Government Employees: ಹಳೆ ಪಿಂಚಣಿ ಯೋಜನೆ ಜಾರಿಗೆ ಕ್ಷಣಗಣನೆ; ಮಹತ್ವದ ಸಭೆ
ಬೆಂಗಳೂರು, ಆಗಸ್ಟ್ 12: ರಾಜ್ಯ ಸರ್ಕಾರಿ ನೌಕರರ ಬಹುದಿನದ ಬೇಡಿಕೆಯಾದ ಹಳೆ ಪಿಂಚಣಿ ಯೋಜನೆ ಜಾರಿಗೆ ಕ್ಷಣಗಣನೆ ಶುರುವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ದಿನದಿಂದಲೂ ಸರ್ಕಾರಿ ನೌಕರರು ಹಲವು ಸಭೆ, ಪ್ರತಿಭಟನೆಯನ್ನ ನಡೆಸುವ ಮೂಲಕ ರಾಜ್ಯ ಸರ್ಕಾರಕ್ಕೆ ಹಳೆ ಪಿಂಚಣಿ ಯೋಜನೆ ಜಾರಿಗೆ ಒತ್ತಾಯಿಸಿದ್ದರು. ಕಳೆದ ಎರಡು ವರ್ಷಗಳಿಂದ ಕಾದು ಕುಳಿತಿದ್ದ ರಾಜ್ಯ ಸರ್ಕಾರಿ ನೌಕರರಿಗೆ ಕೊನೆಗೂ ಸಿಹಿ ಸುದ್ದಿ ಸಿಗುವ ನಿರೀಕ್ಷೆ ಇದೆ.
ಕೆಲ ದಿನಗಳಲ್ಲೇ ಹಳೇ ಪಿಂಚಣಿ ಜಾರಿಗೆ ಒತ್ತಾಯಿಸಿ ನಡೆಸುತ್ತಿದ್ದ ಪ್ರತಿಭಟನೆಗಳು ಫಲ ನೀಡಿದಂತೆ ಕಾಣುತ್ತಿದೆ. ಕಳೆದ ಚುನಾವಣೆಯಲ್ಲಿ ಸರ್ಕಾರಿ ನೌಕರರ ಬೇಡಿಕೆಯನ್ನ ಈಡೇರಿಸುವುದಾಗಿ ರಾಜ್ಯ ಕಾಂಗ್ರೆಸ್ ಭರವಸೆಯನ್ನ ನೀಡಿತ್ತು. ಅದರಂತೆ ರಾಜ್ಯ ಸರ್ಕಾರ ಕೊಟ್ಟ ಮಾತಿನಂತೆ ನಾವು ನಡೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದರು. ಇದೀಗ ಹಳೆ ಪಿಂಚಣಿ ಯೋಜನೆ ಬಗ್ಗೆ ಬಿಗ್ ಅಪ್‌ಡೇಟ್ ಸಿಕ್ಕಿದ್ದು, ಮಹತ್ವದ ಸಭೆ ನಡೆಸಲಾಗಿದೆ.

ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳಲ್ಲಿ ಒಂದು ಹಳೆ ಪಿಂಚಣಿ ಯೋಜನೆ ಜಾರಿಗೊಳಿಸುವುದು. ಈ ವಿಚಾರದಲ್ಲಿ ಈಗಾಗಲೇ ಜಾರಿಗೊಳಿಸುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದ್ದರು. ಅದರ ಸಲುವಾಗಿ ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಎನ್ನುವಂತೆ ಇಂದು(ಆಗಸ್ಟ್.12) ಹಳೆ ಪಿಂಚಣಿ ಯೋಜನೆ ಜಾರಿ ಕುರಿತು ಚರ್ಚಿಸಲು ಮಹತ್ವದ ಸಭೆ ನಡೆಸಲಾಗಿದೆ. ಕೆಲ ದಿನದಲ್ಲೇ ಈ ಸಭೆಗೆ ಸಂಬಂಧಿಸಿದಂತೆ ಚರ್ಚೆ ಕುರಿತು ಮಾಹಿತಿ ಸಿಗಲಿದೆ.
ಸರ್ಕಾರಿ ನೌಕರರ ಮಹತ್ವದ ಬೇಡಿಕೆಗಳಲ್ಲಿ ಒಂದಾಗಿರುವ NPS ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸುವುದು ಎಂದು ರಾಜ್ಯ ಸರ್ಕಾರ ಮಾತು ಕೊಟ್ಟಿದೆ. ದಿನಾಂಕ: 12.08.2025 ರಂದು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತರು ಇವರ ಅಧ್ಯಕ್ಷತೆಯಲ್ಲಿ ಕೊಠಡಿ ಸಂಖ್ಯೆ: 306, 3ನೇ ಮಹಡಿ, ವಿಧಾನಸೌಧ ಇಲ್ಲಿ ರಾಜ್ಯದಲ್ಲಿ ಜಾರಿಯಲ್ಲಿರುವ ರಾಷ್ಟ್ರೀಯ ಪಿಂಚಣಿ ಯೋಜನೆಯ ಬದಲಾಗಿ ಹಳಯ ಪಿಂಚಣಿ ಯೋಜನೆಯನ್ನು ಜಾರಿ ಮಾಡುವ ಸಾಧ್ಯತೆಗಳ ಕುರಿತು ಚರ್ಚೆ ನಡೆಸಲು ಸಮಿತಿ ಸಭೆಯನ್ನು ಏರ್ಪಡಿಸಲಾಗಿದೆ.
ರಮಣ್ ದೀಪ್ ಚೌಧರಿ, ಭಾ.ಆ.ಸೇ, ಸರ್ಕಾರದ ಕಾರ್ಯದರ್ಶಿರವರ ನೇತೃತ್ವದಲ್ಲಿ ಹಳ ಪಿಂಚಣಿ ಯೋಜನೆ ಜಾರಿ ಮಾಡಿರುವ ಹಿಮಾಚಲ ಪ್ರದೇಶ ರಾಜ್ಯಕ್ಕೆ ಭೇಟಿ ನೀಡಿ ವರದಿಯನ್ನು ಸಲ್ಲಿಸಿದ್ದು ಮತ್ತು ತುಳಸಿ ಮದ್ದಿನೇನಿ, ಭಾ.ಆ.ಸೇ, ಸರ್ಕಾರದ ಕಾರ್ಯದರ್ಶಿರವರು ಅಂಧ ಪ್ರದೇಶ ರಾಜ್ಯಕ್ಕೆ ಭೇಟಿ ನೀಡಿ ವರದಿಯನ್ನು ಸಲ್ಲಿಸಿದ್ದು, ಈ ಹಿನ್ನೆಲೆಯಲ್ಲಿ ಸದರಿ ಸಭೆಯನ್ನು ಏರ್ಪಡಿಸಲಾಗಿದ್ದು. ಸದರಿ ಸಭೆಗೆ ಹಾಜರಾಗುವಂತೆ ಕೋರಿದ್ದಾರೆ. ಇಂದು ನಡೆದ ಮಹತ್ವದ ಸಭೆಯಲ್ಲಿ ಹಳೆ ಪಿಂಚಣಿ ಯೋಜನೆ ಕುರಿತು ಚರ್ಚೆ ನಡೆದಿದ್ದು, ಸರ್ಕಾರ ಶೀಘ್ರದಲ್ಲಿಯೇ ರಾಜ್ಯ ಸರ್ಕಾರಿ ನೌಕರರಿಗೆ ಶುಭ ಸುದ್ದಿ ನೀಡಲಿದೆ.












Click it and Unblock the Notifications