Government Employees: ಕೇಂದ್ರ ಮಾದರಿ ವೇತನ ಶ್ರೇಣಿ ಜಾರಿ ಬಗ್ಗೆ ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ
Government Employees: ಸರ್ಕಾರಿ ನೌಕರರಿಗೆ ಹಲವು ಸೌಲಭ್ಯಗಳನ್ನು ನೀಡಲಾಗುತ್ತದೆ. ಹಾಗೆಯೇ ಇದೀಗ ರಾಜ್ಯ ಸರ್ಕಾರಿ ನೌಕರರಿಗೆ ಕೇಂದ್ರ ಮಾದರಿ ವೇತನ ಶ್ರೇಣಿ ಜಾರಿ ಬಗ್ಗೆ ಮಹತ್ವದ ಅಪ್ಡೇಟ್‌ವೊಂದನ್ನು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ನೀಡಿದ್ದಾರೆ. ಹಾಗಾದ್ರೆ ಏನು ಹೇಳಿದ್ದಾರೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಶಿವಮೊಗ್ಗದಲ್ಲಿ ಮಾತನಾಡಿದ ಸಿ.ಎಸ್. ಷಡಾಕ್ಷರಿ ಅವರು, ರಾಜ್ಯ ಸರ್ಕಾರಿ ನೌಕರರಿಗೆ 2026 -27ನೇ ಸಾಲಿನಲ್ಲಿ ಕೇಂದ್ರ ಮಾದರಿ ವೇತನ ಶ್ರೇಣಿ ಜಾರಿಗೊಳಿಸುವ ವಿಶ್ವಾಸ ಇದೆ. ಕೇಂದ್ರದ ವೇತನ ಶ್ರೇಣಿ ಜಾರಿಗೊಳಿಸಲು ಅಗತ್ಯ ಇರುವ ಎಲ್ಲಾ ಪ್ರಯತ್ನವನ್ನು ಸಂಘಟನೆ ಮಾಡುತ್ತಿದೆ. ಅದು ಜಾರಿ ಆಗುವ ವಿಶ್ವಾಸವಿದೆ ಎಂದು ಹೇಳಿದರು.

ನಮ್ಮ ಸಂಘದ ಒತ್ತಡ ಹಿನ್ನೆಲೆ ಹೊಸ ಪಿಂಚಣಿ ವ್ಯವಸ್ಥೆ ರದ್ದುಗೊಳಿಸಿ ಹಳೆ ಪಿಂಚಣಿ ಜಾರಿ ಮಾಡಲಿ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ. ಸಾಧಕ-ಬಾಧಕಗಳ ಪರಿಶೀಲನೆಗೆ ಹಿರಿಯ ಐಎಎಸ್ ಅಧಿಕಾರಿ ಅಂಜುಂ ಪರ್ವೇಜ್ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಈ ಸಮಿತಿಯು ಶೀಘ್ರವೇ ವರದಿ ಸಲ್ಲಿಸಲಿದೆ. ಆ ವರದಿಯಂತೆ ಸರ್ಕಾರ ಪಿಂಚಣಿ ವ್ಯವಸ್ಥೆ ಜಾರಿಗೊಳಿಸುವ ನಿರೀಕ್ಷೆಯಲ್ಲಿ ಇದ್ದೇವೆ ಎಂದು ಹೇಳಿದರು.
ಸರ್ಕಾರಿ ನೌಕರರು ಬ್ಯಾಂಕುಗಳಲ್ಲಿ ವೇತನ ಆಧಾರಿತ ಬ್ಯಾಂಕ್ ಖಾತೆ ತೆರೆಯಲು ತಕ್ಷಣ ಮುಂದಾಗಬೇಕು. ಇದರಿಂದ 1.20 ಕೋಟಿ ರೂಪಾಯಿ ಮೊತ್ತದ ವಿಮಾ ಸೌಲಭ್ಯ, ಮಕ್ಕಳ ಶಿಕ್ಷಣಕ್ಕೆ ಸಾಲ ಸೌಲಭ್ಯ ಪಡೆದುಕೊಳ್ಳಲು ಪ್ರಯೋಜನೆ ಆದಂತಾಗುತ್ತದೆ ಎಂದು ತಿಳಿಸಿದರು.
ಸಾಲಸೌಲಭ್ಯ ಬಗ್ಗೆ ಶುಭ ಸುದ್ದಿ: ಕಡಿಮೆ ಬಡ್ಡಿ ದರದ ವಿಚಾರವಾಗಿ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಬಿಗ್ ಗುಡ್ ನ್ಯೂಸ್‌ವೊಂದನ್ನು ನೀಡಿದೆ. ಹಾಗಾದ್ರೆ ಅದೇನು ಹಾಗೂ ಏನೆಲ್ಲಾ ಅನುಕೂಲಗಳಿವೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಸಾಮಾನ್ಯವಾಗಿ ರೈತರಿಗೆ ಕಡಿಮೆ ಬಡ್ಡಿದರ, ಬಡ್ಡಿರಹಿತ ಸಾಲವನ್ನು ಸರ್ಕಾರದಿಂದ ನೀಡಲಾಗುತ್ತದೆ. ಹಾಗೆಯೇ ಸರ್ಕಾರಿ ನೌಕರಿಗೂ ಸಾಲ ನೀಡುವ ಬಗ್ಗೆ ಸರ್ಕಾರ ಮಹತ್ವದ ಅಪ್ಡೇಟ್‌ವೊಂದನ್ನು ನೀಡಿದೆ.
ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ದೊಡ್ಡ ಕೊಡುಗೆಯೊಂದನ್ನು ನೀಡಲು ನಿರ್ಧರಿಸಿದೆ. ಅದೇ ಸರ್ಕಾರಿ ನೌಕರರ ಸಂಬಳ ಪ್ಯಾಕೇಜ್ ಖಾತೆಯಡಿ ಬ್ಯಾಂಕುಗಳು ಕೊಡುತ್ತಿರುವ ಸೌಲಭ್ಯಗಳ ಜೊತೆ ಕಡಿಮೆ ಬಡ್ಡಿದರದಲ್ಲಿ ಗೃಹ ಸಾಲ, ವೈಯಕ್ತಿಕ ಸಾಲ ಸೌಲಭ್ಯ ಕುರಿತು ಏಪ್ರಿಲ್ 15ರಂದು ಬ್ಯಾಂಕ್ ಅಧಿಕಾರಿಗಳ ಜೊತೆಗೆ ಸಭೆ ಕರೆಯಲಾಗಿದೆ.
ಇನ್ನು ಈ ಕುರಿತು ರಾಜ್ಯ ಸರ್ಕಾರದಿಂದ ಸಭಾ ಸೂಚನಾ ಪತ್ರವನ್ನು ಹೊರಡಿಸಲಾಗಿದೆ. ರಾಜ್ಯ ಸಚಿವ ಸಂಪುಟದ ತೀರ್ಮಾಮ ಮಾಡಿದಂತೆ ಅಧಿಕಾರಿ, ನೌಕರರು ಮತ್ತು ಅವಲಂಬಿತ ಕುಟುಂಬದ ಸದಸ್ಯರ ಹಿತಾಸಕ್ತಿಗಳನ್ನು ರಕ್ಷಣೆ ಮಾಡುವ ಉದ್ದೇಶದಿಮದ ವಿವಿಧ ಬ್ಯಾಂಕುಗಳು ಒದಗಿಸುವ ವಿಶಿಷ್ಟ ಸೌಲಭ್ಯಗಳನ್ನು ಪಡೆಯಲು ಉಪಯೋಗ ಆಗುವಂತೆ ವೇತನ ಪ್ಯಾಕೇಜ್‌ಗಳ ಅಡಿಯಲ್ಲಿ ಖಾತೆಗಳನ್ನು ತೆರೆಯುವುದು, ಆಯ್ಕೆ ಮಾಡಿಕೊಳ್ಳುವುದನ್ನು ರಾಜ್ಯ ಸರ್ಕಾರವು ಕಡ್ಡಾಯಗೊಳಿಸಿದೆ ಎಂದು ತಿಳಿಸಿದೆ.
ಸದರಿ ಯೋಜನೆಯಡಿ ಸರ್ಕಾರದ ಎಲ್ಲಾ ಅಧಿಕಾರಿಗಳು/ನೌಕರರು ಬ್ಯಾಂಕುಗಳು ಕೊಡುತ್ತಿರುವ ಸಂಬಳ ಪ್ಯಾಕೇಜು ಖಾತೆಯಾಗಿ ಪರಿವರ್ತಿಸಿಕೊಳ್ಳಲು ಬ್ಯಾಂಕುಗಳು ಅನುಕೂಲ ಮಾಡಿಕೊಡಬೇಕಾಗಿದ್ದು, ಈ ವಿಚಾರದಲ್ಲಿ ಸಮಸ್ಯೆಗಳು ಇದ್ದರೆ ಅವುಗಳನ್ನು ನಿವಾರಿಸುವುದು ಅವಶ್ಯಕ ಆಗಿರುತ್ತದೆ ಎಂದು ತಿಳಿಸಿದೆ.












Click it and Unblock the Notifications