Government employee: ರಾಜ್ಯದ ಸರ್ಕಾರಿ ನೌಕರರಿಗೆ ರಜೆ ಕುರಿತು ಮಹತ್ವದ ಮಾಹಿತಿ
Government employee: ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಆಗಾಗ ಗುಡ್ ನ್ಯೂಸ್ ನೀಡುತ್ತಲೇ ಇರುತ್ತದೆ. ಹಾಗೆಯೇ ಇದಿಗ ಸರ್ಕಾರಿ ನೌಕರರಿಗೆ ಸಿಗುವ ರಜಾ ಸೌಲಭ್ಯಗಳು ಹಾಗೂ ನಿಯಮಗಳ ಕುರಿತಂತೆ ಮಹತ್ವದ ಮಾಹಿತಿ ನೀಡಿದೆ. ಗಳಿಕೆ ರಜೆ, ಶಿಶುಪಾಲನಾ ರಜೆ ಸೇರಿ ಹಲವು ರಜೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ರಜೆಯನ್ನು ಹಕ್ಕೆಂದು ಪಡೆಯಲಾಗದು. ರಜೆಯನ್ನು ಮಂಜೂರು ಮಾಡುವ ಅಧಿಕಾರಿಯು ಸಾರ್ವಜನಿಕ ಹಿತ ದೃಷ್ಟಿಯಿಂದ ರಜೆ ಮಂಜೂರು ಮಾಡಬಹುದು ಅಥವಾ ತಿರಸ್ಕರಿಸಬಹದಾಗಿದೆ.

ರಜೆಯ ಸ್ವರೂಪವನ್ನು ಮಾರ್ಪಡಿಸುವ ಹಾಗಿಲ್ಲ. ಸತತವಾಗಿ 4 ತಿಂಗಳಿಗಿಂತಲೂ ಹೆಚ್ಚಾಗಿ ಅನಧಿಕೃತ ಗೈರು ಹಾಜರಾದಲ್ಲಿ, ಅಂತಹ ಸರ್ಕಾರಿ ನೌಕರನನ್ನು ವಿಚಾರಣೆಗೆ ಒಳಪಡಿಸಿ (ಸಿಸಿಎ) ಪ್ರಕಾರ ಸೇವೆಯಿಂದ ವಜಾ ಮಾಡಬಹುದು. ಅನುಮತಿ ಇಲ್ಲದೆ, ಗೈರು ಹಾಜರಾದಲ್ಲಿ ಅನಧಿಕೃತ ಗೈರು ಹಾಜರಿ ಎಂದು ಪರಿಗಣಿಸಿ ಸಂಬಳವನ್ನು ಕಡಿತ ಮಾಡಲಾಗುವುದು.
ಹುಸೇನ್ ಬೇಡಿಕೆ ಏನು?: ಇತ್ತೀಚಿನ ದಿನಗಳಲ್ಲಿ ಸರ್ಕಾರಿ ನೌಕರರ ರಜೆ ವಿಚಾರವಾಗಿ ಚರ್ಚೆಗಳು ದೊಡ್ಡ ಮಟ್ಟದಲ್ಲಿ ನಡೆಯುತ್ತಿವೆ. ಕ್ಷೇತ್ರವಾರು ರಜೆಗಳ ಬೇಡಿಕೆಯನ್ನು ಸರ್ಕಾರದ ಮುಂದೆ ಇಡುತ್ತಿದ್ದಾರೆ. ಇದೀಗ ತೆಲಂಗಾಣದಂತೆ ಕರ್ನಾಕದಲ್ಲೂ ಈ ತಿಂಗಳಲ್ಲಿ ಕೆಲಸದ ಅವಧಿ ಕಡಿಮೆ ಮಾಡಿ ಬೇಗ ಮನೆಗೆ ತೆರಳುವಂತೆ ಅವಕಾಶ ಮಾಡಿಕೊಡಿ ಎಂದು ಕೆಪಿಸಿಸಿ ಉಪಾಧ್ಯಕ್ಷ ಹುಸೇನ್ ಸಿಎಂ ಸಿದ್ದರಾಮಯ್ಯ ಅವರನ್ನು
ಇತ್ತೀಚೆಗಷ್ಟೇ ಒತ್ತಾಯಿಸಿತ್ತು.
ತೆಲಂಗಾಣದಂತೆಯೇ ಮುಸ್ಲಿಂ ಸರ್ಕಾರಿ ನೌಕರರಿಗೆ ರಂಜಾನ್ ಸಮಯದಲ್ಲಿ ಸಂಜೆ 4 ಗಂಟೆಯ ನಂತರ ಎರಡು ಗಂಟೆ ಬೇಗ ಕರ್ತವ್ಯದಿಂದ ಮನೆಗೆ ತೆರಳಲು ಅವಕಾಶ ಕಲ್ಲಿಸಿ ಕೊಡುವಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸಿಎಂ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿತ್ತು.
ಆಂಧ್ರಪ್ರದೇಶ ಮತ್ತು ತೆಲಂಗಾಣ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ಮುಸ್ಲಿಂ ಸರ್ಕಾರಿ ನೌಕರರಿಗೆ ರಂಜಾನ್ ಸಂಮಯದಲ್ಲಿ 2 ಗಂಟೆ ಮುಂಚಿತವಾಗಿ ಕರ್ತವ್ಯದಿಂದ ತೆರಳಲು ಅವಕಾಶ ಕಲ್ಪಿಸುವಂತೆ ಕೆಪಿಸಿಸಿ ಉಪಾಧ್ಯಕ್ಷರಾದ ಸೈಯದ್ ಅಹ್ಮದ್ ಮತ್ತು ಎಆರ್‌ಎಂ ಹುಸೇನ್ ಅವರು ಸಿಎಂ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಿದ್ದರು.
ಈ ಬೇಡಿಕೆಗೆ ಸಂಬಂಧಿಸಿದಂತೆ ಸಿಎಂ ರಾಜಕೀಯ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ನಜೀರ್ ಅಹ್ಮದ್ ಅವರಿಗೂ ಪತ್ರ ಬರೆದಿದ್ದರು. ಆಂಧ್ರಪ್ರದೇಶ ಮತ್ತು ತೆಲಂಗಾಣ ಸರ್ಕಾರಗಳು ಮುಸ್ಲಿಂ ನೌಕರರು ಒಂದು ಗಂಟೆ ಮುಂಚಿತವಾಗಿ ಕರ್ತವ್ಯದಿಂದ ತೆರಳಲು ಅವಕಾಶ ಮಾಡಿಕೊಟ್ಟಿವೆ. ಇದೇ ರೀತಿ ಅವಕಾಶವನ್ನು ಕರ್ನಾಟಕದಲ್ಲಿಯೂ ಕಲ್ಪಿಸಿಕೊಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು.
ಮಾರ್ಚ್ 3ರಿಂದ 31ರ ವರೆಗೆ ಆಚರಣೆ ಮಾಡಲಾಗುವ ರಂಜಾನ್ ತಿಂಗಳಲ್ಲಿ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸರ್ಕಾರಿ ಮುಸ್ಲಿಂ ನೌಕರರು, ಶಿಕ್ಷಕರು, ಗುತ್ತಿಗೆ, ಹೊರಗುತ್ತಿಗೆ, ನಿಗಮ ಮಂಡಳಿಗಳು ಮತ್ತು ಸಾರ್ವಜನಿಕ ವಲಯದ ನೌಕರರು ಸಂಜೆ 4 ಗಂಟೆಗೆ ಮನೆಗೆ ತೆರಳಲು ತೆಲಂಗಾಣ ಸರ್ಕಾರ ಅವಕಾಶ ಕಲ್ಪಿಸಿದೆ. ತುರ್ತು ಸೇವೆಯಲ್ಲಿರುವವರಿಗೆ ಹಾಗೂ ಸರ್ಕಾರದ ಅಗತ್ಯ ಇರುವವರಿಗೆ ಇದು ಅನ್ವಯಿಸುವುದಿಲ್ಲ ಎಂದು ಸರ್ಕಾರ ಆದೇಶ ಹೊರಡಿಸಿದೆ.
ಈ ನಡುವೆಯೇ ತೆಲಂಗಾಣ ಸರ್ಕಾರದ ಈ ಕ್ರಮವನ್ನು ಬಿಜೆಪಿ ತೀವ್ರವಾಗಿ ಖಂಡಿಸಿದೆ. ಸರ್ಕಾರ ಇಂತಹ ಸೌಲಭ್ಯಗಳನ್ನು ಹಿಂದೂಗಳಿಗೆ ನೀಡದಿರುವುದು ಆಘಾತಕಾರಿ. ಇದು ಕಾಂಗ್ರೆಸ್ ಸರ್ಕಾರದ ಓಲೈಕೆ ರಾಜಕಾರಣಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿತ್ತು.












Click it and Unblock the Notifications