"ರಾಜ್ಯಾದ್ಯಂತ ಕನ್ನಡ ನಾಮಫಲಕ ಅಳವಡಿಕೆ ಕಡ್ಡಾಯ ನಿಯಮ ಜಾರಿ"
ಬೆಳಗಾವಿ, ಡಿಸೆಂಬರ್ 13: ರಾಜ್ಯದಲ್ಲಿ ಕಡ್ಡಾಯ ಕನ್ನಡ ಭಾಷಾ ನಾಮಫಲಕ ಅಳವಡಿಕೆ ಕುರಿತು ನಿಗಾವಹಿಸಲು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶಿವರಾಜ ತಂಗಡಗಿ ಅವರು ತಿಳಿಸಿದರು.
ವಿಧಾನ ಪರಿಷತ್ತಿನಲ್ಲಿ ಶುಕ್ರವಾರದಂದು ಸದಸ್ಯರಾದ ಡಾ.ಉಮಾಶ್ರೀ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಮೂಲ ಕಾಯಿದೆ 17ನೇ ಪ್ರಕರಣದ ಆರನೇ ಉಪಪ್ರಕರಣದಂತೆ ಸರ್ಕಾರ ಅಥವಾ ಸ್ಥಳೀಯ ಪ್ರಾಧಿಕಾರಗಳಿಂದ ಅನುಮತಿ ಮತ್ತು ಮಂಜೂರಾತಿಯೊಂದಿಗೆ ಕಾರ್ಯನಿರ್ವಹಿಸುತ್ತಿರುವ ವಾಣಿಜ್ಯ, ಕೈಗಾರಿಕೆ ಮತ್ತು ವ್ಯವಹಾರ ಉದ್ಯಮಗಳು, ಟ್ರಸ್ಟ್ ಗಳು, ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು ಮತ್ತು ಹೋಟೆಲ್ಗಳು ಮುಂತಾದವುಗಳು ತಮ್ಮ ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಶೇ.60 ರಷ್ಟು ಪ್ರದರ್ಶಿಸಲಾಗಿದೆ.

ಕನ್ನಡ ಭಾಷೆಯು ನಾಮಫಲಕದ ಮೇಲ್ಬಾಗದಲ್ಲಿ ಪ್ರದರ್ಶಿತವಾಗಿದೆ ಎಂಬುದನ್ನು ಖಚಿತ ಪಡಿಸಿಕೊಳ್ಳತಕ್ಕದ್ದು ಎಂದಿದ್ದು ಕಾಯ್ದೆಯ ಅನುಷ್ಠಾನ ಜವಾಬ್ದಾರಿ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳದ್ದಾಗಿರುತ್ತದೆ. ಇದು ನಿರಂತರ ಪ್ರಕ್ರಿಯೆಯಾಗಿರುವ ಕಾರಣ ಅಪೂರ್ಣಗೊಳ್ಳುವ ಪ್ರಶ್ನೆ ಉದ್ಭವಿಸುವುದಿಲ್ಲ. ಈ ಅಧಿನಿಯಮದಂತೆ ಕ್ರಮವಹಿಸಲು ಅನುಷ್ಠಾನ ಅಧಿಕಾರಿಗಳಾದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿರುತ್ತದೆ.
ಕನ್ನಡದಲ್ಲಿ ನಾಮಫಲಕ ಅಳವಡಿಸಿಕೊಳ್ಳದ ಸಂಘ-ಸಂಸ್ಥೆಗಳ ವಿರುದ್ಧ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ನಿಯಮ 23ರ ಅನುಸಾರ ಮೊದಲನೆಯ ಅಪರಾಧಕ್ಕಾಗಿ ರೂ.5000, ಎರಡನೇ ಅಪರಾಧಕ್ಕಾಗಿ ರೂ. 10,000 ಮತ್ತು ನಂತರದ ಪ್ರತಿ ಅಪರಾಧಕ್ಕಾಗಿ ರೂ. 20,000 ರವರೆಗೆ ವಿಸ್ತರಿಸಬಹುದಾದ ಜುಲ್ಮಾನೆಗೆ ಮತ್ತು ಪರವಾನಗಿಯನ್ನು ರದ್ದುಗೊಳಿಸುವುದಕ್ಕೆ ಗುರಿಯಾಗುವುದು ಎಂದಿರುತ್ತದೆ. ಈ ಅಧಿನಿಯಮದಂತೆ ಕ್ರಮವಹಿಸಲು ಅನುಷ್ಠಾನ ಅಧಿಕಾರಿಗಳಾದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿರುತ್ತದೆ ಎಂದು ಸಚಿವರಾದ ಶಿವರಾಜ ತಂಗಡಗಿ ತಿಳಿಸಿದರು.
ಚಿಕ್ಕಮಗಳೂರಿನಲ್ಲಿ ಪಿ.ಪಿ.ಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ
ಚಿಕ್ಕಮಗಳೂರು ಜಿಲ್ಲೆಯಲ್ಲಿ ಪಿ.ಪಿ.ಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿಪಡಿಸಲು ಏಕಗವಾಕ್ಷಿ ಏಜೆನ್ಸಿ ವತಿಯಿಂದ ಅನುಮೋದನೆ ಪಡೆದು ಬೆಂಗಳೂರಿನ ಐಡೆಕ್ ಸಂಸ್ಥೆಯನ್ನು ವ್ಯವಹರಣಾ ಸಮಾಲೋಚಕರನ್ನಾಗಿ ನೇಮಿಸಲಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕ ಸಚಿವರ ಪರವಾಗಿ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ತಿಳಿಸಿದರು.
ಶೃಂಗೇರಿ ಕ್ಷೇತ್ರದ ಶಾಸಕ ರಾಜೇಗೌಡ ಟಿ.ಡಿ ಇವರು ಸಾಂಬಾರು ಪದಾರ್ಥಗಳ ರಫ್ತು ಅಭಿವೃದ್ಧಿ ಮತ್ತು ಬೆಳವಣಿಗೆಗೆ ಸೂಕ್ತವಾದ ಮೂಲ ಸೌಕರ್ಯಕ್ಕೆ ಸ್ಪೈಸ್ ಪಾರ್ಕ್ ಅಗತ್ಯವಾಗಿದ್ದು, ಆದಷ್ಟು ಬೇಗ ಸ್ಪೈಸ್ ಪಾರ್ಕ್ ಅಭಿವೃದ್ಧಿಪಡಿಸಬೇಕೆಂದು ವಿಧಾನಸಭೆಯಲ್ಲಿ ಮನವಿ ಮಾಡಿದರು.
ಸ್ಪೈಸ್ ಪಾರ್ಕ್ ಅಭಿವೃದ್ಧಿಗೆ ಗುರುತಿಸಲಾಗಿದ್ದ ಜಾಗದ ಭೌತಿಕ ಪರಿಶೀಲನೆಯನ್ನು ಸಾಂಬಾರು ಮಂಡಳಿ, ತೋಟಗಾರಿಕೆ ಇಲಾಖೆ, ಕಂದಾಯ ಇಲಾಖೆ ಹಾಗೂ ಕೈಗಾರಿಕೆ ಇಲಾಖೆಯ ಅಧಿಕಾರಿಗಳು ಕೈಗೊಂಡಾಗ, ಸದರಿ ಜಾಗವು ಸ್ಪೈಸ್ ಪಾರ್ಕ್ ನಿರ್ಮಾಣ ಮಾಡಲು ಸೂಕ್ತವಾಗದೇ ಇರುವ ಹಿನ್ನೆಲೆಯಲ್ಲಿ ಸೂಕ್ತವಾದ ಪರ್ಯಾಯ ಜಾಗವನ್ನು ನೀಡಲು ಕೋರಲಾಗಿತ್ತು. ಅದರಂತೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕು ಗೋಣಿಬೀಡು ಹೋಬಳಿ ಬೆಟ್ಟದಮನೆ ಗ್ರಾಮದಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ ಉದ್ದೇಶಕ್ಕಾಗಿ ತೋಟಗಾರಿಕೆ ಇಲಾಖೆಗೆ ಭೂಮಿ ವರ್ಗಾಯಿಸಿ, ದಿನಾಂಕ 30-5-2025ರಂದು ಆದೇಶ ಹೊರಡಿಸಲಾಗಿದೆ.
ಜಮೀನಿನ ಹದ್ದುಬಸ್ತು ಗುರುತಿಸುವಿಕೆ ಪ್ರಕ್ರಿಯೆ ಪೂರ್ಣಗೊಂಡಿದೆ. ಪ್ರಸ್ತುತ ವ್ಯವಹರಣಾ ಸಮಾಲೋಚಕರನ್ನು ನೇಮಿಸಿ ವರದಿಯನ್ನು ಸಿದ್ದಪಡಿಸಲು ಸೂಚಿಸಲಾಗಿರುತ್ತದೆ. ವರದಿ ಬಂದ ಕೂಡಲೇ ಆದಷ್ಟು ಶೀಘ್ರವಾಗಿ ಸ್ಪೈಸ್ ಪಾರ್ಕ್ ಕಾರ್ಯಾರಂಭಗೊಳಿಸಲಾಗುವುದು ಎಂದು ವಿಧಾನಸಭೆಯಲ್ಲಿ ತಿಳಿಸಿದರು
-
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
12 ಕೋಟಿ ರೂ ಡ್ರಗ್ಸ್ ಜಪ್ತಿ: ಗಂಧದ ನಾಡು 'ಗಾಂಜಾ ಬೀಡು' ಮಾಡಿದ ಕಾಂಗ್ರೆಸ್ ಸರ್ಕಾರ; R ಅಶೋಕ -
Siddaramaiah: ಶಿಸ್ತು, ಪ್ರಾಮಾಣಿಕತೆ ಮತ್ತು ಮಾನವೀಯತೆ ಪೊಲೀಸ್ ಸೇವೆಯ ಆಧಾರ: ಸಿದ್ದರಾಮಯ್ಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ











Click it and Unblock the Notifications