Government Employees: ವರ್ಗಾವಣೆ ನಿರೀಕ್ಷೆಯಲ್ಲಿದ್ದ ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್‌

ಬೆಂಗಳೂರು, ಮೇ 10: ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಅತೀ ಶೀಘ್ರದಲ್ಲಿ ಶುಭ ಸುದ್ದಿ ನೀಡಲಿದೆ. ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ ಮೇ 15ರಿಂದ ಜೂನ್‌ 14ರವರೆಗೆ ಅವಕಾಶ ನೀಡುವುದಕ್ಕೆ ರಾಜ್ಯ ಸರ್ಕಾರ ಅವಕಾಶ ನೀಡಲಿದೆ ಎಂದು ತಿಳಿದು ಬಂದಿದೆ. ಈ ವರ್ಗಾವಣೆ ವಿಚಾರವಾಗಿ ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯ ಅನುಮೋದನೆಗೆ ಪ್ರಸ್ತಾವ ಮಂಡಿಸಿದೆ ಎನ್ನಲಾಗಿದೆ. ಗ್ರೂಪ್ ಎ, ಬಿ, ಸಿ ಮತ್ತು ಡಿ ವರ್ಗದ ಅಧಿಕಾರಿಗಳು, ನೌಕರರನ್ನು ಕಾರ್ಯನಿರತ ವೃಂದ ಬಲದ ಶೇಕಡ 6ರಷ್ಟು ಮೀರದಂತೆ ವರ್ಗಾವಣೆ ಮಾಡುವುದಕ್ಕೆ ಮುಂದಾಗಿದೆ ಎಂದು ತಿಳಿದು ಬಂದಿದೆ.
ಈ ನಿಟ್ಟಿನಲ್ಲಿ ಈ ಬಗ್ಗೆ

ಒಂದು ಸ್ಥಳದಲ್ಲಿ ಎರಡು ವರ್ಷ ಕರ್ತವ್ಯ ಅವಧಿ ಪೂರ್ಣಗೊಳಿಸಿದ ಗ್ರೂಪ್‌ 'ಎ' ಮತ್ತು 'ಬಿ' ವೃಂದದ ಅಧಿಕಾರಿಗಳು, ನಾಲ್ಕು ವರ್ಷ ಪೂರ್ಣಗೊಳಿಸಿದ 'ಸಿ' ವೃಂದದ ಹಾಗೂ ಏಳು ವರ್ಷ ಪೂರ್ಣಗೊಳಿಸಿದ 'ಡಿ' ವೃಂದದ ನೌಕರರು ವರ್ಗಾವಣೆಗೆ ಅರ್ಹರು. 'ಎ' ಮತ್ತು 'ಬಿ' ವೃಂದ ಅಧಿಕಾರಿಗಳ ವರ್ಗಾವಣೆ ಪ್ರಸ್ತಾವವನ್ನು ಆಡಳಿತ ಇಲಾಖೆಯ ಮೂಲಕವೇ ಸಚಿವರಿಗೆ ಸಲ್ಲಿಸಬೇಕು ಎನ್ನುವ ನಿಯಮವನ್ನು ಕೂಡ ತರಲಾಗಿದೆ ಎಂದು ತಿಳಿದು ಬಂದಿದ್ದು, ಎ ಮತ್ತು ಬಿ ವೃಂದದ ಅಧಿಕಾರಿಗಳ ವರ್ಗಾವಣೆಗೆ ಸಂಬಂಧಿಸಿದಂತೆ ಆಯಾ ಇಲಾಖೆಯ ಸಚಿವರಿಗೆ, ಸಿ, ಡಿ ವೃಂದದ ನೌಕರರ ವರ್ಗಾವಣೆಗೆ ಸಂಬಂಧಿಸಿದಂತೆ ಆಯಾ ನೇಮಕಾತಿ ಪ್ರಾಧಿಕಾರಗಳಿಗೆ ಅಧಿಕಾರ ನೀಡಲು ಪ್ರಸ್ತಾಪಿಸಲಾಗಿದೆ.

Important Information Regarding The Transfer Of Government Employees

2025-26 ನೇ ಸಾಲಿನ ಸಾರ್ವಜನಿಕ ವರ್ಗಾವಣೆ ಮಾರ್ಗಸೂಚಿಗಳನ್ನು ಹೊರಡಿಸಲು ಮತ್ತು ಸದರಿ ಮಾರ್ಗಸೂಚಿಯನ್ನು ಪರಿಷ್ಕರಿಸಲು ಹಾಗೂ ವರ್ಗಾವಣಾ ಅವಧಿಯನ್ನು ವಿಸ್ತರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಧಿಕಾರ ನೀಡಲು ಸಚಿವ ಸಂಪುಟ ಸಭೆ ನಿರ್ಣಯಿಸಿದೆ ಎಂದು ಕಾನೂನು ಸಚಿವರಾದ ಹೆಚ್‌ ಕೆ ಪಾಟೀಲ್‌ ಅವರು ತಿಳಿಸಿದ್ದಾರೆ

ಆಯಾ ವೃಂದಗಳ ಕಾರ್ಯನಿರತ ವೃಂದ ಬಲದ ಶೇ 6 ನ್ನು ಮೀರದಂತೆ ದಿನಾಂಕ 15/05/2025 ರಿಂದ 14/06/2025 ರವರೆಗೆ ಸಾರ್ವಜನಿಕ ವರ್ಗಾವಣೆ ಕೈಗೊಳ್ಳಲು ಗ್ರೂಪ್‌ ಎ ಮತ್ತು ಗ್ರೂಪ್‌ ಬಿ ವೃಂದದ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಆಯಾ ಇಲಾಖಾ ಸಚಿವರಿಗೆ ಹಾಗೂ ಗ್ರೂಪ್‌ ಸಿ ಮತ್ತು ಡಿ ವೃಂಧದ ನೇಮಕಾತಿ ಪ್ರಾಧಿಕಾರಗಳಿಗೆ ಅಧಿಕಾರ ಪ್ರತ್ಯಾಯೋಜಿಸಲು ಪ್ರಸ್ತಾಪಿಸಲಾಗಿದೆ ಎಂದು ಕಾನೂನು ಸಚಿವರು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+