BPL Ration Card: ಹೊಸ ಬಿಪಿಎಲ್ ಪಡಿತರ ಚೀಟಿ ಅರ್ಜಿದಾರರು ಗಮನಿಸಲೇಬೇಕಾದ ಮಾಹಿತಿ
BPL Ration Card: ಪ್ರಮುಖ ದಾಖಲೆಗಳಲ್ಲಿ ಪಡಿತರ ಚೀಟಿ ಕೂಡ ಒಂದಾಗಿದೆ. ಅದರಲ್ಲೂ ಹಲವು ವಿಧದ ಕಾರ್ಡ್‌ಗಳಿದ್ದು, ಬಿಪಿಎಲ್ ಪಡಿತರ ಚೀಟಿದಾರರಿಗೆ ಹೆಚ್ಚು ಸರ್ಕಾರಿ ಸೌಲಭ್ಯಗಳನ್ನು ನೀಡಲಾಗುತ್ತದೆ. ಕಳೆದ ಕೆಲವು ದಿನಗಳ ಹಿಂದೆಯಷ್ಟೇ ರಾಜ್ಯದಲ್ಲಿ ಈ ಕಾರ್ಡ್‌ಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ನಿಲ್ಲಿಸಲಾಗಿದೆ. ಹಾಗಾದ್ರೆ ಕಾರಣ ಏನೆಂದು ಇಲ್ಲಿ ತಿಳಿಯಿರಿ.
ರಾಜ್ಯದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಪಡೆದಂತಹ ಬಿಪಿಎಲ್ ಕಾರ್ಡ್‌ಗಳನ್ನು ರದ್ದು ಮಾಡುವ ಕೆಲಸವನ್ನು ಸರ್ಕಾರ ಮಾಡಿತ್ತು. ಬಳಿಕ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅರ್ಹರ ಬಿಪಿಎಲ್ ಕಾರ್ಡ್‌ಗಳನ್ನು ರದ್ದು ಮಾಡಿದ್ದಾರೆಂದು ಆಕ್ರೋಶ ಹೊರಹಾಕಿದ್ದರು. ಅಲ್ಲದೆ, ಪ್ರತಿಭಟನೆಯನ್ನೂ ಸಹ ನಡೆಸಿದ್ದರು. ನಂತರ ಎಚ್ಚೆತ್ತ ಸರ್ಕಾರ ಅರ್ಹರಿಗೆ ಬಿಪಿಎಲ್ ಕಾರ್ಡ್‌ಗಳನ್ನು ಹಿಂತಿರುಗಿಸುವುದಾಗಿ ಹೇಳಿತ್ತು.

ಬಳಿಕ ಹೊಸ ಬಿಪಿಲ್ ಪಡಿತರ ಚೀಟಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ನಿಲ್ಲಿಸಲಾಗಿತ್ತು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ ಬಳಿಕ ಹೊಸ ಬಿಪಿಎಲ್ ಕಾರ್ಡಗಳ ವಿತರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು.
ಗೃಹಲಕ್ಷ್ಮಿ, ಅನ್ನಭಾಗ್ಯ ಯೋಜನೆಯ ಪ್ರಯೋಜನ ಪಡೆಯಲು ನಕಲಿ ಕಾರ್ಡ್‌ಗಳ ಹಾವಳಿ ತಪ್ಪಿಸಲು ಆಹಾರ ಇಲಾಖೆಯ ಮೂಲಕ ರಾಜ್ಯ ಸರ್ಕಾರ ಹೊಸ ಬಿಪಿಎಲ್ ಕಾರ್ಡಗಳನ್ನು ವಿತರಿಸದಂತೆ ಆದೇಶ ನೀಡಿತ್ತು. ಇನ್ನು ಬಿಪಿಎಲ್ ಕಾರ್ಡಗೆ ಅರ್ಜಿ ಸಲ್ಲಿಸಿದವರು ತಮ್ಮ ಅರ್ಜಿ ಯಾವ ಹಂತದಲ್ಲಿದೆ ಎಂದು ಮನೆಯದ್ದುಕೊಂಡೇ ಮೊಬೈಲ್‌ನಲ್ಲಿ ಪರಿಶೀಲನೆ ಮಾಡಬಹುದಾಗಿದೆ.
ಗ್ಯಾರಂಟಿ ಯೋಜನೆಗಳು ಜಾರಿಯಾಗುವ ಆರಂಭದಿಂದ ಇಲ್ಲಿಯವರೆಗೆ ಒಟ್ಟು 2.86 ಲಕ್ಷ ಅರ್ಜಿದಾರರು ಹೊಸ ಬಿಪಿಎಲ್ ಕಾರ್ಡ್ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಕಳೆದ 2-3 ತಿಂಗಳ ಹಿಂದೆ ಅನ್ನಭಾಗ್ಯ ಯೋಜನೆಯ ಅಡಿ ಹೆಚ್ಚುವರಿ ಅಕ್ಕಿ ಬದಲು ಹಣವನ್ನು ನೇರ ನಗದು ವರ್ಗಾವಣೆ ಮೂಲಕ ಜಮಾ ಮಾಡಲಾಗುತ್ತಿತ್ತು.
ಆದರೆ 2025ರ ಫೆಬ್ರವರಿಯಿಂದ ಹಣದ ಬದಲು ಅಕ್ಕಿಯನೇ ರಾಜ್ಯ ಸರ್ಕಾರದಿಂದ ವಿತರಣೆ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಮತ್ತೊಂದೆಡೆ ನಮಗೆ ಮೊದಲು ಬಿಪಿಎಲ್ ಕಾರ್ಡ್‌ಗಳನ್ನು ನೀಡಿ ಎಂದು ಅರ್ಜಿದಾರರು ಆಹಾರ ಇಲಾಕೆಯ ಅಧಿಕಾರಿಗಳಿಗೆ ಮನವಿ ಮಾಡಿಕೊಳ್ಳುತ್ತಿದ್ದಾರೆ.
ಅರ್ಜಿದಾರರು ಆಹಾರ ಇಲಾಖೆ ಅಧಿಕಾರಿಗಳನ್ನ ನೇರವಾಗಿ ಭೇಟಿಯಾಗಿ ಬಿಪಿಎಲ್ ಕಾರ್ಡಗಳನ್ನು ವಿತರಣೆ ಮಾಡಿ ಎಂದು ಮನವಿಯನ್ನು ಸಲ್ಲಿಸುತ್ತಿದ್ದಾರೆ. ಇದಕ್ಕ ಇಲಾಖೆಯ ಅಧಿಕಾರಿಗಳು ರಾಜ್ಯ ಸರ್ಕಾರದಿಂದಲೇ ಹೊಸ ಬಿಪಿಎಲ್ ಕಾರ್ಡಗಳನ್ನು ವಿತರಿಸುವಂತೆ ಆದೇಶವನ್ನು ನೀಡಲಾಗಿದೆ. ನಿರ್ದೇಶನ ಬಂದ ಕೂಡಲೇ ಬಿಪಿಎಲ್ ಕಾರ್ಡ್ ವಿತರಣೆ ಮಾಡಲಾಗುತ್ತದೆ ಎಂದು ಇಲಾಖೆ ತಿಳಿಸಿದೆ. ನೀವು ಸಲ್ಲಿಸಿರುವ ಬಿಪಿಎಲ್ ಕಾರ್ಡ್ ಅರ್ಜಿ ಸ್ಥಿತಿಯನ್ನು ಆನ್‌ಲೈನ್‌ನಲ್ಲಿ ಪರಿಶೀಲನೆ ಮಾಡಬಹುದು.
ಪಡಿತರ ಚೀಟಿಯಲ್ಲಿ ಏನಲ್ಲ ತಿದ್ದುಪಡಿಗೆ ಅವಕಾಶವಿದೆ?
* ಕುಟುಂಬದ ಮುಖ್ಯಸ್ಥರ ಬದಲಾವಣೆ
* ಪಡಿತರ ಚೀಟಿ ವಿಳಾಸ ಬದಲಾವಣೆ
* ರೇಷನ್ ಕಾರ್ಡ್ ನ್ಯಾಯಬೆಲೆ ಅಂಗಡಿ ಬದಲಾವಣೆ
* ಕುಟುಂಬದ ಹೊಸ ಸದಸ್ಯರ ಸೇರ್ಪಡೆ
* ರೇಷನ್ ಕಾರ್ಡ್‌ನಿಂದ ಸದಸ್ಯರ ತೆಗೆದು ಹಾಕುವುದು
* ರೇಷನ್ ಕಾರ್ಡ್‌ನಲ್ಲಿರುವ ಸದಸ್ಯರಿಗೆ ಈ ಕೆವೈಸಿ ಮಾಡಲು ಅವಕಾಶ
* ರೇಷನ್ ಕಾರ್ಡ್‌ನಲ್ಲಿರುವ ಸದಸ್ಯರಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಲು ಅವಕಾಶ
* ರೇಷನ್ ಕಾರ್ಡ್‌ಗೆ ಸಂಬಂಧಿಸಿದ ಇತರ ಬದಲಾವಣೆಗೆ ಮಾಡಿಸಬಹುದಾಗಿದೆ












Click it and Unblock the Notifications