Maize Price: ಮೆಕ್ಕೆಜೋಳ ಖರೀದಿ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ!
ಬೆಂಗಳೂರು, ಡಿಸೆಂಬರ್ 05: ಮೆಕ್ಕೆಜೋಳದ ಬಗ್ಗೆ ರೈತರಿಗೆ ತೊಂದರೆಯಾಗುತ್ತಿದ್ದು, ಮೆಕ್ಕೆ ಜೋಳವನ್ನು ಖರೀದಿಸುವ ಬಗ್ಗೆ ರಾಜ್ಯ ಸರ್ಕಾರ ಹಲವಾರು ಪ್ರಯತ್ನಗಳನ್ನು ಮಾಡುತ್ತಿದೆ. 17,500 ಲಕ್ಷ ಎಕರೆ ಭೂಮಿಯಲ್ಲಿ 55 ಲಕ್ಷ ಟನ್ ಮೆಕ್ಕೆ ಜೋಳ ಬೆಳೆದಿದೆ. ಎಥನಾಲ್ ಕಾರ್ಖಾನೆಗಳು 7.50 ಲಕ್ಷ ಟನ್ ನ್ನು ಖರೀದಿಸಬೇಕಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದರು.
ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸಚಿವ ಹೆಚ್ ಕೆ ಪಾಟೀಲ್ ಅವರು ಮಾತನಾಡಿ, ಎಂ.ಎಸ್.ಪಿ ದರ 2400 ರೂ.ಗಳಿಗೆ ಖರೀದಿಸಬೇಕು. 2639 ರೂ.ಗಳನ್ನು ನೀಡಬೇಕೆಂಬ ಕೇಂದ್ರ ಸರ್ಕಾರದ ಸೂಚನೆಯಲ್ಲಿ ಎಥನಾಲ್ ಫ್ಯಾಕ್ಟರಿಯವರು ಸರ್ಕಾರದ ಜೊತೆ ಚರ್ಚಿಸಿ 239 ರೂ.ಗಳನ್ನು ರಾಜ್ಯ ಸರ್ಕಾರ ನೀಡಿದರೆ, ರೈತರಿಗೆ 2400 ನೀಡಬೇಕೆಂದು ಸೂಚಿಸಲಾಗಿತ್ತು. ಕೆಲವರು ಇಂಡೆಂಟ್ ಕೊಟ್ಟಿದ್ದಾರೆ, ಕೆಲವರು ಕೊಟ್ಟಿಲ್ಲ. ಇಂಡೆಂಟ್ ಕೊಟ್ಟಿಲ್ಲದವರಿಗೆ ಸೂಕ್ತ ಸೂಚನೆಯನ್ನು ನೀಡಬೇಕೆಂದು ಸೂಚಿಸಲಾಗಿದೆ. ಇದರ ಜೊತೆಗೆ ಕೆಎಂಎಫ್ ಅವರು 50,000 ಮೆ.ಟನ್ ಖರೀದಿಸಬೇಕು ಆದಷ್ಟು ಬೇಗ ಖರೀದಿಸಲು ಈಗಾಗಲೇ ನೋಂದಣಿ ಪ್ರಕ್ರಿಯೆ ಪ್ರಾರಂಭಿಸಲಾಗಿದ್ದು, ಮಾರುಕಟ್ಟೆಯಲ್ಲಿ ಸ್ಥಿರತೆ ಸಾಧ್ಯವಾಗಲಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದರು.

ಬೆಂಗಳೂರು ಅರಮನೆ ಮೈದಾನದಲ್ಲಿ ನಡೆದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ - "ಇನ್ವೆಸ್ಟ್ ಕರ್ನಾಟಕ 2025"ದ ಪರಿಷ್ಕೃತ ವೆಚ್ಚ ರೂ.100.70 ಕೋಟಿಗಳಿಗೆ ಘಟನೋತ್ತರ ಅನುಮೋದನೆ ನೀಡಲು ಸಚಿವ ಸಂಪುಟ ನಿರ್ಣಯ ಕೈಗೊಂಡಿದೆ. ಮೂಲಸೌಲಭ್ಯ ಅಭಿವೃದ್ಧಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯಡಿ "ಕರ್ನಾಟಕ ಒಳನಾಡು ನೌಕೆ ನಿಯಮಗಳು, 2025"ಕ್ಕೆ ಅನುಮೋದನೆ ನೀಡಲು ಸಚಿವ ಸಂಪುಟ ನಿರ್ಣಯಿಸಿದೆ.
ಸಹಕಾರ ಇಲಾಖೆಯಡಿ "ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಗಣಕೀಕರಣ ಯೋಜನೆಯಲ್ಲಿ 5491 ಪ್ಯಾಕ್ಸ್ಗಳ ಗಣಕೀಕರಣವನ್ನು ಪೂರ್ಣಗೊಳಿಸಲು ಮೆ.Satra Service and Solutions Pvt Ltd (L1) ಗೆ ರೂ.7138.30 ಲಕ್ಷಗಳಿಗೆ ನೀಡಿದ ಆಡಳಿತಾತ್ಮಕ ಅನುಮೋದನೆಯನ್ನು ಪರಿಷ್ಕರಿಸಿ, ಈ ಸಂಸ್ಥೆಗೆ 4453 ಪ್ಯಾಕ್ಸ್ಗಳನ್ನು ಮಾತ್ರ ರೂ.5788.90 ಲಕ್ಷಗಳ ವೆಚ್ಚದಲ್ಲಿ ಗಣಕೀಕರಣ ಪೂರ್ಣಗೊಳಿಸಲು ಹಾಗೂ ಉಳಿದ 1038 ಪ್ಯಾಕ್ಸ್ಗಳನ್ನು ಮೆ. Satra Service and Solutions Pvt Ltd (L1) ಯಿಂದ ಹಿಂಪಡೆದು Choice Consultancy Services Pvt ¸ÀA¸ÉÜ (L3) UÉ L1 ದರದಲ್ಲಿಯೇ ಅಂದರೆ ರೂ.1349.40 ಲಕ್ಷ ವೆಚ್ಚದಲ್ಲಿ ಹಂಚಿಕೆ ಮಾಡಲು ಆಡಳಿತಾತ್ಮಕ ಅನುಮೋದನೆ ನೀಡಲು" ಸಚಿವ ಸಂಪುಟ ನಿರ್ಣಯಿಸಿದೆ.
ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ವತಿಯಿಂದ ಕಲಬುರಗಿ, ಗದಗ, ದಾವಣಗೆರೆ, ಮಂಗಳೂರು, ಭೀಮನಕುಪ್ಪೆ (ಬೆಂಗಳೂರಿನ ಕೆಂಗೇರಿ ಹತ್ತಿರ) ಮತ್ತು ಮೈಸೂರಿನಲ್ಲಿ ಅತ್ಯಾಧುನಿಕ ಕೌಶಲ್ಯ ಪ್ರಯೋಗಾಲಯಗಳನ್ನು ರೂ.452.89 ಕೋಟಿಗಳ ಅಂದಾಜು ಮೊತ್ತದಲ್ಲಿ ಸ್ಥಾಪಿಸಲು ಆಡಳಿತಾತ್ಮಕ ಅನುಮೋದನೆ ನೀಡಲು ಸÀಚಿವ ಸಂಪುಟ ನಿರ್ಣಯಿಸಿದೆ. ರಾಷ್ಟ್ರೀಯ ಆರೋಗ್ಯ ಅಭಿಯಾನ PM-ABHIM ಯೋಜನೆಯಡಿ ಕೊಪ್ಪಳ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಅಧೀನದಲ್ಲಿ ಜಿಲ್ಲಾಸ್ಪತ್ರೆ ಆವರಣದಲ್ಲಿ Critical Care Block ನಿರ್ಮಾಣ ಕಾಮಗಾರಿಗಳನ್ನು ರೂ.28.69 ಕೋಟಿಗಳ ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 19 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ ಸ್ವಂತ ಕಟ್ಟಡ ನಿರ್ಮಾಣವನ್ನು ರೂ.304.00 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಿದೆ. ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಡಿ "ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ (ತಿದ್ದುಪಡಿ) ವಿಧೇಯಕ, 2025"ಕ್ಕೆ ಅನುಮೋದನೆಯನ್ನು ಸಚಿವ ಸಂಪುಟ ನೀಡಿದೆ.
ಬೆಂಗಳೂರು ನಿರಾಶ್ರಿತರ ಪರಿಹಾರ ಕೇಂದ್ರಕ್ಕೆ ಸೇರಿದ ಸಜ್ಜೇಪಾಳ್ಯ ಗ್ರಾಮದ ಸ.ನಂ.4 ರಲ್ಲಿ ಲಭ್ಯವಿರುವ 03 ಎಕರೆ ಜಮೀನನ್ನು ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ "ನೆಫ್ರೋ-ಯುರಾಲಜಿ ಸಂಸ್ಥೆ"ಗೆ (Institute of Nephro-Urology) ಆಸ್ಪತ್ರೆ ನಿರ್ಮಾಣಕ್ಕೆ ಗುತ್ತಿಗೆ ಆಧಾರದ ಮೇಲೆ ಮಂಜೂರು ಮಾಡಲು ಸಚಿವ ಸಂಪುಟ ನಿರ್ಣಯಿಸಿದೆ. ಕೊಪ್ಪಳ ಜಿಲ್ಲೆ, ಯಲಬುರ್ಗಾ ತಾಲ್ಲೂಕು, ಯಡ್ಡೋಣಿ ಇಲ್ಲಿನ ಮಹರ್ಷಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗೆ ಶಾಲಾ ಸಂಕೀರ್ಣವನ್ನು ರೂ.30.00 ಕೋಟಿಗಳ ಮೊತ್ತದಲ್ಲಿ ನಿರ್ಮಾಣ ಮಾಡಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.












Click it and Unblock the Notifications