7th Pay Commission: ʼಸಿದ್ದರಾಮಯ್ಯ ಮೋಸ ಮಾಡಲ್ಲʼ; ಸರ್ಕಾರಿ ನೌಕರರಿಗೆ 7ನೇ ವೇತನ ಅನುಷ್ಠಾನದ ಕುರಿತು ಬಿಗ್ ಅಪ್ಡೇಟ್
ಬೆಂಗಳೂರು,ಜುಲೈ 08: ರಾಜ್ಯದಲ್ಲಿ ಏಳನೇ ವೇತನ ಆಯೋಗದ ಜಾರಿಯಾಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಮತ್ತೆ ನಿರಾಸೆಯಾಗಿದ್ದು, ಸರ್ಕಾರಿ ನೌಕರರು ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಮುಂದಾಗಿದ್ದಾರೆ. ಸರ್ಕಾರಿ ನೌಕರರ ಬೇಡಿಕೆ ಕುರಿತು ಗೃಹ ಸಚಿವರಾದ ಡಾ.ಜಿ ಪರಮೇಶ್ವರ್ ಅವರು ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಮಾತನಾಡಿದ ಪರಮೇಶ್ವರ್ ಅವರು, 6ನೇ ವೇತನ ಆಯೋಗವನ್ನು ಅನುಷ್ಠಾನಕ್ಕೆ ತಂದಿದ್ದು ನಮ್ಮದೇ ಸರ್ಕಾರ. ಸಿದ್ದರಾಮಯ್ಯ ಸರ್ಕಾರ ಯಾರಿಗೂ ಸಹ ಮೋಸ ಮಾಡುವುದಿಲ್ಲ. 7ನೇ ವೇತನ ಆಯೋಗದ ಶಿಫಾರಸುಗಳು ಖಂಡಿತಾ ಜಾರಿಯಾಗುತ್ತದೆ. ಈ ವರದಿ ಶಿಫಾರಸು ಜಾರಿಗೆ 18 ಸಾವಿರ ಕೋಟಿ ರೂ ಅಗತ್ಯವಿದೆ. ಒಂದೇ ದಿನದಲ್ಲಿ ಎಲ್ಲವನ್ನೂ ಜಾರಿಗೆ ತರಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

ಸಿದ್ದರಾಮಯ್ಯ ಸರಕಾರ ಯಾರಿಗೂ ಮೋಸ ಮಾಡಲ್ಲ. ಕಾಂಗ್ರೆಸ್ ಪಕ್ಷದ ಮೇಲೆ ಇಟ್ಟಿರುವ ನಂಬಿಕೆಯನ್ನು ಎಂದಿಗೂ ಹುಸಿಗೊಳಿಸುವುದಿಲ್ಲ. 6ನೇ ವೇತನ ಆಯೋಗ ಜಾರಿಗೆ ತಂದಿದ್ದು ಸಹ ನಮ್ಮ ಸರಕಾರ. 7ನೇ ವೇತನ ಆಯೋಗ ಶಿಫಾರಸು ಜಾರಿಗೆ 18 ಸಾವಿರ ಕೋಟಿ ಹಾಗೂ ಒಪಿಎಸ್ ಜಾರಿಗೆ ನೂರಾರು ಕೋಟಿ ರೂ ಬೇಕು. ಒಂದೇ ದಿನದಲ್ಲಿ ಎಲ್ಲವನ್ನೂ ಜಾರಿಗೆ ತರಲು ಸಾಧ್ಯವಿಲ್ಲ. ಅದಕ್ಕಾಗಿ ತಾಳ್ಮೆಯಿಂದ ಇರಿ ಎಂದು ಸರ್ಕಾರಿ ನೌಕರರಿಗೆ ಹೇಳಿದರು.
ಇನ್ನೂ ಮಹಾರಾಷ್ಟ್ರ ಮತ್ತು ಕರ್ನಾಟಕ ರಾಜ್ಯಗಳು ಅತಿ ಹೆಚ್ಚು ತೆರಿಗೆ ಕಟ್ಟುತ್ತಿವೆ. ಇದಕ್ಕೆ ಅನುಗುಣವಾಗಿ ನಮಗೆ ವಾಪಸ್ ಬರುತ್ತಿಲ್ಲ ಎಂಬ ವಾದವನ್ನು ಕೇಂದ್ರ ಸರಕಾರದ ಮುಂದಿಟ್ಟಿದ್ದೇವೆ. ನಮ್ಮಲ್ಲಾದ ಬದಲಾವಣೆಯಿಂದ ಕರ್ನಾಟಕ ಶಕ್ತಿಯುತವಾಗಿದ್ದು, ಇತರೆ ರಾಜ್ಯಗಳಿಗೂ ಶಕ್ತಿ ನೀಡಲು ಈ ಹಣ ಬಳಕೆ ಮಾಡುತ್ತಿದ್ದೇವೆ ಎಂದು ಕೇಂದ್ರ ಸರಕಾರ ಹೇಳಿದೆ. ನಮ್ಮ ರಾಜ್ಯ ಪ್ರಗತಿ ಪಥದಲ್ಲಿದೆ ಎಂದು ಗೃಹ ಸಚಿವರಾದ ಪರಮೇಶ್ವರ್ ತಿಳಿಸಿದರು.
ಅನುದಾನಿತ ಶಾಲೆಗಳ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ನೇಮಕ ಸಂಬಂಧಿಸಿದಂತೆ ಸರಕಾರ ಶೀಘ್ರವೇ ನಿರ್ಧಾರಕ್ಕೆ ಬರಲಿದೆ. ನಾನು ಕೂಡ ಶಿಕ್ಷಣ ಸಚಿವರು ಮತ್ತು ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇನೆ. ಅತಿಥಿ ಶಿಕ್ಷಕರಿಗೆ ನೀಡುತ್ತಿರುವ ಗೌರವಧನ ಸಾಕಾಗುವುದಿಲ್ಲ. ಪ್ರಣಾಳಿಕೆಯಲ್ಲಿ ತಿಳಿಸಿದಂತೆ ಒಪಿಎಸ್ ಜಾರಿಗೆ ಕ್ರಮ ವಹಿಸುತ್ತೇವೆ ಎಂದರು.
ವಿಧಾನ ಪರಿಷತ್ ಸದಸ್ಯ ಡಿ.ಟಿ. ಶ್ರೀನಿವಾಸ್ ಮಾತನಾಡಿ, ಅನುದಾನಿತ ಶಾಲೆಗಳ ಒಕ್ಕೂಟ ಹಾಗೂ ಎಲ್ಲ ಶಿಕ್ಷಕರು ನಮ್ಮದೇ ಸರಕಾರವಿದೆ, ಇವರನ್ನು ಗೆಲ್ಲಿಸಿಕೊಂಡರೆ ಅನುಕೂಲವಾಗಲಿದೆ ಎಂಬ ನಿಮ್ಮ ವಿಶ್ವಾಸವನ್ನು ಹುಸಿಗೊಳಿಸಲ್ಲ. ನನ್ನ ಗೆಲುವಿಗೆ ಸಹಕಾರ ನೀಡಿದ್ದು ನಂಬಿಕೆ ಉಳಿಸಿಕೊಳ್ಳಲು ಪ್ರಯತ್ನಿಸುತ್ತೇನೆ ಎಂದು ತಿಳಿಸಿದರು.












Click it and Unblock the Notifications