ರಾಜ್ಯದ ಡಿಪ್ಲೋಮಾ, ಪದವೀಧರರಿಗೆ ಮಹತ್ವದ ಮಾಹಿತಿ

ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ. ಇದರಲ್ಲೂ ಯುವನಿಧಿ ಕೂಡ ಒಂದು ಯೋಜನೆಯಾಗಿದ್ದು, ಇದರ ಪ್ರಯೋಜನಾ ಪಡೆಯುವವರು ನೋಂದಣಿ ಮಾಡಿಕೊಳ್ಳು ಫೆಬ್ರವರಿ 15 ಅಂದರೆ ನಾಳೆಯೇ ಕೊನೇ ದಿನಾಂಕವಾಗಿದೆ. ಹಾಗಾದರೆ ಯಾರೆಲ್ಲ ಅರ್ಜಿ ಸಲ್ಲಿಸಬಹುದು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಯುವನಿಧಿ ಯೋಜನೆಯಡಿಯಲ್ಲಿ 2022-23ನೇ ಸಾಲಿನಲ್ಲಿ ತೇರ್ಗಡೆಯಾದ ಫಲಾನುಭವಿಗಳಿಗೆ ಡಿ.ಬಿ.ಟಿ. ಮೂಲಕ ಹಣ ಸಂದಾಯ ಮಾಡಲಾಗುತ್ತಿದೆ. ಅದೇ ರೀತಿ 2023-24ನೇ ಸಾಲಿನಲ್ಲಿ ತೇರ್ಗಡೆಯಾದ ಪದವಿ, ಸ್ನಾತಕೋತ್ತರ ಹಾಗೂ ಡಿಪ್ಲಮೋ ಅರ್ಹತೆ ಹೊಂದಿದವರು ಯುವನಿಧಿ ಯೋಜನೆಯ ನಿರುದ್ಯೋಗಿ ಭತ್ಯೆ ಪಡೆಯಲು ಅರ್ಜಿ ಸಲ್ಲಿಸಲು ಫೆಬ್ರವರಿ 15 ಕೊನೆಯ ದಿನವಾಗಿದೆ.

Important Information for Diploma and Degree Holders in State

ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಇದೇ ಫೆಬ್ರವರಿ 15ರ ವರೆಗೆ ವಿಶೇಷ ನೋಂದಣಿ ಅಭಿಯಾನ ಹಮ್ಮಿಕೊಂಡಿದ್ದು, ಜಿಲ್ಲೆಗಳಾದ್ಯಂತ ಇರುವ ಪದವಿ ಕಾಲೇಜುಗಳು ಹಾಗೂ ಡಿಪ್ಲಮೋ ಕಾಲೇಜುಗಳು ಮತ್ತು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ವಿಶೇಷ ನೋಂದಣಿ ಕೌಂಟರ್ ತೆರೆಯಲಾಗಿದೆ. ಅಲ್ಲದೇ, ಗ್ರಾಮ ಒನ್, ಕರ್ನಾಟಕ ಒನ್, ಚಿತ್ರದುರ್ಗ ಒನ್ ಮತ್ತು ಬಾಪೂಜಿ ಕೇಂದ್ರಗಳಲ್ಲೂ ನಿರಂತರವಾಗಿ ಯುವನಿಧಿ ನೋಂದಣಿ ಮಾಡಿಕೊಳ್ಳಲಾಗುತ್ತಿದೆ.

ನಿರುದ್ಯೋಗಿ ಯುವಕ-ಯುವತಿಯರು ಈ ವಿಶೇಷ ನೋಂದಣಿ ಅಭಿಯಾನದ ಸದುಪಯೋಗವನ್ನು ಪಡೆದುಕೊಂಡು, ಯುವನಿಧಿ ನೋಂದಣಿ ಮಾಡಿಸಿಕೊಳ್ಳಲು ಈ ಮೂಲಕ ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ವೈಶಾಲಿ ಗೇಟ್, ಸ್ಟೇಡಿಯಂ ರೋಡ್, ಚಿತ್ರದುರ್ಗ ಇಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಉದ್ಯೋಗಾಧಿಕಾರಿ ಡಿ.ರವೀಂದ್ರ ತಿಳಿಸಿದ್ದಾರೆ.

ಅರ್ಜಿ ಸಲ್ಲಿಸಬಯಸುವವರಿಗೆ ಪ್ರಮುಖ ಮಾಹಿತಿ

* ಕರ್ನಾಟಕದಲ್ಲಿ ವಾಸವಿರುವವರು (ಕನಿಷ್ಠ 06 ವರ್ಷಗಳ ವರೆಗೆ ಪದವಿ/ಸ್ನಾತಕೋತ್ತರ ಪದವಿ ಮತ್ತು ಡಿಪ್ಲೊಮದವರೆಗೆ ಅಧ್ಯಯನ ಮಾಡಿದವರು)

* ತೇರ್ಗಡೆ ಹೊಂದಿರುವ 180 ದಿನಗಳ ನಂತರವೂ ಉದ್ಯೋಗ ದೊರಕದಿದ್ದರೆ, ಉನ್ನತ ವ್ಯಾಸಂಗಕ್ಕೆ ದಾಖಲಾಗದೆ ಇರುವ ಅಭ್ಯರ್ಥಿಗಳು ಈ ಯೋಜನೆಗೆ ಅರ್ಹರಿರುತ್ತಾರೆ.

* ಸ್ವಯಂ ಉದ್ಯೋಗ ಹೊಂದಿಲ್ಲದ ಅಭ್ಯರ್ಥಿಗಳು.

* ಇಲಾಖಾ ವ್ಯಾಪ್ತಿಯ ಎಲ್ಲಾ ಪದವಿ/ಸ್ನಾತಕೋತ್ತರ ಪದವಿ, ಇಂಜಿನಿಯರಿಂಗ್ ಹಾಗೂ ಡಿಪ್ಲೋಮ ಕಾಲೇಜುಗಳ ಪ್ರಾಂಶುಪಾಲರುಗಳು 2023 ಹಾಗೂ 2024ನೇ ಸಾಲಿನಲ್ಲಿ ತಮ್ಮ ಕಾಲೇಜುಗಳಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳ ನೋಂದಣಿಗಾಗಿ ತಮ್ಮ ಕಾಲೇಜುಗಳಲ್ಲಿ ಯುವನಿಧಿ ವಿಶೇಷ ನೋಂದಣಿ ಸಹಾಯ ಕೇಂದ್ರಗಳನ್ನು ತೆರೆಯಬೇಕು. ಕೇಂದ್ರಕ್ಕೆ ಅತ್ಯವಶ್ಯಕವಾಗಿ ಬೇಕಾದ ಗಣಕಯಂತ್ರ ವ್ಯವಸ್ಥೆ ಹಾಗೂ ಸಿಬ್ಬಂದಿ ನಿಯೋಜನೆ ಮಾಡಿಕೊಳ್ಳಲು ಸೂಚಿಸಲಾಗಿದೆ. ಕಾಲೇಜು ಹಾಗೂ ಸ್ಥಳೀಯ ಮಟ್ಟದಲ್ಲಿ ಬ್ಯಾನರ್/ಪೋಸ್ಟರ್‌ಗಳನ್ನು ಅಳವಡಿಸಿ, ವ್ಯಾಪಕ ಪ್ರಚಾರವನ್ನ ಕೈಗೊಂಡು ಅರ್ಹ ಅಭ್ಯರ್ಥಿಗಳಿಂದ ಗರಿಷ್ಠ ಮಟ್ಟದ ನೋಂದಣಿ ಮಾಡಿಸುವಂತೆ ಕ್ರಮ ವಹಿಸಲು ಸೂಚಿಸಲಾಗಿದೆ.

ಕಾಲೇಜುಗಳಲ್ಲಿ ಪ್ರಾಂಶುಪಾಲರು ಯುವನಿಧಿ ವಿಶೇಷ ನೋಂದಣಿ ಅಭಿಯಾನಕ್ಕಾಗಿ ಕಾಲೇಜಿನ ಪ್ಲೇಸ್‌ಮೆಂಟ್ ಸೆಲ್ ಅಧಿಕಾರಿಗಳು ಹಾಗೂ ಐ.ಟಿ ಕೋ-ಆರ್ಡಿನೇಟರ್‌ಗಳಿಗೆ ಉಸ್ತುವರಿಯನ್ನು ವಹಿಸಿ ಅರ್ಹ ಅಭ್ಯರ್ಥಿಗಳಿಂದ ಅತಿ ಹೆಚ್ಚು ನೋಂದಣಿ ಮಾಡಿಕೊಳ್ಳಲು ಅನುಕೂಲ ಕಲ್ಪಿಸುವಂತೆ ಈ ಮೂಲಕ ಸೂಚಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಯುವನಿಧಿ ಯೋಜನೆಯ https://yuvanidhischeme.in/ಗೆ ಭೇಟಿ ನೀಡಬಹುದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+