ಗಣೇಶ ಚತುರ್ಥಿ 2023; ಮಾಲಿನ್ಯ ನಿಯಂತ್ರಣ ಮಂಡಳಿ ಖಡಕ್ ಎಚ್ಚರಿಕೆ
ಬೆಂಗಳೂರು, ಆಗಸ್ಟ್ 25: ಗಣೇಶ ಚತುರ್ಥಿ 2023ರ ಹಿನ್ನಲೆಯಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶವೊಂದನ್ನು ಹೊರಡಿಸಿದೆ. ಗಣೇಶ ಮೂರ್ತಿಗಳ ವಿಸರ್ಜನೆ ಕುರಿತು ಖಡಕ್ ಎಚ್ಚರಿಕೆಯೊಂದನ್ನು ನೀಡಿದೆ.
ಜಲ ಮಾಲಿನ್ಯ (ತಡೆ ಮತ್ತು ನಿಯಂತ್ರಣ) ಕಾಯ್ದೆ 1974 ಕಲಂ 33 (ಎ) ಪ್ರಕಾರ ಕೆರೆಗಳಲ್ಲಿ ಪ್ಲಾಸ್ಟರ್ ಆಫ್ ಪ್ಯಾರೀಸ್ ಮತ್ತು ಬಣ್ಣದ ವಿಗ್ರಹಗಳ ವಿಸರ್ಜನೆಯನ್ನು ನಿಷೇದಿಸುವ ನಿರ್ದೇಶನ ಜಾರಿ ಬಗ್ಗೆ ಎಂಬ ವಿಷಯವನ್ನು ಆದೇಶ ಒಳಗೊಂಡಿದೆ. ಜಲ ಮಾಲಿನ್ಯ (ತಡೆ ಮತ್ತು ನಿಯಂತ್ರಣ) ಕಾಯ್ದೆ 1974ರಂತೆ ಕೆರೆಗಳಲ್ಲಿ ಮತ್ತು ಇತರ ಜಲ ಮೂಲಗಳಲ್ಲಿ ವಿಗ್ರಹಗಳ ವಿಸರ್ಜನೆಯಿಂದಾಗುವ ಮಾಲಿನ್ಯವನ್ನು ನಿಯಂತ್ರಿಸುವ ಬಗ್ಗೆ ಮಾಹಿತಿಯನ್ನು ನೀಡಲಾಗಿದೆ.

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಈ ಹಿಂದೆ ನೀಡಿರುವ ನಿರ್ದೇಶನ ಪತ್ರವನ್ನು ಸಹ ಉಲ್ಲೇಖ ಮಾಡಲಾಗಿದೆ. ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿ, ನವದೆಹಲಿ ನೀಡಿರುವ ಆದೇಶವನ್ನು ಸಹ ಉಲ್ಲೇಖಿಸಲಾಗಿದೆ. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು, ಜಲ ಮಾಲಿನ್ಯ (ತಡೆ ಮತ್ತು ನಿಯಂತ್ರಣ) ಕಾಯ್ದೆ 1974508 ಜಲ ಮಾಲಿನ್ಯವನ್ನು ನಿಯಂತ್ರಿಸಲು ಹಾಗೂ ತಡೆಗಟ್ಟುವ ಶಾಸನ ಬದ್ಧ ಜವಾಬ್ದಾರಿಯನ್ನು ಹೊಂದಿರುತ್ತದೆ.
ಆದೇಶದಲ್ಲಿ ಏನಿದೆ?; ಇತ್ತೀಚೆಗೆ ಸಾರ್ವಜನಿಕರು ಆಚರಿಸುತ್ತಿರುವ ಹಬ್ಬ ಮತ್ತು ಇತರ ಸಮಾರಂಭಗಳಲ್ಲಿ ಪ್ಲಾಸ್ಟರ್ ಆಫ್ ವ್ಯಾರೀಸ್ ವಿಗ್ರಹಗಳನ್ನು ಮತ್ತು ಬಣ್ಣದ ವಿಗ್ರಹಗಳನ್ನು ಕರೆ ಮತ್ತು ಇತರ ಜಲ ಮೂಲಗಳಲ್ಲಿ ವಿಸರ್ಜನೆಯನ್ನು ವ್ಯಾಪಕವಾಗಿ ಮಾಡುತ್ತಿರುವುದು ಕಂಡು ಬಂದಿರುತ್ತದೆ.
ಈ ಬಗ್ಗೆ ಮಂಡಳಿಯು ಅಂತಹ ಜಲ ಮೂಲಗಳ ನೀರಿನ ಮಾದರಿಯನ್ನು ಸಂಗ್ರಹಿಸಿ (ವಿಸರ್ಜನೆ ನಂತರ) ವಿಶ್ಲೇಷಿಸಿದೆ. ಈ ವಿಶ್ಲೇಷಣಾ ವರದಿಗಳ ಪ್ರಕಾರ ಅಂತಹ ಜಲಮೂಲಗಳು ವಿಗ್ರಹಗಳ ವಿಸರ್ಜನೆಯಿಂದಾಗಿ ಮಾಲಿನ್ಯವಾಗುತ್ತಿರುವುದು ದೃಢಪಟ್ಟಿರುತ್ತದೆ. ಈ ಜಲ ಮಾಲಿನ್ಯವು ವಿಗ್ರಹಗಳಲ್ಲಿ ಉಪಯೋಗಿಸಿದ ಪ್ಲಾಸ್ಟರ್ ಆಫ್ ಪ್ಯಾರಿಸ್‌ನಿಂದ ಮತ್ತು ಬಳಸುವ ರಾಸಯನಿಕ ಬಣ್ಣಗಳಿಂದ ಆಗುತ್ತಿದ್ದು, ಇದರಿಂದ ಜಲ ಮೂಲಗಳ ಭೌತಿಕ ಮತ್ತು ರಾಸಾಯನಿಕ ಗುಣಗಳು ಮಾರ್ಪಟ್ಟಿರುತ್ತವೆ.
ಇದರಿಂದ ಜಲ ಮೂಲಗಳ ಮೇಲೆ ಅವಲಂಬಿತವಾದ ಪಶು, ಪಕ್ಷಿ, ಪ್ರಾಣಿಗಳು ಮತ್ತು ಇತರ ಜಲಚರಗಳ ಜೀವಕ್ಕೆ ಅಪಾಯ ಉಂಟಾಗುವುದುಂದ ಹಾಗೂ ಪರಿಸರಕ್ಕೆ ಮತ್ತು ಸಾರ್ವಜನಿಕರ ಆರೋಗ್ಯಕ್ಕೆ ದಕ್ಕೇಯಾಗುವುದರಿಂದ, ಇಂತಹ ಕ್ರಿಯೆಗಳನ್ನು ತಡೆಯುವುದು ಅತ್ಯಾವಶ್ಯಕವಾಗಿರುತ್ತದೆ. ಆದುದರಿಂದ ಈ ಆದೇಶವನ್ನು ಜಲ ಮಾಲಿನ್ಯ ತಡೆ ಮತ್ತು ನಿಯಂತ್ರಣ) ಕಾಯ್ದೆ 1974ರ ಅಡಿಯಲ್ಲಿ ಕಲಂ 33 (ಆ)ಪ್ರಕಾರ ಅಧಿಸೂಚಿಸಲಾಗಿದೆ ಎಂದು ತಿಳಿಸಿದೆ.
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಜಲ ಮಾಲಿನ್ಯ (ತಡೆ ಮತ್ತು ನಿಯಂತ್ರಣ) ಕಾಯ್ದೆ 1974ರ ಪ್ರಕಾರ ಕಲಂ 13(ಅ)ನಲ್ಲಿ ತಿಳಿಸಿರುವ ಅಧಿಕಾರವನ್ನು ಚಲಾಯಿಸಿ ಕೆರೆಗಳಲ್ಲಿ ಹಾಗೂ ಇತರ ಯಾವುದೇ ಜಲ ಮೂಲಗಳಲ್ಲಿ ಪ್ಲಾಸ್ಟರ್ ಆಫ್ ಪ್ಯಾರೀಸ್‌ನಿಂದ/ ಬಣ್ಣ ಲೇಪಿತವಾದಂತಹ ವಿಗ್ರಹಗಳನ್ನು ಇನ್ನು ಮುಂದೆ ರಾಜ್ಯದ ಯಾವುದೇ ಜಲಗಳಲ್ಲಿ, ನದಿ, ಕಾಲುವೆ/ ಬಾವಿಗಳಲ್ಲಿ ವಿಸರ್ಜಿಸುವುದನ್ನು ಈ ಮೂಲಕ ನಿಷೇಧಿಸಿಲಾಗಿದೆ. ಈ ಆದೇಶವನ್ನು ಉಲಂಘಿಸಿದಲ್ಲಿ ಜಲ ಮಾಲಿನ್ಯ ತಡೆ ಮತ್ತು ನಿಯಂತ್ರಣ ಕಾಯ್ದೆ 19745 ಕಲಂ 45-ಎ ಅನ್ವಯ ದಂಡವನ್ನು (ರೂ.10,000 ವರೆಗೆ) ಮತ್ತು ಜೈಲುವಾಸವನ್ನು ವಿಧಿಸುವ ಅವಕಾಶ ವಿರುತ್ತದೆ ಎಂದು ಎಚ್ಚರಿಸಲಾಗಿದೆ.
ಈ ಆದೇಶವನ್ನು ಪಾಲಿಸುವುದು ಸಂಬಂಧಿಸಿದ ಸ್ಥಳೀಯ ಸಂಸ್ಥೆಗಳ ಜವಾಬ್ದಾರಿಯಾಗಿರುತ್ತದೆ. ಸ್ಥಳೀಯ ಸಂಸ್ಥೆಗಳು ಪೊಲೀಸ್ ಇಲಾಖೆಯ ಸಹಾಯದಿಂದ ಇಂತಹ ನಿಯಂತ್ರಣವನ್ನು ಮಾಡಲು ನಿರ್ದೇಶಿಸಿದೆ. ಸ್ಥಳೀಯ ಸಂಸ್ಥೆಗಳು ಈ ಬಗ್ಗೆ ಸಾರ್ವಜನಿಕರಿಗೆ ದೂರದರ್ಶನ ಜಾಹೀರಾತು ಮತ್ತು ಜನ ಜಾಗೃತಿ ಶಿಬಿರಗಳನ್ನು ಹಮ್ಮಿಕೊಂಡು ಈ ನಿರ್ದೇಶನವನ್ನು ಪರಿಣಾಮಕಾರಿಯಾಗಿ ಜಾರಿ ಮಾಡುವುದು.
ಹೊರ ರಾಜ್ಯದಿಂದ ಕರ್ನಾಟಕ ರಾಜ್ಯಕ್ಕೆ ತರುವ ಯಾವುದೇ ಅಂತಹ ವಿಗ್ರಹಗಳನ್ನು ತಡೆಯಲು ಮತ್ತು ವಾಪಸ್ಸು ಕಳುಹಿಸುವ ಜವಾಬ್ದಾರಿಯನ್ನು ರಾಜ್ಯದಲ್ಲಿರುವ ಎಲ್ಲಾ ಗಡಿ ಶಾಲೆ/ ಚಿಕ್‌ನ ಅಧಿಕಾರಿಗಳ ಜವಾಬ್ದಾರಿಯಾಗಿರುತ್ತದೆ. ಈ ಸಂಬಂಧದಲ್ಲಿ ರಾಜ್ಯದ ವಾಣಿಜ್ಯ ತೆರಿಗೆ/ ಸಾರಿಗೆ ಇಲಾಖೆ ಪೊಲೀಸ್ ಇಲಾಖೆ/ ಅರಣ್ಯ ಇಲಾಖೆಗಳು ಗಣಿ ಇಲಾಖೆ ಕಟ್ಟುನಿಟ್ಟಿನ ಕ್ರಮ ವಹಿಸಬೇಕಾಗಿರುತ್ತದೆ.
ಸ್ಥಳೀಯ ಸಂಸ್ಥೆಗಳು ಅಂತಹ ವಿಗ್ರಹಗಳನ್ನು ತಯಾರಿಸುವ ಮತ್ತು ಮಾರಾಟ ಮಾಡುವ ವೃತ್ತಿಗಳಿಗೆ, ಸಂಸ್ಥೆಗಳಿಗೆ ವ್ಯಾಪಾರ ಲೈಸನ್ಸ್ ಅನ್ನು ನೀಡದಿರಲು ಹಾಗೂ ಈಗಾಗಲೇ ನೀಡಿದಲ್ಲಿ ವಾಪಸ್ಸು ಪಡೆಯಲು ಸೂಚಿಸಲಾಗಿದೆ. ಮುಂದುವರೆದು ಯಾವುದೇ ಲೈಸನ್ಸ್ ಅನ್ನು ಪಡೆಯದ ಅನಧಿಕೃತವಾಗಿ ತಯಾರಿಸ್ಪಟ್ಟ ಮಾಡುತ್ತಿರುವ ವ್ಯಕ್ತಿ ಅಥವಾ ಸಂಸ್ಥೆಗಳ ಮೇಲೆ ಕಾನೂನು ಕ್ರಮವನ್ನು ತಕ್ಷಣ ಜರುಗಿಸಲು ಸೂಚಿಸಲಾಗಿದೆ.
ಸಂಪೂರ್ಣ ಮಣ್ಣಿನಿಂದ ಹಾಗೂ ಬಣ್ಣ ಲೇಪಿತವಲ್ಲದ ವಿಗ್ರಹಗಳನ್ನು ಮಾತ್ರ ಕೆರೆಗಳಲ್ಲಿ ಸಂಪೂರ್ಣ ಸೂಕ್ತ ವ್ಯವಸ್ಥೆಯನ್ನು ಮಾಡಿ ವಿಸರ್ಜಿಸುವುದು. ಈ ವಿಷಯದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಪ್ರಾದೇಶಿಕ ಕಛೇರಿಯ ಸಲಹೆ ಸೂಚನೆಗಳನ್ನು ತೆಗೆದುಕೊಳ್ಳುವುದು. ಬೇರೆ ಘನತ್ಯಾಜ್ಯಗಳನ್ನು ವಿಗ್ರಹಗಳ ಜೊತೆ ವಿಸರ್ಜಿಸಲು ಅವಕಾಶ ನೀಡಬಾರದು.
ಕರ್ನಾಟಕ ಸರೋವರ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರವು ತನ್ನ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕೆರೆಗಳಲ್ಲೂ ಮೇಲಿನ ನಿರ್ದೇಶನ ಜಾರಿ ಮಾಡಲು ಕ್ರಮ ಕೈಗೊಳ್ಳಲು ಈ ಮೂಲಕ ಸೂಚಿಸದೆ. ಮೇಲಿನ ಎಲ್ಲಾ ನಿರ್ದೇಶನಗಳನ್ನು ಪಾಲಿಸಲು ಸ್ಥಳೀಯ ಸಂಸ್ಥೆಗಳು ಸ್ಥಳೀಯ ನಾಗರೀಕರ ಮತ್ತು ಇತರೆ ಸರ್ಕಾರೇತರ ಸಂಸ್ಥೆಗಳ ಸಹಕಾರ ಪಡೆಯಬಹುದು.
ಬೆಂಗಳೂರು ಜಿಲ್ಲೆಯನ್ನು ಹೊರತುಪಡಿಸಿ, ರಾಜ್ಯದ ಇತರೆ ಎಲ್ಲಾ ಜಿಲ್ಲೆಗಳಲ್ಲಿ ಅನುಷ್ಠಾನಗೊಳಿಸಲು, ಜಿಲ್ಲಾಧಿಕಾರಿಗಳು ಸ್ಥಳೀಯ ಸಂಸ್ಥೆಗಳಿಂದ ಜಾರಿಗೊಳಿಸುವ ಜವಾಬ್ದಾರಿ ಹೊಂದಿರುತ್ತಾರೆ. ಈ ಅಧಿಸೂಚನೆಯನ್ನು ಪರಿಸರ ಮತ್ತು ಸಾರ್ವಜನಿಕರ ಆರೋಗ್ಯ ಹಿತದೃಷ್ಟಿಯಿಂದ ಆದೇಶಿಸಲಾಗಿದೆ.












Click it and Unblock the Notifications