ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯದಲ್ಲಿ ಶಾಲೆ ಆಂಭಿಸುವ ಬಗ್ಗೆ ಸಿಎಂ ಯಡಿಯೂರಪ್ಪ ಮಹತ್ವದ ಸಭೆ!

|
Google Oneindia Kannada News

ಬೆಂಗಳೂರು, ನ. 23: ಕೊರೊನಾ ಸಂಕಷ್ಟದ ಹಿನ್ನೆಲೆಯಲ್ಲಿ ಕಳೆದ ಮಾರ್ಚ್‌ ತಿಂಗಳಿನಲ್ಲಿ ಮುಚ್ಚಲ್ಪಟ್ಟಿರುವ ಶಾಲೆಗಳನ್ನು ತೆರೆಯುವ ಕುರಿತು ಮಹತ್ವದ ಸಭೆ ಇಂದು (ನ.23) ನಡೆಯಲಿದೆ. ಕರ್ನಾಟಕದಲ್ಲಿ ಶಾಲೆ ಆರಂಭಿಸುವ ಕುರಿತು ಸಿಎಂ ಯಡಿಯೂರಪ್ಪ ಅವರು ಮಹತ್ವದ ಸಭೆಯನ್ನು ಕರೆದಿದ್ದು, ಇಂದು ಮಧ್ಯಾಹ್ನ 12.15ಕ್ಕೆ ವಿಧಾನಸೌಧದಲ್ಲಿ ಸಭೆ ಆರಂಭವಾಗಲಿದೆ.

ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಭಾಗಿಯಾಗಲಿದ್ದಾರೆ. ಜೊತೆಗೆ ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ ಅಧಿಕಾರಿಗಳು ಸೇರಿದಂತೆ ಒಟ್ಟು 8 ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಶಾಲೆಗಳನ್ನು ಯಾವಾಗಆರಂಭಿಸಬೇಕು ಎಂಬುದರ ಕುರಿತ ಸಭೆಯಲ್ಲಿ ಪ್ರಮುಖವಾಗಿ ಚರ್ಚೆ ನಡೆಯಲಿದೆ.

ಶಾಲೆ ಆರಂಭಿಸುವ ಕುರಿತು ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಹತ್ವದ ಹೇಳಿಕೆ!ಶಾಲೆ ಆರಂಭಿಸುವ ಕುರಿತು ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಹತ್ವದ ಹೇಳಿಕೆ!

ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಸಭೆ ನಡೆಯಲಿದ್ದು, ಕೊರೊನಾ ವೈರಸ್ ಹಿನ್ನಲೆಯಲ್ಲಿ ಕಳೆದ ಮಾರ್ಚ್ ತಿಂಗಳಿನಲ್ಲಿಯೆ ಮುಚ್ಚಿರುವ ಶಾಲೆಗಳನ್ನು ತೆರೆಯುವುದರಿಂದ ಎದುರಾಗಬಹುದಾದ ಸಮಸ್ಯೆಗಳ ಬಗ್ಗೆ ಚರ್ಚೆ ಆಗಲಿದೆ.

Important Meeting Will Be Held In Vidhana Soudha Today Nov 23 Opening Schools In Karnataka

Recommended Video

ಮಹಾಮಾರಿಗೆ Gandhi ಮರಿ ಮೊಮ್ಮಗ ಬಲಿ | Oneindia Kannada

ಮಹತ್ವದ ಸಭೆಗೆ ಆರೋಗ್ಯ ಸಚಿವ ಡಾ. ಸುಧಾಕರ್ ಗೈರು: ರಾಜ್ಯದಲ್ಲಿ ಶಾಲೆ ಆರಂಭಿಸುವ ಕುರಿತು ನಡೆಯುವ ಮಹಯತ್ವದ ಸಭೆಗೆ ಆರೋಗ್ಯ ಸಚಿವ ಡಾ. ಸುಧಾಕರ್ ಗೈರಯ ಹಾಜರಾಗುತ್ತಿದ್ದಾರೆ. ಪಕ್ಷ ಸಂಘಟನೆ ಹಿನ್ನೆಲೆಯಲ್ಲಿ ಹೈದರಾಬಾದ್‌ನಲ್ಲಿರುವ ಆರೋಗ್ಯ ಸಚಿವರು ಸಭೆಯಲ್ಲಿ ಭಾಗವಹಿಸುತ್ತಿಲ್ಲ. ಅವರ ಗೈರು ಹಾಜರಿಯಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳು ಸಲಹೆಗಳನ್ನು ಸರ್ಕಾರಕ್ಕೆ ಒದಗಿಸಲಾಗಿದ್ದಾರೆ.

English summary
Importaint meeting will be held in Vidhanasoddha on opening schools in the state. CM Yediyurappa will discusse with senior officials of the Department of Education and Educataion Minister Suresh kumar. Know more,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X