Ration Card: ರಾಜ್ಯದಲ್ಲಿ ಬಿಪಿಎಲ್‌, ಎಪಿಎಲ್‌ ಪಡಿತರ ಚೀಟಿದಾರರಿಗೆ ಮಹತ್ವದ ಮಾಹಿತಿ

Ration Card: ರಾಜ್ಯದಲ್ಲಿ ಈಗಾಗಲೇ ಅನರ್ಹರ ಬಳಿಯಿದ್ದ ಬಿಪಿಎಲ್‌ ಪಡಿತರ ಚೀಟಿಗಳನ್ನು ರದ್ದುಪಡಿಸುವ ಕಾರ್ಯವನ್ನು ಮುಂದಾಗಿತ್ತು. ಅಲ್ಲದೆ, ಅಂತಹವರನ್ನು ಎಪಿಎಲ್‌ಗೆ ಸೇರಿಸುವವ ಕೆಲಸವನ್ನು ಮುಂದುವರೆಸಿದೆ. ಇನ್ನು ಹೊಸ ಪಡಿತರ ಚೀಟಿಗೆ ಸರ್ಜಿ ಸಲ್ಲಿಕೆಗೂ ಅವಕಾಶ ಮಾಡಿಕೊಟ್ಟಿದೆ. ಇದರ ನಡುವೆಯೇ ಇದೀಗ ರೇಷನ್‌ ಕಾರ್ಡ್‌ದಾರರಿಗೆ ಮತ್ತಂದು ಬಿಗ್‌ ಅಪ್ಡೇಟ್‌ವೊಂದನ್ನು ಕೊಟ್ಟಿದೆ.

ಈಗಾಗಲೇ ನಕಲಿ ದಾಖಲೆ ಸೃಷ್ಟಿಸಿ ಪಡೆದಂತಹ ಬಿಪಿಎಲ್ ಕಾರ್ಡ್ ಗಳಿಗೆ ಕಡಿವಾಣ ಹಾಕಿದ್ದು, ಅಂತಹವರನ್ನು ಎಪಿಎಲ್‌ಗೆ ಸೇರ್ಪಡೆ ಮಾಡುವ ಕೆಲಸವನ್ನು ಮಾಡಿದೆ. ಇದರ ಬೆನ್ನಲ್ಲೇ ಬಡವರ ಬಳಿಯೂ ಸರ್ಕಾರ ಬಿಪಿಎಲ್‌ ಕಾರ್ಡ್‌ಗಳನ್ನು ಕಿತ್ತುಕೊಂಡು ಅನ್ಯಾಯ ಮಾಡಿದೆ ಎಂದು ರಾಜ್ಯಾದ್ಯಂತ ಆಕ್ರೋಶಗಳು ಭುಗಿಲೆದ್ದಿದ್ದವು. ಬಳಿಕ ಎಚ್ಚತ್ತ ಸರ್ಕಾರ ಅರ್ಹರಿಗೆ ಮತ್ತೆ ಬಿಪಿಎಲ್‌ ಕಾರ್ಡ್‌ಗಳನ್ನು ಹಿಂದಿರುಗಿಸಿ ಅವರಿಗೆ ಬರಬೇಕಿರುವ ಪಡಿತರವನ್ನು ಕೊಡಲಾಗುತ್ತದೆ ಅಂತಲೂ ಹೇಳಿತ್ತು.

Important Information for BPL and APL Ration Card holders In state

ಪ್ರಮುಖ ದಾಖಲೆಗಳಲ್ಲಿ ಪಡಿತರ ಚೀಟಿ ಕೂಡ ಒಂದಾಗಿದೆ. ಸರ್ಕಾರದ ಸೂಚನೆಯಂತೆ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಪಡೆಯುವ ಕುಟುಂಬದ ಸದಸ್ಯರ ಇ-ಕೆವೈಸಿಗೆ ಕೊನೇ ಅವಕಾಶ ನೀಡಿದೆ. ಒಂದು ವೇಳೆ ಕೆವೈಸಿ ಮಾಡಿಸದಿದ್ದರೆ ಅಂತಹವರಿಗೆ ಪಡಿತರ ಕೊಡುವುದನ್ನು ನಿಲ್ಲಿಸಲಾಗುತ್ತದೆ ಎಂದು ರಾಜ್ಯ ಆಹಾರ ಇಲಾಖೆ ಎಚ್ಚರಿಕೆ ಸಂದೇಶವನ್ನು ನೀಡಿದೆ.

ಪಡಿತರ ಚೀಟಿ ಫಲಾನುಭವಿಗಳ ಪೈಕಿ ಕೆಲವು ಸದಸ್ಯರು ಒಟಿಪಿ ಮೂಲಕ ತಿದ್ದುಪಡಿ ಮಾಡಿದ್ದಾರೆ. ಸದಸ್ಯರು ಜೀವಂತವಿರುವ ಬಗ್ಗೆ ಜೀವ ಮಾಪನ ನೀಡಿ ಇ-ಕೆವೈಸಿ ಮಾಡುವುದು ಕಡ್ಡಾಯ ಎಂದು ಆಹಾರ ಇಲಾಖೆ ಮಾಹಿತಿ ನೀಡಿದೆ. ಪಡಿತರ ಚೀಟಿದಾರರು ತಮ್ಮ ಕುಟುಂಬದ ಎಲ್ಲಾ ಸದಸ್ಯರ ಇ-ಕೆವೈಸಿ ಮಾಡಿಸಬೇಕಿದೆ. ಪಡಿತರ ಚೀಟಿಗಳಲ್ಲಿನ ಕುಟುಂಬದ ಮುಖ್ಯಸ್ಥ, ಸಂಬಂಧ, ಲಿಂಗ, ಜಾತಿ, ಎಲ್‌ಪಿಜಿ ವಿವರ, ಮೊಬೈಲ್‌ ಸಂಖ್ಯೆ ತುರ್ತಾಗಿ ಸಂಗ್ರಹಿಸಬೇಕು.

ಪ್ರತಿ ಜಿಲ್ಲೆಯಲ್ಲಿ ಚಾಲ್ತಿಯಲ್ಲಿರುವ ಅಂತ್ಯೋದಯ ಹಾಗೂ ಆದ್ಯತಾ ಪಡಿತರ ಚೀಟಿಗಳ ಇ-ಕೆವೈಸಿ ನೀಡಲು ಆಧಾರ್‌ ಕಾರ್ಡ್‌, ಎಲ್‌ಪಿಜಿ ದಾಖಲೆ, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಎಂಡೋಸಲ್ಫಾನ್‌ಪೀಡಿತರಂತಹ ವಿಶೇಷ ವರ್ಗದವರು ಹೊಂದಿರುವ ದೃಢಪತ್ರಗಳಿದ್ದಲ್ಲಿ ಅವುಗಳೊಂದಿಗೆ ತಮಗೆ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗೆ ತೆರಳಿ ಇ-ಕೆವೈಸಿ ಮಾಡಿಸಬೇಕು ಎಂದು ತಿಳಿಸಿದೆ.

ಆದ್ಯತೆ ಮೇರೆಗೆ ಇ -ಕೆವೈಸಿ ಮಾಡದಿರುವ ಅಂತ್ಯೋದಯ ಆದ್ಯತಾ ಪಡಿತರ ಚೀಟಿಗಳಿಗೆ ಇ-ಕೆವೈಸಿ ಕಡ್ಡಾಯವಾಗಿ ಮಾಡಿಸಲೇಬೇಕಿದೆ. ಇ-ಕೆವೈಸಿ ನೀಡಲು ಯಾವುದೇ ಶುಲ್ಕ ಇರುವುದಿಲ್ಲ. ಇದನ್ನು ನ್ಯಾಯಬೆಲೆ ಅಂಗಡಿಗಳ ಮೂಲಕ ಉಚಿತವಾಗಿ ಮಾಡಲು ಕ್ರಮ ವಹಿಸಲಾಗಿದೆ. ಆಯಾ ಜಿಲ್ಲೆಯ ಎಲ್ಲಾ ಪಡಿತರ ಚೀಟಿದಾರರು ಸಹಕರಿಸಲು ಕೋರಿದೆ. ಇ-ಕೆವೈಸಿ ಸಂಗ್ರಹಣೆಯನ್ನು ಕರ್ನಾಟಕ ಒನ್‌, ಗ್ರಾಮ ಒನ್‌ ಗಳಲ್ಲಿ ಸಹ ಮಾಡಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಗಿ ಸಂಬಂಧಪಟ್ಟ ತಾಲ್ಲೂಕು ತಹಶೀಲ್ದಾರರು ಮತ್ತು ಸಹಾಯಕ ನಿರ್ದೇಶಕರು, ಅನೌಪಚಾರಿಕ ಪಡಿತರ ಪ್ರದೇಶ ಇವರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+