೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಪ್ರಕಾರ, ಜಮ್ಮು ಮತ್ತು ಕಾಶ್ಮೀರ ಮತ್ತು ಹಿಮಾಚಲ ಪ್ರದೇಶದಂತಹ ಗುಡ್ಡಗಾಡು ಪ್ರದೇಶಗಳಲ್ಲಿ ತಾಪಮಾನವು ಸಾಮಾನ್ಯಕ್ಕಿಂತ 5 ರಿಂದ 8 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ. ವಾಯುವ್ಯ ಭಾರತದ ಬಯಲು ಪ್ರದೇಶಗಳಲ್ಲಿ ತಾಪಮಾನವು ಸಾಮಾನ್ಯಕ್ಕಿಂತ 3 ರಿಂದ 5 ಡಿಗ್ರಿಗಳಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಶಾಖದ ಅಲೆಯು ಮುಂದಿನ ಮೂರು ದಿನಗಳವರೆಗೆ ಮುಂದುವರಿಯುವ ಸಾಧ್ಯತೆಯಿದೆ. ಆದರೆ ಈ ನಡುವೆ ವಿವಿಧ ಪ್ರದೇಶಗಳಲ್ಲಿ ಮಳೆ ಆಗಲಿದೆ ಎನ್ನುವುದು ನಿರಾಳತೆ ಮೂಡಿಸಿದೆ.

ಮಾರ್ಚ್ 9 ಮತ್ತು 11 ರ ನಡುವೆ ಪಶ್ಚಿಮ ಹಿಮಾಲಯ ಪ್ರದೇಶ ಹಾಗೂ ಕೇರಳ ಸೇರಿದಂತೆ ವಿವಿಧ ಭಾಗಗಳಲ್ಲಿ ಮಳೆ ಆಗಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ಈ ಅವಧಿಯಲ್ಲಿ, ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶದಲ್ಲಿ ಗಂಟೆಗೆ 30 ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸಬಹುದು, ಇದು ಹವಾಮಾನ ಬದಲಾವಣೆಗೆ ಕಾರಣವಾಗಲಿದೆ.
ಈ ಭಾಗಗಳಲ್ಲಿ ಮಳೆ
ಭಾರತದ ವಿವಿಧ ಭಾಗಗಳಲ್ಲಿ ಮುಂದಿನ 5 ದಿನಗಳ ವರೆಗೆ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ. ಮಾರ್ಚ್ 9 ರಿಂದ 14 ರವರೆಗೆ 8 ರಾಜ್ಯಗಳಲ್ಲಿ ಮಳೆ ಆಗಲಿದೆ. ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಾಖಂಡ, ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ, ಒಡಿಶಾ ಹಾಗೂ ಕೇರಳದಲ್ಲಿ ಮಳೆ ಆಗುವ ಸಾಧ್ಯತೆ ಇದೆ ಎಂದು ಐಎಂಡಿ ವರದಿ ಉಲ್ಲೇಖಿಸಿದೆ. ಈ ಪ್ರದೇಶಗಳಲ್ಲಿನ ಶಾಖದ ಅಲೆಯು ಕಡಿಮೆಯಾಗುವ ಸಾಧ್ಯತೆ ಇದೆ.
ಏತನ್ಮಧ್ಯೆ, ಮಾರ್ಚ್ 8 ರಿಂದ 12 ರವರೆಗೆ ವಿದರ್ಭ, ಪಶ್ಚಿಮ ರಾಜಸ್ಥಾನ ಮತ್ತು ಗುಜರಾತ್ನ ಕೆಲವು ಭಾಗಗಳಿಗೆ ಶಾಖದ ಅಲೆಯ ಎಚ್ಚರಿಕೆ ನೀಡಲಾಗಿದೆ. ಇಲ್ಲಿ ತಾಪಮಾನ ಗಮನಾರ್ಹವಾಗಿ ಹೆಚ್ಚಾಗಬಹುದು ಎಂದು ಹೇಳಲಾಗಿದೆ.
ದೆಹಲಿಯಲ್ಲಿ ಹವಾಮಾನ ಹೇಗಿರಲಿದೆ
ರಾಜಧಾನಿ ದೆಹಲಿಯಲ್ಲಿ ಈಗ ಸಂಪೂರ್ಣ ಬಿಸಿಲು ಇದೆ. ಜನರು ಈಗಾಗಲೇ ಎಸಿ ಮತ್ತು ಕೂಲರ್ಗಳ ಮೊರೆ ಹೋಗಿದ್ದಾರೆ. ಹವಾಮಾನ ಇಲಾಖೆಯ ಪ್ರಕಾರ, ದೆಹಲಿ ನಾಳೆ ಭಾಗಶಃ ಮೋಡ ಕವಿದಿರುವ ಸಾಧ್ಯತೆ ಇದೆ. ಗರಿಷ್ಠ ತಾಪಮಾನವು 36 ರಿಂದ 38 ಡಿಗ್ರಿ ಸೆಲ್ಸಿಯಸ್ ತಲುಪುವ ಸಾಧ್ಯತೆ ಇದೆ. ಬೆಳಿಗ್ಗೆ ಮತ್ತು ಸಂಜೆ ಸಮಯದಲ್ಲಿ ಚಳಿ ಇರಬಹುದು. ಆದರೆ ಮಧ್ಯಾಹ್ನ ಬಿಸಿಲ ಝಳ ಹೆಚ್ಚಾಗಿ ಇರಲಿದೆ ಎಂದು ಐಎಂಡಿ ವರದಿಯು ಉಲ್ಲೇಖಿಸಿದೆ.
ಈ ಭಾಗಗಳಲ್ಲಿ ಭಾರೀ ಬಿಸಿಲು
ಇನ್ನು ಉತ್ತರ ಪ್ರದೇಶ, ಬಿಹಾರ್ ಹಾಗೂ ರಾಜಸ್ಥಾನ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಭಾರೀ ಬಿಸಿಲು ಇರಲಿದೆ. ಮಾರ್ಚ್ 10 ರವರೆಗೆ ಹಗಲಿನ ತಾಪಮಾನವು ಸಾಮಾನ್ಯಕ್ಕಿಂತ 3 ರಿಂದ 5 ಡಿಗ್ರಿಗಳಷ್ಟು ಹೆಚ್ಚಾಗುವ ನಿರೀಕ್ಷೆಯಿದೆ. ಬಿಹಾರದಲ್ಲಿ ಮಾರ್ಚ್ 9 ಮತ್ತು 11ರ ನಡುವೆ ರಾಜ್ಯದ ಕೆಲವು ಭಾಗಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ನಿರೀಕ್ಷೆಯಿದೆ. ಜೊತೆಗೆ ಮಿಂಚು - ಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಇದೆ. ಈ ಅವಧಿಯಲ್ಲಿ, ಗಂಟೆಗೆ 30 ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸಬಹುದು. ರಾಜಸ್ಥಾನದಲ್ಲಿ ಉಷ್ಣ ಅಲೆಯು ಮುಂದುವರಿದಿದ್ದು, ಮಾರ್ಚ್ 8 ರಿಂದ 10 ರವರೆಗೆ ಪಶ್ಚಿಮ ರಾಜಸ್ಥಾನದ ಕೆಲವು ಪ್ರದೇಶಗಳಲ್ಲಿ ಉಷ್ಣ ಅಲೆಯ ವಾತಾವರಣ ಇರಲಿದೆ.
ದಕ್ಷಿಣ ಭಾರತದಲ್ಲಿ ಹೇಗಿದೆ ಹವಾಮಾನ
ಇನ್ನು ದಕ್ಷಿಣ ಭಾರತದ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಭಾರೀ ಬಿಸಿಲಿನ ವಾತಾವರಣ ಇದೆ. ಕೇರಳದಲ್ಲಿ ಮಳೆ ಆಗುವ ಸಾಧ್ಯತೆ ಇದ್ದು, ವಿವಿಧ ಭಾಗದಲ್ಲಿ ಬಿಸಿಲು ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
-
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ











Click it and Unblock the Notifications