Siddaramaiah : ಅನೈತಿಕ ಪೊಲೀಸ್ ಗಿರಿಗೆ ರಾಜ್ಯದಲ್ಲಿ ಅವಕಾಶ ಇಲ್ಲ: ಸಿದ್ದರಾಮಯ್ಯ ಎಚ್ಚರಿಕೆ

ಬೆಂಗಳೂರು, ಜೂನ್‌ 07: ಅನೈತಿಕ ಪೊಲೀಸ್ ಗಿರಿಗೆ ರಾಜ್ಯದಲ್ಲಿ ಅವಕಾಶ ಇಲ್ಲ. ಈ ಬಗ್ಗೆ ಎಲ್ಲಾ ಪೊಲೀಸ್ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಪ್ರತಿಯೊಂದು ಸಮುದಾಯಗಳು ಅಭಿವೃದ್ಧಿಯಲ್ಲಿ ಪಾಲ್ಗೊಂಡಾಗ ಮಾತ್ರ ದೇಶದ ಪ್ರಗತಿ ಸಾಧ್ಯ. ನಮ್ಮ ಸರ್ಕಾರ "ಸರ್ವರಿಗೂ ಸಮಪಾಲು" ಎನ್ನುವ ಮೌಲ್ಯದಲ್ಲಿ ನಂಬಿಕೆ ಇಟ್ಟಿದೆ. ಸಂವಿಧಾನಬದ್ದವಾಗಿ ರಾಜ್ಯದಲ್ಲಿ ಕಾನೂನಿನ ಆಡಳಿತ ಜಾರಿಯಲ್ಲಿದೆ. ಇದು ಕುವೆಂಪು ಅವರು ಹೇಳಿದಂತೆ "ಸರ್ವ ಜನಾಂಗದ ಶಾಂತಿಯ ತೋಟ" ಆಗಬೇಕು ಎಂದು ಹೇಳಿದರು.

Immoral Policing Is Not Allowed In The State

ನಮ್ಮ ಸರ್ಕಾರ ಜಾರಿ ಮಾಡಿರುವ ಐದು ಗ್ಯಾರಂಟಿ ಯೋಜನೆಗಳು ಕನ್ನಡ ನಾಡಿನ ಸಮಸ್ತರಿಗೆ ಅನ್ವಯ ಆಗುತ್ತದೆ. ಎಲ್ಲಾ ಧರ್ಮ, ಎಲ್ಲಾ ಜಾತಿ-ಸಮುದಾಯಗಳ ಅರ್ಹ ಫಲಾನುಭವಿಗಳು ನಮ್ಮ ಗ್ಯಾರಂಟಿ ಯೋಜನೆಗಳ ಅನುಕೂಲ ಪಡೆಯುತ್ತಾರೆ.

ಸಂವಿಧಾನದ ಆಶಯದಂತೆ ಸರ್ವರನ್ನೂ ಒಳಗೊಳ್ಳುವ ಸರ್ಕಾರ ನಮ್ಮದು. ನಮ್ಮ ನಾಡು ಮತ್ತು ನಮ್ಮ ದೇಶ ಸುಭಿಕ್ಷವಾಗಿ ಪ್ರಗತಿಯ ಮಾರ್ಗದಲ್ಲಿ ಸಾಗಲಿ, ನಮ್ಮ ನೆಲದಲ್ಲಿ ಶಾಂತಿ, ಸೌಹಾರ್ದದ ವಾತಾವರಣ ನೆಲೆಸಲಿ ಎಂದು ಪ್ರತಿಯೊಬ್ಬ ಹಜ್ ಯಾತ್ರಿಗಳು ಪ್ರಾರ್ಥಿಸಿ ಎಂದು ನಿವೇದಿಸಿಕೊಂಡರು.
ಸಂವಿಧಾನದ 9ನೇ ಶೆಡ್ಯೂಲ್‌ ಗೆ ಸೇರಿಸಲು ಕೇಂದ್ರಕ್ಕೆ ಒತ್ತಾಯ

ರಾಜ್ಯದಲ್ಲಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ಹೆಚ್ಚಿಸಿರುವುದನ್ನು ಸಂವಿಧಾನದ 9ನೇ ಶೆಡ್ಯೂಲ್‌ ನಲ್ಲಿ ಸೇರ್ಪಡೆಗೊಳಿಸಲು ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Immoral Policing Is Not Allowed In The State

ಹಿಂದಿನ ಬಿಜೆಪಿ ಸರ್ಕಾರವು ತರಾತುರಿಯಲ್ಲಿ ಮೀಸಲಾತಿ ಹೆಚ್ಚಳ ಮಾಡಿರುವುದು ಚುನಾವಣಾ ಗಿಮಿಕ್‌ ಆಗಿದೆ. ಮೀಸಲಾತಿ ಹೆಚ್ಚಳ ಕುರಿತ ಕಾಯ್ದೆ ಜಾರಿಗೊಳಿಸಿದರೂ ಅದನ್ನ ಸಂವಿಧಾನದ 9ನೇ ಶೆಡ್ಯೂಲ್‌ ಗೆ ಸೇರ್ಪಡೆಗೊಳಿಸಲು ಚುನಾವಣೆ ಘೋಷಣೆಯ ಎರಡು ದಿನ ಮೊದಲಷ್ಟೇ ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸಿದೆ. ಹಿಂದುಳಿದ ವರ್ಗಗಳ ಮೀಸಲಾತಿಯಲ್ಲಿ ಹಾಗೂ ಪರಿಶಿಷ್ಟ ಜಾತಿ ಒಳ ಮೀಸಲಾತಿ ಕಲ್ಪಿಸುವ ನೆಪದಲ್ಲಿ ಹಿಂದಿನ ಸರ್ಕಾರ ಗೊಂದಲ ಸೃಷ್ಟಿಸಿದೆ.

ಎಲ್ಲ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಳ ಮೀಸಲಾತಿ ಕಲ್ಪಿಸುವಂತೆ ತಾವು ನೀಡಿದ್ದ ಸಲಹೆಯನ್ನು ನಿರ್ಲಕ್ಷಿಸಿದ ಪರಿಣಾಮ ವಿವಿಧ ಸಮುದಾಯಗಳ ವಿರೋಧ ಎದುರಿಸುವಂತಾಯಿತು. ಸಾಮಾಜಿಕ ನ್ಯಾಯದ ಕುರಿತು ಬದ್ಧತೆ ಇಲ್ಲದೆ ಹೋದರೆ ಇಂತಹ ಗೊಂದಲಗಳಾಗುತ್ತವೆ. ಜನಸಂಘ ಹಾಗೂ ಬಿಜೆಪಿ ಹಿಂದಿನಿಂದಲೂ ಮೀಸಲಾತಿ ವಿರೋಧಿ ನಿಲುವನ್ನೇ ಹೊಂದಿದ್ದವು. ಈಗ ಮೀಸಲಾತಿ ಹೆಚ್ಚಿಸಿರುವುದು ರಾಜಕೀಯ ಗಿಮಿಕ್. ಇದರ ಕುರಿತು ನಾವು ಎಚ್ಚರದಿಂದಿರಬೇಕು.

ನಮ್ಮ ಸರ್ಕಾರವು ಮೀಸಲಾತಿಯಲ್ಲಿನ ಎಲ್ಲ ಗೊಂದಲಗಳನ್ನು ಸರಿಪಡಿಸಲಿದೆ. ಕರ್ನಾಟಕದಲ್ಲಿ ಜನ ಮತ್ತೆ ಕಾಂಗ್ರೆಸ್‌ ಪಕ್ಷಕ್ಕೆ ಅವಕಾಶ ನೀಡಿದ್ದಾರೆ. ಜನರು ಬದಲಾವಣೆ ಬಯಸಿದ್ದಾರೆ. ಹಿಂದಿನ ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಂಡಿದ್ದಾರೆ. ಕಾಂಗ್ರೆಸ್‌ ಸರ್ಕಾರ ಯಾವತ್ತೂ ಜಾತ್ಯತೀತ ಪಕ್ಷವಾಗಿದ್ದು, ಅಧಿಕಾರದಲ್ಲಿ ಇರಲಿ, ಇಲ್ಲದಿರಲಿ, ಸಾಮಾಜಿಕ ನ್ಯಾಯದ ನಿಲುವಿನಲ್ಲಿ ರಾಜಿ ಇಲ್ಲ ಎಂದು ಸ್ಪಷ್ಟಪಡಿಸಿದರು.

ಐತಿಹಾಸಿಕ ಕಾರಣಗಳಿಂದಾಗಿ ಶತ ಶತಮಾನಗಳಿಂದ ಅವಕಾಶ ವಂಚಿತರಿಗೆ ಅವಕಾಶ ಒದಗಿಸುವ ಮೂಲಕ ಅಸಮಾನತೆಯನ್ನು ನಿವಾರಿಸಿ ಸಮಾನತೆಯನ್ನು ಕಲ್ಪಿಸಬೇಕಾಗಿದೆ. ಈ ನಿಟ್ಟಿನಲ್ಲಿ ಹಿಂದೆ ನಮ್ಮ ಸರ್ಕಾರ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಮೂಲಕ ಜಾತಿವಾರು ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯನ್ನು 162 ಕೋಟಿ ರೂ. ವೆಚ್ಚದಲ್ಲಿ ಹಮ್ಮಿಕೊಂಡಿತ್ತು. ಸಮೀಕ್ಷೆಯ ವರದಿಯನ್ನು ಸ್ವೀಕರಿಸಲು ಹಿಂದಿನ ಸರ್ಕಾರಗಳು ಹಿಂದೇಟು ಹಾಕಿದವು. ಇದೀಗ ನಮ್ಮ ಸರ್ಕಾರ ಈ ವರದಿಯನ್ನು ಸ್ವೀಕರಿಸಲಿದೆ. ವಸ್ತು ಸ್ಥಿತಿಯನ್ನು ಆಧರಿಸಿ, ಜನರಿಗೆ ಶಿಕ್ಷಣ, ಉದ್ಯೋಗ, ಉದ್ಯಮ ಹೀಗೆ ವಿವಿಧ ವಲಯಗಳಲ್ಲಿ ಅಗತ್ಯ ಸೌಲಭ್ಯ ಕಲ್ಪಿಸಲಿದೆ ಎಂದು ತಿಳಿಸಿದರು.

ನಮ್ಮ ಸರ್ಕಾರ ಎಲ್ಲ ವರ್ಗದವರ ಪವಾಗಿದೆ. ಹಿಂದೆ ಅನ್ನಭಾಗ್ಯ, ಕ್ಷೀರಭಾಗ್ಯ, ಇಂದಿರಾ ಕ್ಯಾಂಟೀನ್‌ ಮೊದಲಾದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದ್ದೆವು. ಇದೀಗ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಇದಕ್ಕೆ ಸುಮಾರು 59,000 ಕೋಟಿ ರೂ. ವಾರ್ಷಿಕವೆಚ್ಚವಾಗಲಿದೆ ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+