ನಮ್ಮ ಸರ್ಕಾರದ ಮತ್ತೊಂದು ಮಹತ್ವದ ಯೋಜನೆ “ಗೃಹ ಆರೋಗ್ಯ“: ಕಾಂಗ್ರೆಸ್
ಬೆಂಗಳೂರು, ಅಕ್ಟೋಬರ್ 06: ರಾಜ್ಯದ ಜನತೆಗೆ ಈಗಾಗಲೇ ಶಕ್ತಿ ಯೋಜನೆ, ಅನ್ನಭಾಗ್ಯ, ಗೃಹ ಜ್ಯೋತಿ ಹಾಗೂ ಗೃಹ ಲಕ್ಷ್ಮೀ ಯೋಜನೆಯನ್ನ ಜಾರಿಗೊಳಿಸಿದ್ದು, ಯುವ ನಿಧಿ ಯೋಜನೆಯನ್ನ ಡಿಸೆಂಬರ್ ಅಥವಾ ಜನವರಿಯಲ್ಲಿ ಜಾರಿಗೊಳಿಸಲು ಸರ್ಕಾರ ನಿರ್ಧಾರವನ್ನ ಕೈಗೊಂಡಿದೆ. ಇತ್ತ ಸರ್ಕಾರ ಮತ್ತೊಂದು ಮಹತ್ವದ ಯೋಜನೆಗೆ ಮುಂದಾಗಿದೆ.
ಹೌದು, ಗೃಹ ಲಕ್ಷ್ಮಿ ಮತ್ತು ಗೃಹ ಜ್ಯೋತಿ ಮಾದರಿಯಲ್ಲಿ ಮತ್ತೊಂದು ಮಹತ್ವ ಯೋಜನೆಗೆ ಗೃಹ ಆರೋಗ್ಯಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಈ ಕುರಿತು ಟ್ವೀಟ್ ಮೂಲಕ ತಿಳಿಸಿರುವ ರಾಜ್ಯ ಕಾಂಗ್ರೆಸ್ ನಮ್ಮ ಸರ್ಕಾರದ ಮತ್ತೊಂದು ಮಹತ್ವದ ಯೋಜನೆ "ಗೃಹ ಆರೋಗ್ಯ" ಎಂದು ಹೇಳಿದೆ.

ಗೃಹ ಆರೋಗ್ಯ ಯೋಜನೆಯ ಅಡಿಯಲ್ಲಿ ಗ್ರಾಮಗಳ ಪ್ರತಿ ಮನೆಗೂ ಅರೋಗ್ಯ ಕಾರ್ಯಕರ್ತರು ಭೇಟಿ ನೀಡಿ ಆರೋಗ್ಯ ತಪಾಸನೆ ನಡೆಸಿ ಔಷಧಗಳ ಕಿಟ್ ನೀಡಲಿದ್ದಾರೆ. ಮೊದಲ ಹಂತದಲ್ಲಿ 8 ಜಿಲ್ಲೆಗಳಲ್ಲಿ ಮದುಮೇಹ, ಅಧಿಕ ರಕ್ತದೊತ್ತಡದಂತಹ ಆರೋಗ್ಯ ಸಮಸ್ಯೆಗಳಿಗೆ ಮೂರು ತಿಂಗಳಿಗಾಗುವಷ್ಟು ಔಷದಗಳನ್ನು ಪೂರೈಸಲಾಗುತ್ತಿದೆ. ಸಚಿವ ದಿನೇಶ್ ಗುಂಡೂರಾವ್ ಅವರ ನೇತೃತ್ವದಲ್ಲಿ ಅರೋಗ್ಯ ಇಲಾಖೆಯಲ್ಲಿ ಮಹತ್ವದ ಸುಧಾರಣೆಯಾಗುತ್ತಿದೆ. ಕನ್ನಡಿಗರ ಹಿತ ಕಾಯುವುದೇ ಕಾಂಗ್ರೆಸ್ ಸರ್ಕಾರದ ಧ್ಯೇಯ ಎಂದು ಹೇಳಿದರು.
ಇನ್ನೂ ಈ ಕುರಿತು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಮಾತನಾಡಿ, ಜನರಲ್ಲಿ ಜಾಗೃತಿ ಮೂಡಿಸುವ ಮೂಲಕ ರೋಗಗಳನ್ನು ತಡೆಗಟ್ಟುವುದು ತಮ್ಮ ಇಲಾಖೆಯ ಉದ್ದೇಶವಾಗಿದೆ. 'ಗೃಹ ಆರೋಗ್ಯ' ಕಾರ್ಯಕ್ರಮದಡಿ ರಾಜ್ಯಾದ್ಯಂತ ಮನೆ-ಮನೆಗೆ ತೆರಳಿ ಆರೋಗ್ಯ ಸಮೀಕ್ಷೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ನಮ್ಮ ಸರ್ಕಾರದ ಮತ್ತೊಂದು ಮಹತ್ವದ ಯೋಜನೆ “ಗೃಹ ಆರೋಗ್ಯ“.
— Karnataka Congress (@INCKarnataka) October 6, 2023
ಗೃಹ ಆರೋಗ್ಯ ಯೋಜನೆಯ ಅಡಿಯಲ್ಲಿ ಗ್ರಾಮಗಳ ಪ್ರತಿ ಮನೆಗೂ ಅರೋಗ್ಯ ಕಾರ್ಯಕರ್ತರು ಭೇಟಿ ನೀಡಿ ಆರೋಗ್ಯ ತಪಾಸನೆ ನಡೆಸಿ ಔಷಧಗಳ ಕಿಟ್ ನೀಡಲಿದ್ದಾರೆ.
ಮೊದಲ ಹಂತದಲ್ಲಿ 8 ಜಿಲ್ಲೆಗಳಲ್ಲಿ ಮದುಮೇಹ, ಅಧಿಕ ರಕ್ತದೊತ್ತಡದಂತಹ ಆರೋಗ್ಯ ಸಮಸ್ಯೆಗಳಿಗೆ ಮೂರು ತಿಂಗಳಿಗಾಗುವಷ್ಟು ಔಷದಗಳನ್ನು… pic.twitter.com/LnSQWhY5vC
ಈ ವರ್ಷ ಎಂಟು ಜಿಲ್ಲೆಗಳನ್ನು ಒಳಗೊಳ್ಳುತ್ತೇವೆ ಮತ್ತು ಮುಂದಿನ ವರ್ಷಗಳಲ್ಲಿ ರಾಜ್ಯಾದ್ಯಂತ ವಿಸ್ತರಿಸುತ್ತೇವೆ ಎಂದು ದಿನೇಶ್ ಗುಂಡೂರಾವ್ ಹೇಳಿದ್ದು, ರಕ್ತದೊತ್ತಡ ಮತ್ತು ಮಧುಮೇಹ ಪ್ರಮುಖ ಆರೋಗ್ಯ ಸಮಸ್ಯೆಗಳು. ಈ ಆರೋಗ್ಯ ಸಮಸ್ಯೆಗಳನ್ನು ಮೊದಲೇ ಗುರುತಿಸುವುದು ಪರಿಣಾಮಕಾರಿಯಾಗಿ ಚಿಕಿತ್ಸೆ ನೀಡಲು ಸಹಾಯ ಮಾಡುತ್ತದೆ ಎಂದು ಹೇಳಿದರು.
ರೋಗ ಪತ್ತೆಯಾದವರಿಗೆ ಉಚಿತವಾಗಿ ಔಷಧ ಮತ್ತು ಚಿಕಿತ್ಸೆ ನೀಡಲಾಗುವುದು. ಆರೋಗ್ಯ ಇಲಾಖೆಯ ಕಾರ್ಯಕರ್ತರು ರೋಗಿಗಳಿರುವ ಕುಟುಂಬಗಳಿಗೆ ಔಷಧಿಗಳನ್ನು ಒದಗಿಸುತ್ತಾರೆ. ಜನರಿಗೆ ಶಸ್ತ್ರಚಿಕಿತ್ಸೆ ಮತ್ತು ಚಿಕಿತ್ಸೆಗಳನ್ನು ಉಚಿತವಾಗಿ ನೀಡಲಾಗುವುದು.

ಮಾನಸಿಕ ಆರೋಗ್ಯವನ್ನು ಕೇಂದ್ರೀಕರಿಸಲು ಆರೋಗ್ಯ ಇಲಾಖೆಯು ಕರ್ನಾಟಕ ಬ್ರೈನ್ ಹೆಲ್ತ್ ಇನಿಶಿಯೇಟಿವ್ (KABHI) ಎಂಬ ಕಾರ್ಯಕ್ರಮವನ್ನು ಪ್ರಾರಂಭಿಸಲು ಯೋಜಿಸಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಅಲ್ಲದೇ ಹಲವು ಜನರು ಖಿನ್ನತೆ ಸೇರಿದಂತೆ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಖಿನ್ನತೆಗೆ ಮದ್ದು ಇದೆ ಎಂಬುದು ಹಲವರಿಗೆ ತಿಳಿದಿರುವುದಿಲ್ಲ. ಕರ್ನಾಟಕ ಬ್ರೈನ್ ಹೆಲ್ತ್ ಇನಿಶಿಯೇಟಿವ್ (KABHI) ಹೆಸರಿನ ಕಾರ್ಯಕ್ರಮದ ಅಡಿಯಲ್ಲಿ ನಾವು ಎಲ್ಲಾ ಜಿಲ್ಲಾ ಆಸ್ಪತ್ರೆಗಳನ್ನು ನಿಮ್ಹಾನ್ಸ್‌ನೊಂದಿಗೆ ಸಂಪರ್ಕಿಸುತ್ತಿದ್ದೇವೆ. ನಿಮ್ಹಾನ್ಸ್‌ನ ಹಿರಿಯ ವೈದ್ಯರು ಜಿಲ್ಲಾ ಆಸ್ಪತ್ರೆಗಳಲ್ಲಿನ ವೈದ್ಯರಿಗೆ ಮಾರ್ಗದರ್ಶನ ನೀಡಲಿದ್ದಾರೆ ಎಂದು ದಿನೇಶ್ ಗುಂಡೂರಾವ್ ಹೇಳಿದರು.












Click it and Unblock the Notifications