Get Updates
Get notified of breaking news, exclusive insights, and must-see stories!

ಬಂಗಾಳಕೊಲ್ಲಿ ವಾಯುಭಾರ ಕುಸಿತ ಪರಿಣಾಮ: ಈ ಜಿಲ್ಲೆಗಳಲ್ಲಿ ಮಳೆ, ಕರ್ನಾಟಕದಲ್ಲಿ ಹೆಚ್ಚಾಯ್ತು ಚಳಿ

ಬಂಗಾಳ ಕೊಲ್ಲಿಯಲ್ಲಿ ಭಾರೀ ವಾಯುಭಾರ ಕುಸಿತವುಂಟಾಗಿದ್ದು, ಕರ್ನಾಟಕ ಹಾಗೂ ಆಂಧ್ರಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳ ಮೇಲೆ ಪರಿಣಾಮ ಬೀರಿದೆ. ಆದರೆ, ವಾಯುಭಾರ ಕುಸಿತವು ಚಂಡಮಾರುತ ಸ್ವರೂಪವನ್ನು ಪಡೆದುಕೊಂಡಿಲ್ಲ. ವಾಯುಭಾರ ಕುಸಿತದ ಪ್ರಭಾವವು ತೀವ್ರವಾಗಿದೆ. ಇದರಿಂದ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಬೆಂಗಳೂರಿನಲ್ಲಿ ಸೋಮವಾರ ಸಂಜೆ ಮಳೆಯಾಗಿದ್ದು, ಮಂಗಳವಾರವೂ ಮಳೆ ಆಗುವ ನಿರೀಕ್ಷೆ ಇದೆ. ಜನವರಿ 13ರ ಹವಾಮಾನದ ಸಂಪೂರ್ಣ ವರದಿ ಇಲ್ಲಿದೆ.

ಕರ್ನಾಟಕದಲ್ಲಿ ಮೈಕೊರೆಯುವ ಚಳಿಯೊಂದಿಗೆ ಮಳೆಯೂ ಆಗುತ್ತಿದೆ. ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿದ್ದ ವಾಯುಭಾರ ಕುಸಿತದ ಪರಿಣಾಮವಾಗಿ ಇನ್ನೂ ಮೂರರಿಂದ ನಾಲ್ಕು ದಿನಗಳ ಕಾಲ ಇದೇ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ಅಲ್ಲದೇ ಮಂಗಳವಾರ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ ಆಗುವ ಮುನ್ಸೂಚನೆ ನೀಡಲಾಗಿದೆ.

Impact of Bay of Bengal depression Rain in these districts cold weather in Karnataka

ಇನ್ನು ತಮಿಳುನಾಡಿನ ದಕ್ಷಿಣ ಕರಾವಳಿ ಮತ್ತು ಅದಕ್ಕೆ ಹೊಂದಿಕೊಂಡ ಮನ್ನಾರ್ ಕೊಲ್ಲಿಯ ಮೇಲೆ ಮೇಲ್ಮಟ್ಟದ ವಾಯುಚಂಡಮಾರುತದ ಪರಿಚಲನೆಯು ಈಗ ಕೊಮೊರಿನ್ ಪ್ರದೇಶ ಮತ್ತು ನೆರೆಹೊರೆಯಲ್ಲಿ ಸರಾಸರಿ ಸಮುದ್ರಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಇನ್ನು ಕಳೆದ 24 ಗಂಟೆ ಅವಧಿಯಲ್ಲಿ ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತಿ ಕನಿಷ್ಠ ತಾಪಮಾನವು 12.5 ಡಿಗ್ರಿ ಸೆಲ್ಸಿಯಸ್ ಬೀದರ್‌ನಲ್ಲಿ ದಾಖಲಾಗಿದೆ.

ಈ ಭಾಗಗಳಲ್ಲಿ ಮಳೆ

ಕರ್ನಾಟಕದಲ್ಲಿ ತೀವ್ರ ಚಳಿಯ ನಡುವೆ ರಾಜ್ಯದ ವಿವಿಧ ಭಾಗದಲ್ಲಿ ಮಳೆ ಮುಂದುವರಿದಿದೆ. ಬೆಂಗಳೂರಿನಲ್ಲಿ ಇದು ಸಾಧಾರಣ ಅಥವಾ ತುಂತುರು ಮಳೆ ಆಗುವ ಸಾಧ್ಯತೆ ಇದೆ. ಕೊಡಗು, ಚಾಮರಾಜನಗರ, ಹಾಸನ ಮತ್ತು ಮೈಸೂರು ಜಿಲ್ಲೆಗಳಲ್ಲಿ ಮಳೆ ಆಗಲಿದೆ. ಕೋಲಾರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಮುನ್ಸೂಚನೆ ನೀಡಿದೆ.

ಮುಂದುವರಿಯಲಿದೆ ಚಳಿ

ಇನ್ನು ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಚಳಿ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಮುಂದಿನ ಮೂರು ದಿನಗಳ ವರೆಗೆ ಉತ್ತರ ಒಳನಾಡಿನಲ್ಲಿ ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇಲ್ಲ. ನಂತರ ಕ್ರಮೇಣ 2ರಿಂದ 3 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆ ಇದೆ. ಇನ್ನು ದಕ್ಷಿಣ ಒಳನಾಡು ಹಾಗೂ ಕರಾವಳಿ ಪ್ರದೇಶದಲ್ಲಿ ಮುಂದಿನ 5 ದಿನಗಳ ವರೆಗೆ ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇರುವುದಿಲ್ಲ ಎಂದು ಐಎಂಡಿ ರಿಪೋರ್ಟ್ ತಿಳಿಸಿದೆ.

ಬೆಂಗಳೂರಿನಲ್ಲಿ ಹೇಗಿದೆ ಹವಾಮಾನ

ಬೆಂಗಳೂರಿನಲ್ಲಿ ತುಂತುರು / ಸಾಧಾರಣ ಮಳೆ ಮುಂದುವರಿದಿದೆ. ಮುಂದಿನ 24 ಗಂಟೆಯ ಅವಧಿಯಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವ ಮಂಜು ಮುಸುಕಿದ ವಾತಾವರಣ ಇರಲಿದೆ. ಇನ್ನು ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 26 ಡಿಗ್ರಿ ಸೆಲ್ಸಿಯಸ್ ಹಾಗೂ 17 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ. ಮುಂದಿನ 48 ಗಂಟೆಯಲ್ಲೂ ಇದೇ ವಾತಾವರಣ ಇರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+