Government Employees: ಸರ್ಕಾರಿ ನೌಕರರಿಗೆ ಗಳಿಕೆ ರಜೆ ಕುರಿತು ಮಹತ್ವದ ಆದೇಶ
ಬೆಂಗಳೂರು, ಫೆಬ್ರವರಿ 14: ಕರ್ನಾಟಕ ಸರ್ಕಾರ ಸರ್ಕಾರಿ ನೌಕರರಿಗೆ ಪ್ರಮುಖ ಮಾಹಿತಿಯೊಂದನ್ನು ನೀಡಿದೆ. ರಾಜ್ಯದ ಸರ್ಕಾರಿ ನೌಕರರಿಗೆ ರಜೆ ಕುರಿತಂತೆ ರಾಜ್ಯ ಸರ್ಕಾರ ಮಹತ್ವದ ಆದೇಶವನ್ನು ಹೊರಡಿಸಿದೆ. ಈ ಕುರಿತಂತೆ ಆರ್ಥಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸೇರ್ಪಡೆ ಆದೇಶವನ್ನು ಹೊರಡಿಸಿದ್ದಾರೆ. ಅದರಲ್ಲಿ ದಿನಾಂಕ 21.12.2023 ರ ಸರ್ಕಾರಿ ಆದೇಶ ಸಂಖ್ಯೆ ಆಇ 10(ಇ) ಸೇನಿಸೇ 2023 ಮತ್ತು ದಿನಾಂಕ 17.1.2025 ರ ಸರ್ಕಾರಿ ಆದೇಶ ಸಂಖ್ಯೆ ಆಇ 03 ಸೇನಿಸೇ 2024 ರ ಆದೇಶ ಭಾಗದ ಕೊನೆಯಲ್ಲಿ ಈ ಕೆಳಗಿನವುಗಳನ್ನು ಸೇರಿಸಿ ಓದಿಕೊಳ್ಳತಕ್ಕದ್ದು ಎಂಬುದಾಗಿ ಹೇಳಿದ್ದಾರೆ.
ಗಳಿಕೆ ರಜೆ ನಗದೀಕರಣಕ್ಕೆ ಮಂಜೂರಾತಿ ನೀಡುವ ಆದೇಶವನ್ನು ಯಾವುದಾದರೂ ಕಾರಣದಿಂದ ನಿಗಧಿತ ಬ್ಲಾಕ್ ಅವಧಿಯಲ್ಲಿ ಹೊರಡಿಸಲು ಸಾಧ್ಯವಾಗದಿದ್ದರೆ ಸಂಬಂಧಿತ ಪ್ರಾಧಿಕಾರವು ಅಂತಹ ಆದೇಶವನ್ನು ಬ್ಲಾಕ್ ಅವಧಿ ಮುಕ್ತಾಯಗೊಂಡ ನಂತರವೂ ಹೊರಡಿಸಬಹುದು. ಆದರೆ, ಗಳಿಕೆ ರಜೆ ನಗದೀಕರಣದ ಆರ್ಥಿಕ ಪ್ರಯೋಜನವನ್ನು ಸಂಬಂಧಿತ ಆರ್ಥಿಕ ವರ್ಷವು ಅಂತ್ಯಗೊಳ್ಳುವ ಮುನ್ನ ಪಡೆಯತಕ್ಕದ್ದು ಎಂಬುದಾಗಿ ತಿಳಿಸಿದ್ದಾರೆ.

ಉದ್ಯೋಗಿಗಳಿಗೆ ಸಾಮಾಜಿಕ ಭದ್ರತಾ ವ್ಯವಸ್ಥೆ ಜಾರಿ
ರಾಜ್ಯ ಸರ್ಕಾರದಿಂದ ನೇರವಾಗಿ/ ಪರೋಕ್ಷವಾಗಿ ನೇಮಕಗೊಂಡಿರುವ ವಿವಿದ ಉದ್ಯೋಗಿಗಳಿಗೆ ಸಾಮಾಜಿಕ ಭದ್ರತಾ ವ್ಯವಸ್ತೆಯನ್ನು ಜಾರಿಗೆ ತರುವ ಅಥವಾ ವಿಸ್ತರಿಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ದಿನಾಂಕ:30.01.2025 ರಂದು ನಡೆದ ಸಚಿವ ಸಂಪುಟದ ಸಭೆಯಲ್ಲಿ ತಿರ್ಮಾನಿಸಿದಂತೆ, ಅಧಿಕಾರಿಗಳು/ನೌಕರರ ಮತ್ತು ಅವಲಂಬಿತ ಕುಟುಂಬ ಸದಸ್ಯರ ಹಿತಾಸಕ್ತಿಗಳನ್ನು ರಕ್ಷಿಸುವ ಸಲುವಾಗಿ, ಈ ಕೆಳಗಿನಂತೆ ಆದೇಶಿಸಲಾಗಿದೆ:
a) ವಿವಿಧ ಬ್ಯಾಂಕುಗಳು ಒದಗಿಸುವ "ಸಂಬಳ ಪ್ಯಾಕೇಜ್‌ಗಳ* ಅಡಿಯಲ್ಲಿ ಖಾತೆಗಳನ್ನು ತೆರೆಯುವುದು/ಆಯ್ಕೆ ಮಾಡಿಕೊಳ್ಳುವುದನ್ನು ಎಲ್ಲಾ ಅಧಿಕಾರಿಗಳು / ನೌಕರರಿಗೆ (ಸರ್ಕಾರಿ /ಸರ್ಕಾರಿ ಸಂಸ್ಥೆಗಳು, ಇತ್ಯಾದಿ) ಕಡ್ಡಾಯಗೊಳಿಸುವುದು.
b) ಬ್ಯಾಂಕ್‌ಗಳು/ಅಂಚೆ ಕಚೇರಿಗಳು ನೀಡುವ PMJJBY ಮತ್ತು PMSBY ಯೋಜನೆಗಳ ಅಡಿಯಲ್ಲಿ ಸ್ವಯಂಪ್ರೇರಿತ ಆಧಾರದ ಮೇಲೆ ವಿಮಾ ರಕ್ಷಣೆಯನ್ನು ಪಡೆಯಲು ಅಧಿಕಾರಿಗಳು / ನೌಕರರನ್ನು ಪ್ರೋತ್ಸಾಹಿಸುವುದು.
c) ಬ್ಯಾಂಕ್‌ಗಳು ನೀಡುವ ವಿವಿಧ ಯೋಜನೆಗಳ ಅಡಿಯಲ್ಲಿ ಸ್ವಯಂಪ್ರೇರಿತ ಆಧಾರದ ಮೇಲೆ ವೈಯಕ್ತಿಕ ಅಪಘಾತ ವಿಮಾ ರಕ್ಷಣೆಯನ್ನು ಪಡೆಯಲು ಅಧಿಕಾರಿಗಳು / ನೌಕರರನ್ನು ಪ್ರೋತ್ಸಾಹಿಸುವುದು.
ಈ ಹಿನ್ನೆಲೆಯಲ್ಲಿ ಮತ್ತು ಕರ್ನಾಟಕ ಸರ್ಕಾರವು ಸರ್ಕಾರಿ ಮತ್ತು ಇತರೆ ಸರ್ಕಾರಿ ಅಂಗ ಸಂಸ್ಥೆಗಳ ಉದ್ಯೋಗಿಳಿಗೆ ವಿವಿಧ ಕಲ್ಯಾಣ ಕ್ರಮಗಳನ್ನು ನೀಡಿದ್ದು, ಈಗಾಗಲೇ ಜಾರಿಯಲ್ಲಿರುವ ಸಾಮಾಜಿಕ ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಲುಪಡಿಸಲು ಮತ್ತು ಸುಗಮಗೊಳಿಸುವ ಸಲುವಾಗಿ ಸರ್ಕಾರದಿಂದ ನೇರವಾಗಿ/ಪರೋಕ್ಷವಾಗಿ ನೇಮಕಗೊಂಡಿರುವ ವಿವಿಧ ಅಧಿಕಾರಿಗಳು / ನೌಕರರಿಗೆ ಸಾಮಾಜಿಕ ಭದ್ರತಾ ವ್ಯವಸ್ಥೆಯನ್ನು ಜಾರಿಗೆ ತರುವ ಕುರಿತು ಚರ್ಚಿಸಲು ಪ್ರಮುಖ ಬ್ಯಾಂಕುಗಳ ಅಧಿಕಾರಿಗಳೊಂದಿಗೆ ಹಾಗೂ ರಾಜ್ಯದ ಪ್ರಮುಖ ನೌಕರರ ಸಂಘಗಳ ಅಧ್ಯಕ್ಷರು/ಪ್ರತಿನಿಧಿಗಳೊಂದಿಗೆ ಸರ್ಕಾರದ ಕಾರ್ಯದರ್ಶಿ (ವಿತ್ತೀಯ ಸುಧಾರಣೆ) ರವರ ಅಧ್ಯಕ್ಷತೆಯಲ್ಲಿ ದಿನಾಂಕ 17.02.2025 ರಂದು ಮಧ್ಯಾಹ್ನ 4.00 ಗಂಟೆಗೆ, ಕೊಠಡಿ ಸಂಖ್ಯೆ: 317, ವಿಕಾಸಸೌಧ, ಬೆಂಗಳೂರು ರಲ್ಲಿ ಸಭೆಯನ್ನು ನಡೆಸಲು ತೀರ್ಮಾನಿಸಲಾಗಿದೆ. ಸದರಿ ಸಭೆಗೆ ಅಗತ್ಯ ಮಾಹಿತಿಯೊಂದಿಗೆ ತಪ್ಪದೇ ಹಾಜರಾಗುವಂತೆ ಕೋರಿದೆ.












Click it and Unblock the Notifications