7th Pay Commission; ಆಯೋಗದ ವರದಿ ಜಾರಿಗೆ ಒಪ್ಪಿಗೆ ಸಿಕ್ಕರೂ ಸರ್ಕಾರಿ ನೌಕರರಿಗೆ ನಿರಾಸೆ

ಬೆಂಗಳೂರು, ಜುಲೈ 16: ಕರ್ನಾಟಕದ ಕಾಂಗ್ರೆಸ್ ಸರ್ಕಾರ ಕೆ. ಸುಧಾಕರ್‌ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗದ ವರದಿ ಶಿಫಾರಸು ಜಾರಿಗೆ ಒಪ್ಪಿಗೆ ನೀಡಿದೆ. ಸರ್ಕಾರಿ ನೌಕರರ ಪ್ರಮುಖ ಬೇಡಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.

ಈ ಕುರಿತು ಮುಖ್ಯಮಂತ್ರಿಗಳ ಅಧಿಕೃತ ಖಾತೆಯ ಮೂಲಕ ಟ್ವೀಟ್ ಮಾಡಲಾಗಿದೆ. "ಆಗಸ್ಟ್ 1ರಿಂದ 7ನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೆ ಕೊಡಲು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ" ಎಂದು ತಿಳಿಸಲಾಗಿದೆ.

Implementation Of 7th Pay Commission Report Set Back For Government Employees

ಸಚಿವ ಸಂಪುಟ ಸಭೆಯಲ್ಲಿ ಕೇವಲ ತೀರ್ಮಾನ ಕೈಗೊಂಡರೆ ಸಾಲದು, ಆದೇಶವನ್ನು ಹೊರಡಿಸಬೇಕು ಎಂದು ನೌಕರರು ಒತ್ತಾಯಿಸುತ್ತಿದ್ದಾರೆ. ಅಲ್ಲದೇ 7ನೇ ವೇತನ ಆಯೋಗದ ವರದಿ ಜಾರಿಗೊಳಿಸಲು ಒಪ್ಪಿಗೆ ಸಿಕ್ಕಿದರೂ ಸಹ ಸರ್ಕಾರಿ ನೌಕರರಿಗೆ ನಿರಾಸೆಯಾಗಿದೆ.

ಸರ್ಕಾರಿ ನೌಕರರಿಗೆ ನಿರಾಸೆ ಏಕೆ?: ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾರ್ಚ್‌ 16 ರಂದು ಕೆ. ಸುಧಾಕರ್‌ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗ ವರದಿ ಸ್ವೀಕಾರ ಮಾಡಿದ್ದರು. ಒಟ್ಟು 244 ಪುಟಗಳ ವರದಿಯ ಶಿಫಾರಸುಗಳನ್ನು ಆಗಸ್ಟ್ 1ರಿಂದ ಜಾರಿಗೊಳಿಸಲು ಸರ್ಕಾರ ಒಪ್ಪಿದೆ.

ವೇತನ ಆಯೋಗ ವರದಿ ನೀಡುವಾಗ ಹೊಸ ವೇತನ ಶ್ರೇಣಿಗಳನ್ನು 1/7/2022ರಿಂದ ಕಾಲ್ಪನಿಕವಾಗಿ ಅನ್ವಯಿಸುತ್ತದೆ. ಅನುಷ್ಠಾನಗೊಳಿಸುವ ನೈಜ ದಿನಾಂಕವನ್ನು ರಾಜ್ಯ ಸರ್ಕಾರವು ನಿರ್ಧರಿಸುವುದು ಎಂದು ಆಯೋಗವು ಶಿಫಾರಸು ಮಾಡುತ್ತದೆ ಎಂದು ಉಲ್ಲೇಖಿಸಲಾಗಿತ್ತು.

ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ 1/7/22 ರಿಂದ ಕಾಲ್ಪನಿಕವಾಗಿ ವೇತನ ನಿಗದಿ. 1/8/2024 ರಿಂದ ಆರ್ಥಿಕ ಸೌಲಭ್ಯವನ್ನು ನೀಡಲು ಹಾಗೂ ವೇತನ ಆಯೋಗ ಶಿಫಾರಸು ಮಾಡಿದ 27.50 ಮೂಲ ವೇತನ ನಿಗದಿಗೆ ಅನುಮೋದನೆ ನೀಡಲಾಗಿದೆ.

ಅಲ್ಲದೇ ಕೆ. ಸುಧಾಕರ್‌ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗದ ವರದಿ ಜಾರಿಗೊಳಿಸುವುದು ಎನ್.ಪಿ.ಎಸ್. ರದ್ದುಪಡಿಸಿ ಹಳೆ ಪಿಂಚಣಿ ಯೋಜನೆ ಮರು ಜಾರಿ, ಕರ್ನಾಟಕ ರಾಜ್ಯ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೊಳಿಸುವುದು ಸರ್ಕಾರಿ ನೌಕರರ ಪ್ರಮುಖ ಬೇಡಿಕೆಯಾಗಿತ್ತು.

ಈ ಬೇಡಿಕೆಗಳಲ್ಲಿ ರಾಜ್ಯ 7ನೇ ವೇತನ ಆಯೋಗದ ವರದಿ ಜಾರಿಗೊಳಿಸುವುದಕ್ಕೆ ಮಾತ್ರ ಸರ್ಕಾರ ಒಪ್ಪಿಗೆ ನೀಡಿದೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ರಾಜ್ಯ ಕಾರ್ಯಕಾರಿ ಸಮಿತಿ ಹಾಗೂ ವೃಂದ ಸಂಘಗಳ ಅಧ್ಯಕ್ಷರು-ಪದಾಧಿಕಾರಿಗಳ ಸಭೆಯನ್ನು ಜುಲೈ 23ರಂದು ಕರೆಯಲಾಗಿದೆ. ಈ ಮಹತ್ವದ ಸಭೆಯಲ್ಲಿ ನೌಕರರ ಮುಂದಿನ ಹೋರಾಟದ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ. ಎನ್‌ಪಿಎಸ್‌ಗಾಗಿ ನೌಕರರು ಪಟ್ಟು ಹಿಡಿದಿದ್ದಾರೆ.

ಎನ್.ಪಿ.ಎಸ್. ರದ್ದುಪಡಿಸಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವುದು ಮತ್ತು ಕರ್ನಾಟಕ ರಾಜ್ಯ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೊಳಿಸುವ ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿಗಳು ಹಿಂದೆ ಭರವಸೆ ನೀಡಿದ್ದರು. ಆದರೆ ಈ ಕುರಿತು ತೀರ್ಮಾನ ಕೈಗೊಳ್ಳದ ಕಾರಣ ಮುಂದಿನ ಹೋರಾಟದ ರೂಪು-ರೇಷೆಗಳ ಕುರಿತು ಚರ್ಚಿಸಲು ಸಭೆ ಕರೆಯಲಾಗಿದೆ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರು-ತಾಲ್ಲೂಕು ಅಧ್ಯಕ್ಷರು- ಪದಾಧಿಕಾರಿಗಳು, ಎಲ್ಲಾ ಇಲಾಖೆಗಳ ವೃಂದ ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳು, ನಿಗಮ/ ಮಂಡಇಳಿ, ಪ್ರಾಧಿಕಾರ, ವಿಶ್ವವಿದ್ಯಾಲಯಗಳು, ಸ್ಥಳೀಯ ಸಂಸ್ಥೆಗಳು, ಸ್ವಾಯತ್ತ ಸಂಸ್ಥೆ ಮತ್ತು ಅನುದಾನಿತ ಸಂಸ್ಥೆಗಳ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ರಾಜ್ಯ ನಿವೃತ್ತ ನೌಕರರ ಸಂಘದ ಪದಾಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸಭೆಯಲ್ಲಿ ಯಾವ ರೀತಿಯ ಹೋರಾಟ ನಡೆಸಬೇಕು? ಎಂದು ತೀರ್ಮಾನವನ್ನು ಕೈಗೊಳ್ಳಲಾಗುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+