Government Employees: ಮನೆ ನಿರ್ಮಾಣದ ಕುರಿತು ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ

Government Employees: ರಾಜ್ಯದ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿಯನ್ನು ಸಿಗುತ್ತಲೇ ಇರುತ್ತದೆ. ಹಾಗೆಯೇ ಇದೀಗ ಸರ್ಕಾರಿ ನೌಕರರು ಕಟ್ಟಡ ನಿರ್ಮಾಣಕ್ಕಾಗಿ ಅಥವಾ ಮನೆ ನಿರ್ಮಾಣಕ್ಕಾಗಿ ಅನುಮತಿ ನೀಡುವ ಆದೇಶದ ಕುರಿತು ಮಾಹಿತಿಯನ್ನು ನೀಡಲಾಗಿದೆ.

ಕರ್ನಾಟಕ ರಾಜ್ಯ ನಾಗರಿಕ ಸೇವಾ (ನಡತೆ) ನಿಯಮಗಳು, 2021, ಜನವರಿ 7ರಿಂದ ಜಾರಿಗೆ ಬಂದಿರುತ್ತದೆ. ಈ ನಿಯಮಗಳ ನಿಯಮ 24(3) ರ ಅನುಸಾರ ತನ್ನೊಂದಿಗೆ ಅಧಿಕೃತ ವ್ಯವಹಾರವನ್ನು ಹೊಂದಿರುವ ವ್ಯಕ್ತಿಯನ್ನು ಹೊರತುಪಡಿಸಿ.

Important information for government employees on house construction

ಬೇರೆ ಮೂಲಗಳಿಂದ ತನ್ನ ಹೆಸರಿನಲ್ಲಾಗಲಿ ಅಥವಾ ತನ್ನ ಕುಟುಂಬದ ಯಾವುದೇ ಸದಸ್ಯನ ಹೆಸರಿನಲ್ಲಾಗಲಿ ಗುತ್ತಿಗೆಯ, ಅಡಮಾನದ, ಖರೀದಿಯ, ಮಾರಾಟದ, ಉಡುಗೊರೆಯ ಮೂಲಕ ಅಥವಾ ಅನ್ಯಥಾ ಸ್ಥಿರ ಸ್ವತ್ತನ್ನು ಅರ್ಜಿ ಸಲ್ಲಿಕೆ ಅಥವಾ ವಿಲೇ ಮಾಡುವ ಬಗ್ಗೆ ನಿಯಮಿಸಲಾದ ಪ್ರಾಧಿಕಾರಕ್ಕೆ ಮೊದಲೇ ತಿಳಿಸಬೇಕಾಗುತ್ತದೆ.

ಒಂದು ವೇಳೆ ಸಮರ್ಥನೀಯ ಕಾರಣಗಳಿಂದಾಗಿ ನಿಯಮಿತ ಪ್ರಾಧಿಕಾರಕ್ಕೆ ಮೊದಲೇ ತಿಳಿಸದೇ ಯಾವುದೇ ಸ್ಥಿರ ಸ್ವತ್ತನ್ನು ಅರ್ಜಿ ಸಲ್ಲಿಸಿದಲ್ಲಿ ಅಂತಹ ವ್ಯವಹಾರ ಕೈಗೊಂಡ ಎರಡು ತಿಂಗಳೊಳಗಾಗಿ ವಿವರಗಳು ಹಾಗೂ ಪೂರಕ ದಾಖಲೆಗಳು, ಸಮರ್ಥನೀಯ ಕಾರಣಗಳೊಂದಿಗೆ ನಿಯಮಿತ ಪ್ರಾಧಿಕಾರಿಗೆ ವರದಿ ಮಾಡಲು ಅವಕಾಶ ಕಲ್ಪಿಸಲಾಗಿದೆ.

ಅಲ್ಲದೆ, ಸರ್ಕಾರಿ ನೌಕರನು ನೀಡಿದ ಕಾರಣಗಳು ಅಂಗೀಕಾರಾರ್ಹವೆಂದು ತೃಪ್ತಿಪಟ್ಟಲ್ಲಿ ಸಲ್ಲಿಸಿದ ದಾಖಲೆಗಳು ಹಾಗೂ ವಿವರಗಳನ್ನು ಪರಿಶೀಲಿಸಿ ಅಂತಹ ವ್ಯವಹರಣೆಯನ್ನು ಘಟನೋತ್ತರವಾಗಿ ನಿಯಮಿತ ಪ್ರಾಧಿಕಾರವು ಟಿಪ್ಪಣಿ ಮಾಡಿಕೊಳ್ಳಬಹುದಾಗಿದೆ. ತನ್ನೊಂದಿಗೆ ಅಧಿಕೃತ ವ್ಯವಹಾರವನ್ನು ಹೊಂದಿರುವ ವ್ಯಕ್ತಿಯೊಂದಿಗಿನ ವ್ಯವಹಾರ ಆದರೆ ಮಾತ್ರ ಸರ್ಕಾರಿ ನೌಕರನಿಗೆ ನಿಯಮಿಸಲಾದ ಪ್ರಾಧಿಕಾರಿಯ ಪೂರ್ವ ಮಂಜೂರಾತಿ ಅಗತ್ಯ ಇರುತ್ತದೆ.

2021ರ ನಿಯಮಗಳ ನಿಯಮ 24(4)ರ ಅನುಸಾರ ಸರ್ಕಾರಿ ನೌಕರನು ತನ್ನ ಸ್ವಂತ ಹೆಸರಿನಲ್ಲಾಗಲೀ ಅಥವಾ ತನ್ನ ಕುಟುಂಬದ ಯಾರೇ ಸದಸ್ಯರ ಹೆಸರಿನಲ್ಲಾಗಲೀ ಹೊಂದಿರುವ ಅಥವಾ ಧಾನ ಮಾಡಿರುವ ಚರಾಸ್ತಿಗೆ ಸಬಂಧಪಟ್ಟ ಪ್ರತಿಯೊಂದು ವ್ಯವಹಾರ ಆತನ ಮಾಸಿಕ ಮೂಲವೇತನ ಮೀರಿದರೆ ಪ್ರಾಧಿಕಾರಕ್ಕೆ ವರದಿ ಮಾಡಬೇಕಾಗುತ್ತದೆ.

ದಿನಗೂಲಿ ನೌಕರರಿಗೆ ಹೈಕೋರ್ಟ್‌ ಗುಡ್‌ ನ್ಯೂಸ್‌: ರಾಜ್ಯದಲ್ಲಿ ದಿನಗೂಲಿ ನೌಕರರಾಗಿ ತುಂಬಾ ವರ್ಷಗಳಿಂದಲೂ ಸೇವೆ ಸಲ್ಲಿಸುತ್ತಿರುವವರು ಇದ್ದಾರೆ. ಇವರು ಯಾವಾಗ ನಮ್ಮ ಹುದ್ದೆಗಳು ಖಾಯಂ ಮಾಡುತ್ತಾರೆ ಎಂದು ಕಾತರದಿಂದ ಕಾಯುತ್ತಿದ್ದಾರೆ. ಇದೀಗ ಈ ವಿಚಾರದಲ್ಲಿ ಹೈಕೋರ್ಟ್‌ ಮಹತ್ವದ ಆದೇಶವೊಂದನ್ನು ಹೊರಡಿಸಿದೆ. ಹಾಗಾದ್ರೆ ಆದೇಶದಲ್ಲಿ ಏನಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.

ದಿನಗೂಲಿ ಆಧಾರದಲ್ಲಿ ಸತತ 30 ವರ್ಷ ಅರಣ್ಯ ವೀಕ್ಷಕ/ಚಾಲಕ ಉದ್ಯೋಗದಲ್ಲಿ ಕಾರ್ಯನಿರ್ವಹಿಸಿದ ದಿನಗೂಲಿ ನೌಕರನ ಸೇವೆ ಕಾಯಂಗೊಳಿಸಲು ರಾಜ್ಯ ಸರ್ಕಾರ ಮತ್ತು ಅರಣ್ಯ ಇಲಾಖೆಗೆ ಹೈಕೋರ್ಟ್ ಆದೇಶಿಸಿದೆ. ಜೊತೆಗೆ ಮಂಜೂರಾದ ಹುದ್ದೆಯಲ್ಲಿ 10 ವರ್ಷಗಳ ಕಾಲ ನಿರಂತರವಾಗಿ ಕೆಲಸ ಮಾಡಿದ ಉದ್ಯೋಗಿಯು ಖಾಯಂಗೆ ಅರ್ಹ ಎಂದು ತೀರ್ಪು ನೀಡಿದೆ.

10 ವರ್ಷ ನಿರಂತರವಾಗಿ ಕೆಲಸ ಮಾಡಿದ ಉದ್ಯೋಗಿ ಖಾಯಂಗೆ ಅರ್ಹ ಎಂದು ಹೈಕೋರ್ಟ್ ಮಹತ್ವದ ತೀರ್ಪುನೀಡಿದೆ. ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಮತ್ತು ನ್ಯಾಯಮೂರ್ತಿ ರಾಮಚಂದ್ರ ಡಿ ಹುದ್ದಾರ್ ಅವರನ್ನೊಳಗೊಂಡ ಕರ್ನಾಟಕ ಹೈಕೋರ್ಟ್‌ ವಿಭಾಗೀಯ ಪೀಠವು ಈ ಆದೇಶವನ್ನು ಹೊರಡಿಸಿಸೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+