Get Updates
Get notified of breaking news, exclusive insights, and must-see stories!

Maize Price: ರೈತರಿಗೆ ಗುಡ್ ನ್ಯೂಸ್; ಮೆಕ್ಕೆ ಜೋಳ ಖರೀದಿ ಬಗ್ಗೆ ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ

ಬೆಂಗಳೂರು, ಡಿಸೆಂಬರ್ 08: ರಾಜ್ಯ ಸರ್ಕಾರವೂ ಮೆಕ್ಕೆ ಜೋಳ ಬೆಳೆ ಬೆಳೆದ ರೈತರಿಗೆ ಗುಡ್ ನ್ಯೂಸ್ ನೀಡಿದೆ. ಪ್ರತಿ ರೈತರಿಂದ ಖರೀದಿಸುವ ಮೆಕ್ಕೆಜೋಳದ ಗರಿಷ್ಠ ಮಿತಿಯನ್ನು 20 ಕ್ವಿಂಟಾಲ್‌ನಿಂದ 50 ಕ್ವಿಂಟಾಲ್‌ಗೆ ಹೆಚ್ಚಿಸಿ ದಿನಾಂಕ 02.12.2025 ರಂದು ತಿದ್ದುಪಡಿ ಆದೇಶ ಹೊರಡಿಸಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಹಾಗೂ ಕೃಷಿ ಸಚಿವ ಎನ್ .ಚಲುವರಾಯಸ್ವಾಮಿಯವರ ವಿಶೇಷ ಕಾಳಜಿ ಹಾಗೂ ಪ್ರಯತ್ನದಿಂದ ಸಂಕಷ್ಟದಲ್ಲಿದ್ದ ಮೆಕ್ಕೆ ಜೋಳ ಬೆಳೆಯುವ ರೈತರ ಪರವಾಗಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಪ್ರತಿ ಎಕರೆಗೆ 12 ಕ್ವಿಂಟಾಲ್ ಲೆಕ್ಕದಲ್ಲಿ ಗರಿಷ್ಠ 20.00 ಕ್ವಿಂಟಾಲ್ ಮೆಕ್ಕೆಜೋಳವನ್ನು ಮಾತ್ರ ಬೆಂಬಲ ಬೆಲೆ ರೂ. 2400.00 ಪ್ರತಿ ಕ್ವಿಂಟಾಲ್ ದರದಲ್ಲಿ ಖರೀದಿಸಲು ಈ ಹಿಂದೆ ಆದೇಶ ಹೊರಡಿಸಲಾಗಿತ್ತು.

Important decision by the state government regarding the purchase of maize

ಇದೀಗ ಈ ಮಿತಿಯನ್ನು 50.00 ಕ್ವಿಂಟಾಲ್‌ಗೆ ಏರಿಕೆ ಮಾಡುವ ಮೂಲಕ ಸಣ್ಣ ಮತ್ತು ಮಧ್ಯಮ ರೈತರಿಗೆ ದೊಡ್ಡ ಪ್ರಮಾಣದಲ್ಲಿ ತಮ್ಮ ಉತ್ಪನ್ನವನ್ನು ಬೆಂಬಲ ಬೆಲೆಯಲ್ಲಿ ಮಾರಾಟ ಮಾಡುವ ಅವಕಾಶ ಕಲ್ಪಿಸಲಾಗಿದೆ.
FRUITS ತಂತ್ರಾಂಶದಲ್ಲಿ ನೋಂದಾಯಿತವಾಗಿರುವ ರೈತರ ಜಮೀನು ವಿಸ್ತೀರ್ಣದ ಆಧಾರದ ಮೇಲೆಯೇ ಈ ಗರಿಷ್ಠ ಮಿತಿ ನಿಗದಿಪಡಿಸಲಾಗುತ್ತದೆ. ಜೊತೆಗೆ ಡಿಸ್ಟಿಲರಿಗಳ ಸಮೀಪದಲ್ಲಿರುವ PACS (ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು) ಮೂಲಕ ಖರೀದಿಗೆ ಆದ್ಯತೆ ನೀಡಲಾಗುವುದು ಎಂದು ತಿದ್ದುಪಡಿ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ರೈತರು ಹಾಗೂ ರೈತ ಸಂಘಟನೆಗಳ ಮನವಿ ಹಿನ್ನಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸಾವಿರಾರು ಮೆಕ್ಕೆಜೋಳ ಬೆಳೆಗಾರ ರೈತರಿಗೆ ನೇರ ಲಾಭವಾಗಲಿದ್ದು, ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಮಾರಾಟ ಮಾಡುವ ಸ್ಥಿತಿಯಿಂದ ರಕ್ಷಣೆ ದೊರೆಯಲಿದೆ ಎಂದು ರೈತ ಮುಖಂಡರು ಸಂತಸ ವ್ಯಕ್ತಪಡಿಸಿದ್ದಾರೆ. ಈ ತಿದ್ದುಪಡಿ ಆದೇಶವನ್ನು ಎಲ್ಲ PACS, ತಾಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ತಕ್ಷಣ ಜಾರಿಗೆ ತರಬೇಕೆಂದು ಸರ್ಕಾರ ಸೂಚಿಸಿದೆ.

ಸರ್ಕಾರದ ಆದೇಶದಲ್ಲಿ ಏನಿದೆ?

ಸರ್ಕಾರದ ಆದೇಶ ಸಂಖ್ಯೆ: ಸಿಒ 243 ಎಂಆರ್‌ಇ 2025 (ಭಾ-1),ದಿನಾಂಕ:30.11.2025ರಂದು ಹೊರಡಿಸಿರುವ ಆದೇಶದ ಅನುಗುಣವಾಗಿ ದಿನಾಂಕ: 02.12.2025ರಲ್ಲಿನ ತಿದ್ದುಪಡಿ ಆದೇಶದಲ್ಲಿ "FRUITS ತಂತ್ರಾಂಶದಲ್ಲಿ ಲಭ್ಯವಾಗುವ ರೈತರು ಹೊಂದಿರುವ ಜಮೀನಿನ ವಿಸ್ತೀರ್ಣಕ್ಕೆ ಅನುಗುಣವಾಗಿ ಪ್ರತಿ ಎಕರೆಗೆ 12 ಕ್ವಿಂಟಾಲ್‌ನಂತೆ ಪ್ರತಿ ರೈತರಿಂದ ಗರಿಷ್ಟ 20.00 ಕ್ವಿಂಟಾಲ್ ಮೆಕ್ಕೆಜೋಳ ಉತ್ಪನ್ನವನ್ನು ಬೆಂಬಲ ಬೆಲೆ ದರ ಪ್ರತಿ ಕ್ವಿಂಟಾಲ್‌ಗೆ ರೂ.2400.00 ರಂತೆ ಖರೀದಿಸತಕ್ಕದ್ದು ಮತ್ತು ಡಿಸ್ಟಿಲರಿಗಳ ಸಮೀಪದ PACS ಗಳ ಮೂಲಕ ಖರೀದಿಸಲು ಆದ್ಯತೆ ನೀಡತಕ್ಕದ್ದು" ಎಂಬುದರ ಬದಲಾಗಿ "FRUITS ತಂತ್ರಾಂಶದಲ್ಲಿ ಲಭ್ಯವಾಗುವ ರೈತರು ಹೊಂದಿರುವ ಜಮೀನಿನ ವಿಸ್ತೀರ್ಣಕ್ಕೆ ಅನುಗುಣವಾಗಿ ಪ್ರತಿ ಎಕರೆಗೆ 12 ಕ್ವಿಂಟಾಲ್‌ನಂತೆ ಪ್ರತಿ ರೈತರಿಂದ ಗರಿಷ್ಟ 50.00 ಕ್ವಿಂಟಾಲ್ ಮೆಕ್ಕೆಜೋಳ ಉತ್ಪನ್ನವನ್ನು ಬೆಂಬಲ ಬೆಲೆ ದರ ಪ್ರತಿ ಕ್ವಿಂಟಾಲ್‌ಗೆ ರೂ.2400.00 ರಂತೆ ಖರೀದಿಸತಕ್ಕದ್ದು ಮತ್ತು ಡಿಸ್ಟಿಲರಿಗಳ ಸಮೀಪದ PACS ಗಳ ಮೂಲಕ ಖರೀದಿಸಲು ಆದ್ಯತೆ ನೀಡತಕ್ಕದ್ದು" ಎಂದು ತಿದ್ದಿ ಓದಿಕೊಳ್ಳತಕ್ಕದ್ದು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+