BPL Ration Card: ಹೊಸ ಬಿಪಿಎಲ್‌ ಕಾರ್ಡ್‌ಗೆ ಅರ್ಜಿ ಸಲ್ಲಿಕೆ ಕುರಿತು ಮಹತ್ವದ ಮಾಹಿತಿ

BPL Ration Card: ಪ್ರಮುಖ ದಾಖಲೆಗಳಲ್ಲಿ ರೇಷನ್‌ ಕಾರ್ಡ್ ಕೂಡ ಒಂದಾಗಿದೆ. ಅದರಲ್ಲೂ ಹೊಸ ಬಿಪಿಎಲ್‌ ಕಾರ್ಡ್‌ಗೆ ತಾತ್ಕಾಲಿಕಾವಾಗಿ ಅರ್ಜಿ ಸಲ್ಲಿಕೆ ರದ್ದಾಗಿದೆ. ಹಾಗಾದ್ರೆ ಕಾರಣ ಏನು, ಯಾವಾಗಿನಿಂದ ಸ್ಥಗಿತ ಮಾಡಲಾಗಿದೆ ಹಾಗೂ ಯಾರಿಗೆಲ್ಲ ರ್ಸವರ್ ತೆರೆದುಕೊಳ್ಳುತ್ತದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.

ಈಗಾಗಲೇ ರಾಜ್ಯದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಪಡೆದಂತಹ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದು ಮಾಡಿ, ಅಂತಹವರನ್ನು ಎಪಿಎಲ್‌ ಕಾರ್ಡ್‌ಗೆ ವರ್ಗಾಹಿಸುವ ಕೆಲಸನ್ನು ಸರ್ಕಾರ ಮುಂದಾಗಿದೆ. ಇದರ ಬೆನ್ನಲ್ಲೇ ಅರ್ಹರ ಬಿಪಿಎಲ್‌ ಕಾರ್ಡ್‌ಗಳನ್ನು ಸರ್ಕಾರ ರದ್ದುಪಡಿಸಿದೆ ಎನ್ನುವ ಆಕ್ರೋಶಗಳು ಭುಗಿಲೆದ್ದಿದ್ದವು. ಬಳಿಕ ಎಚ್ಚೆತ್ತ ಸರ್ಕಾರ ಅರ್ಹರಿಗೆ ಬಿಪಿಎಲ್‌ ಕಾರ್ಡ್‌ಗಳನ್ನು ಮತ್ತೆ ಹಿಂದಿರುಗಿಸಲಾಗುತ್ತದೆ ಎಂದು ಸರ್ಕಾರ ಭರವಸೆಯನ್ನೂ ಸಹ ನೀಡಿತ್ತು.

Important information about Submission for new BPL ration card in state

ಮತ್ತೊಂದೆಡೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದ ಬಿಪಿಎಲ್‌ ಕಾರ್ಡ್‌ಗಳಿಗೆ ಅರ್ಜಿ ಸಲ್ಲಿಸುವ ಆನ್‌ಲೈನ್‌ ಪೋರ್ಟಲ್‌ ಅನ್ನು ಇನ್ನೂ ಕೂಡ ಪುನರಾರಂಭಿಸಿಲ್ಲ. ರಾಜ್ಯಾದ್ಯಂತ ಬಿಪಿಎಲ್‌ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದ ಸುಮಾರು 2.94 ಲಕ್ಷ ಮಂದಿ ಕಾರ್ಡ್‌ಗಾಗಿ ಕಾಯುತ್ತಿದ್ದಾರೆ. ಆದರೆ, ಹೊಸದಾಗಿ ಅರ್ಜಿದಾರರರಿಗೆ ಅವಕಾಶ ಇಲ್ಲ ಎಂದು ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಹೇಳುತ್ತಿದೆ.

ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬರುವ ಮೊದಲು ಸ್ಥಗಿತಗೊಳಿಸಿದ್ದ ಪೋರ್ಟಲ್‌ ಅನ್ನು ಈವರೆಗೂ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಮಕ್ತಗೊಳಿಸಿಲ್ಲ. ಆದರೆ, ಆರೋಗ್ಯ ತುರ್ತು ಇರುವವರಿಗೆ ಹಾಗೂ ಕಾರ್ಮಿಕರಿಗೆ ಮಾತ್ರ ವೆಬ್‌ಸೈಟ್‌ ತೆರೆದುಕೊಳ್ಳುತ್ತದೆ. ಹೀಗೆ ಬಂದ ಅರ್ಜಿಗಳನ್ನು ಆಯಾ ಜಿಲ್ಲೆಗಳ ಉಪನಿರ್ದೇಶಕರ ಶಿಫಾರಸಿನ ಮೇರೆಗೆ ಆಹಾರ ಇಲಾಖೆಯ ಆಯುಕ್ತರು ಅನುಮೋದನೆ ನೀಡಲಿದ್ದಾರೆ.

ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಗ್ಯಾರಂಟಿಗಳ ಲಾಭ ಪಡೆಯಲು ಜನಸಾಗರವೇ ಬಿಪಿಎಲ್‌ ಕಾರ್ಡ್‌ಗಳನ್ನು ಪಡೆಯಲು ಮುಂದಾಗಿದ್ದಾರೆ ಎನ್ನುವ ಕಾರಣದಿಂದ ಆನ್‌ಲೈನ್‌ ಪಡಿತರ ಚೀಟಿಯ ಅರ್ಜಿ ಸಲ್ಲಿಕೆ ಪ್ರಕ್ರಿಯೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿತ್ತು.

ಇದೀಗ ಈ ಹಿಂದೆ ಅರ್ಜಿ ಸಲ್ಲಿಸಲು ಯಾವ ನಿಯಮಗಳು ಜಾರಿಯಲ್ಲಿದ್ದವೋ ಅದೇ ನಿಯಮಗಳನ್ನು ಅನುಸರಿಸಲಾಗುವುದು. ಒಂದು ವೇಳೆ ಹೊಸದಾಗಿ ಮಾರ್ಗಸೂಚಿ ಬಂದರೆ, ಸರ್ಕಾರದ ಸೂಚನೆ ಮೇರೆಗೆ ಅವುಗಳನ್ನು ಅಳವಡಿಸಲಾಗುವುದು ಎಂದು ರಾಜ್ಯ ಆಹಾರ ಮತ್ತು ನಾಗರಿಕರ ಸರಬರಾಜು ಇಲಾಖೆ ತಿಳಿಸಿದೆ.

ಚುನಾವಣೆ ನೀತಿ ಸಂಹಿತೆಗೂ ಮುಂಚೆ ಅಂದರೆ 2022-23ರಲ್ಲಿ ಬಿಪಿಎಲ್‌ ಕಾರ್ಡ್‌ಗಾಗಿ 2.94 ಲಕ್ಷ ಅರ್ಜಿಗಳು ಬಂದಿವೆ. ಇವುಗಳ ಪರಿಶೀಲನೆ ನಡೆಯುತ್ತಿದೆ. ಕಾರು, ಸ್ವಂತ ಮನೆ, ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ, ಅರ್ಹರಿಗೆ ಕಾರ್ಡ್‌ಗಳನ್ನು ನೀಡಲಾಗುವುದು. ರಾಜ್ಯದಲ್ಲಿ ಸದ್ಯ ಬಿಪಿಎಲ್‌, ಅಂತ್ಯೋದಯ ಅನ್ನ ಯೋಜನೆ ಕಾರ್ಡ್‌ಗಳೂ ಸೇರಿ 1.28 ಕೋಟಿ ಕಾರ್ಡ್‌ಗಳಿವೆ. 4.42 ಕೋಟಿಗೂ ಅಧಿಕ ಫಲಾನುಭವಿಗಳಿದ್ದಾರೆ.

ಕರ್ನಾಟಕದ ಕಾಯಂ ನಿವಾಸಿಗಳಾಗಿರಬೇಕು. ಕುಟುಂಬದ ವಾರ್ಷಿಕ ಆದಾಯ 1.20 ಲಕ್ಷ ರೂ. ಮಿತಿಯಲ್ಲಿರಬೇಕು. ಇಂಥವರು ತುರ್ತು ಆರೋಗ್ಯ ಸಮಸ್ಯೆಯಿದ್ದರೆ, ಹೊಸ ಕಾರ್ಡ್‌ಗಳಿಗೆ ಅರ್ಜಿ ಸಲ್ಲಿಸಬಹುದು. ಇಲ್ಲವೇ ಆಹಾರ ಇಲಾಖೆಯ ವೆಬ್‌ಸೈಟ್‌ https://ahara.karnataka.gov.in/ನಲ್ಲಿ ಸ್ವಯಂ ಆಗಿ ಅರ್ಜಿ ಸಲ್ಲಿಕೆ ಮಾಡಬಹುದು. ಎಪಿಎಲ್‌ಕಾರ್ಡ್‌ ಪಡೆಯುವವರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ, ಕಾರ್ಡ್‌ ಪಡೆಯಬಹದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+