BPL, APL Card: ಬಿಪಿಎಲ್‌, ಎಪಿಎಲ್‌ ಕಾರ್ಡ್‌ಗಳ ಬಗ್ಗೆ ಮಹತ್ವದ ಮಾಹಿತಿ ನೀಡಿದ ಆಹಾರ ಸಚಿವ

BPL, APL Card: ರಾಜ್ಯದಲ್ಲಿ ಸರ್ಕಾರವು ನಕಲಿ ದಾಖಲೆ ಸೃಷ್ಟಿಸಿ ಪಡೆದ ಬಿಜೆಪಿ ಕಾರ್ಡ್‌ಗಳನ್ನು ರದ್ದು ಮಾಡಲು ಮುಂದಾಗಿತ್ತು. ಇದರ ಬೆನ್ನಲ್ಲೇ ಸರ್ಕಾರದ ವಿರುದ್ಧ ಆಕ್ರೋಶಗಳು ಭುಗಿಲೆದ್ದಿದ್ದವು. ಬಳಿಕ ಇದೀಗ ಈ ಬಗ್ಗೆ ಆಹಾರ ಇಲಾಖೆ ಸಚಿವ ಕೆ.ಎಚ್‌.ಮುನಿಯಪ್ಪ ಅವರು ಮಹತ್ವದ ಮಾಹಿತಿಯೊಂದನ್ನು ನೀಡಿದ್ದಾರೆ. ಮಾಹಿತಿ ಇಲ್ಲಿದೆ ಗಮನಿಸಿ.

ರಾಜ್ಯದಲ್ಲಿನ ಬಡತನ ರೇಖೆಗಿಂತ ಮೇಲಿರುವವರ ಬಿಪಿಎಲ್ ಕಾರ್ಡ್‌ಗಳನ್ನು ರದ್ದು ಮಾಡಲಾಗುತ್ತದೆ ಎಂಬ ಚರ್ಚೆ ಜೋರಾಗಿ ನಡೆದಿತ್ತು. ಆದರೆ ಇದೀಗ ಯಾವುದೇ ಕಾರ್ಡ್‌ಗಳನ್ನು ರದ್ದುಪಡಿಸುವುದಿಲ್ಲ ಎಂದು ಸ್ಪಷ್ಟನೆ ನೀಡಿರುವ ಸಚಿವ ಅನರ್ಹರನ್ನು ಎಪಿಎಲ್‌ಗೆ ವರ್ಗಾವಣೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.

Important Information on BPL APL Cards by K H Muniyappa

ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಡಿತರ ಚೀಟಿ ವಿಚಾರವನ್ನು ಸಮ್ಮನೇ ರಾಜಕೀಯ ಉದ್ದೇಶಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಸರ್ಕಾರ ಯಾವುದೇ ಬಿಪಿಎಲ್ ಅಥವಾ ಎಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸಿಲ್ಲ. ಅನರ್ಹ ಬಿಪಿಎಲ್ ಕಾರ್ಡುದಾರರನ್ನು ರದ್ದು ಮಾಡಿಲ್ಲ, ಬದಲಾಗಿ ಎಪಿಎಲ್‌ಗೆ ವರ್ಗಾವಣೆ ಮಾಡಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಸದ್ಯ ಜನಸಂಖ್ಯೆಯ ಸುಮಾರು ಶೇಕಡ 80ರಷ್ಟು ಜನರು ಬಿಪಿಎಲ್ ಕಾರ್ಡ್‌ಗಳನ್ನು ಹೊಂದಿದ್ದಾರೆ. ಇನ್ನು ಕೆಲವು ಅನರ್ಹರು ಬಿಪಿಎಲ್ ಕಾರ್ಡ್‌ಗಳನ್ನು ಹೊಂದಿದ್ದಾರೆ ಎನ್ನುವ ಮಾಹಿತಿ ಬಂದಿದೆ. ಅಂತಹ ಕಾರ್ಡ್‌ಗಳನ್ನು ಮತ್ತೆ ವರ್ಗೀಕರಿಸುವ ಕೆಲಸವನ್ನು ಮಾಡುತ್ತಿದ್ದೇವೆ. ಅವುಗಳನ್ನು ಸಂಪೂರ್ಣವಾಗಿ ರದ್ದುಗೊಳಿಸುವುದಿಲ್ಲ, ಎಪಿಎಲ್‌ಗೆ ಸೇರಿಸಲಾಗುತ್ತದೆ ಎಂದು ಹೇಳಿದ್ದಾರೆ.

ಅದರಲ್ಲೂ ಸ್ಥಿರ ಆರ್ಥಿಕ ಹಿನ್ನೆಲೆಯುಳ್ಳ ವ್ಯಕ್ತಿಗಳು, ಆದಾಯ ತೆರಿಗೆ ಪಾವತಿದಾರರು ಸೇರಿದಂತೆ ಬಿಪಿಎಲ್ ಕಾರ್ಡ್‌ಗೆ ಅನರ್ಹರಾಗಿರುವವರನ್ನು ಎಪಿಎಲ್‌ಗೆ ವರ್ಗಾವಣೆ ಮಾಡಲಾಗುತ್ತದೆ. ಎಪಿಎಲ್ ಕಾರ್ಡುದಾರರು ಅವರಿಗೆ ನಿಗದಿತ ಪ್ರಯೋಜನಗಳನ್ನು ಪಡೆಯುವುದನ್ನು ಮುಂದುವರೆಸುತ್ತಾರೆ ಎಂದು ಹೇಳಿದರು.

ರಾಜ್ಯದಲ್ಲಿರುವ ಬಿಪಿಎಲ್‌ ಕಾರ್ಡುದಾರರ ಸಂಖ್ಯೆ ಎಷ್ಟು?: ತಮಿಳುನಾಡು, ಕೇರಳ, ಆಂಧ್ರಪ್ರದೇಶ ಮತ್ತು ತೆಲಂಗಾಣದಂತಹ ರಾಜ್ಯಗಳಲ್ಲಿ ಬಿಪಿಎಲ್ ಕಾರ್ಡುದಾರರ ಸಂಖ್ಯೆ ಶೇಕಡಾ 50ಕ್ಕಿಂತ ಕಡಿಮೆ ಇದೆ. ಆದರೆ, ನಮ್ಮ ರಾಜ್ಯವು ಸುಮಾರು ಶೇಕಡ 80ರಷ್ಟು ಬಿಪಿಎಲ್ ಕಾರ್ಡುದಾರರನ್ನು ಹೊಂದಿದೆ. ರಾಜ್ಯದ 6.5 ಕೋಟಿ ಜನಸಂಖ್ಯೆಯಲ್ಲಿ 4.6 ಕೋಟಿ ಫಲಾನುಭವಿಗಳಾಗಿದ್ದಾರೆ ಎಂದು ಹೇಳಿದ್ದಾರೆ.

"ಅನರ್ಹ ಬಿಪಿಎಲ್ ಕಾರ್ಡುದಾರರನ್ನು ಎಪಿಎಲ್‌ಗೆ ಸೇರಿಸುವ ಕೆಲಸವನ್ನು ಪ್ರಾರಂಭಿಸಿದ್ದೇವೆ. ಈ ಹಿನ್ನೆಲೆ ಕೆಲವರು ಹೊಸ ಬಿಪಿಎಲ್ ಕಾರ್ಡ್ ಅನ್ನು ಸ್ವೀಕರಿಸದಿರಬಹುದು ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+