Government Employees: ಆರೋಗ್ಯ ಭಾಗ್ಯ ಯೋಜನೆ ಜಾರಿ ಕುರಿತು ಸರ್ಕಾರದಿಂದ ಮಹತ್ವದ ಆದೇಶ

ಬೆಂಗಳೂರು, ಮಾರ್ಚ್‌ 03: ವಿಧಾನ ಮಂಡಲದ ಅಧಿವೇಶನ ಇಂದಿನಿಂದ (ಮಾರ್ಚ್‌ 3) ಆರಂಭವಾಗಲಿದೆ. ಮಾರ್ಚ್‌ 07 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್‌ ಮಂಡಿಸಲು ಈಗಾಗಲೇ ತಯಾರಿ ನಡೆಸಿದ್ದು, ಈ ಬಾರಿ ಬಜೆಟ್‌ ನಲ್ಲಿ ತಮ್ಮ ಬೇಡಿಕೆಗಳನ್ನ ಈಡೇರಿಸುವಂತೆ ರಾಜ್ಯ ಸರ್ಕಾರಿ ನೌಕರರು ಮನವಿ ಮಾಡಿದ್ದಾರೆ. ಅದರಂತೆ ಆರೋಗ್ಯ ಸಂಜೀವಿನಿ ಯೋಜನೆ ಹಾಗೂ ಹಳೆ ಪಿಂಚಣಿ ಯೋಜನೆಗಳನ್ನ ರಾಜ್ಯ ಸರ್ಕಾರ ಜಾರಿಗೊಳಿಸಲಿದೆ ಎಂದು ನಿರೀಕ್ಷೆ ಇದೆ.

ಇದೀಗ ರಾಜ್ಯದ ನಿವೃತ್ತ ನೌಕರರು ಮತ್ತು ಅವರ ಅವಲಂಬಿತ ಕುಟುಂಬ ಸದಸ್ಯರಿಗೆ ಆರೋಗ್ಯ ಭಾಗ್ಯ ಯೋಜನೆ ಜಾರಿಗೊಳಿಸುವ ಬಗ್ಗೆ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯ ಮತ್ತು ಉಲ್ಲೇಖಕ್ಕೆ ಸಂಬಂಧಿಸಿದಂತೆ, ಪ್ರಸ್ತಾವನೆಯನ್ನು ಪರಿಶೀಲಿಸಲಾಗಿದ್ದು, ಪ್ರಸ್ತಕ ಸರ್ಕಾರದಿಂದ ಸಾರ್ವಜನಿಕರಿಗೆ / ಹಿರಿಯ ನಾಗರೀಕರಿಗೆ ಆರೋಗ್ಯ ಭಾಗ್ಯ ಯೋಜನೆ (Pradhan Manthri Jan Arogya Yojana - PM JAY) ಮತ್ತು ಆರೋಗ್ಯ ಕರ್ನಾಟಕ ಯೋಜನೆಯು ಜಾರಿಯಲ್ಲಿದ್ದು, ಇಲಾಖೆಯ ನಿವೃತ್ತ ನೌಕರರು ಮತ್ತು ಕುಟುಂಬದವರು ಈ ಯೋಜನೆಯ ಪ್ರಯೋಜನವನ್ನು ಪಡೆಯಬಹುದಾಗಿದ್ದು, ಎಲ್ಲಾ ಇಲಾಖೆಗಳು ಪ್ರತ್ಯೇಕವಾಗಿ ಆರೋಗ್ಯ ಭಾಗ್ಯ ಯೋಜನೆಯನ್ನು ಜಾರಿಗೊಳಿಸುವ ಅವಶ್ಯಕತೆ ಇರುವುದಿಲ್ಲವೆಂದು ನಿರ್ದೇಶಿಸಲಾಗಿದೆ.

Important Order From The Government Regarding Implementation Of Arogya Bhagya Scheme

ಸರ್ಕಾರಿ ಸಭೆ, ಸಮಾರಂಭಗಳಲ್ಲಿ ಈ ನಿಯಮಗಳ ಪಾಲನೆ ಕಡ್ಡಾಯ

ರಾಜ್ಯ ಸರ್ಕಾರದ ಸಭೆ, ಸಮಾರಂಭಗಳ ಆಯೋಜನೆಯಲ್ಲಿ ಕಡ್ಡಾಯವಾಗಿ ಶಿಷ್ಟಾಚರಗಳನ್ನು ಪಾಲಿಸಬೇಕು. ಒಂದು ವೇಳೆ ಪಾಲಿಸದೇ ಇದ್ದರೇ ಅಂತಹ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದೆ. ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತರು ಆದೇಶ ಹೊರಡಿಸಿದ್ದು, ಅದರಲ್ಲಿ ಸರ್ಕಾರದ ಸಭೆ ಸಮಾರಂಭಗಳಿಗೆ ಜನ ಪ್ರತಿನಿಧಿಗಳನ್ನು ಆಹ್ವಾನಿಸುವಲ್ಲಿ ಅನುಸರಿಸಬೇಕಾದ ಶಿಷ್ಠಚಾರದ ಕುರಿತು ಸಮಗ್ರವಾದ ಮಾಹಿತಿಯನ್ನು, ಸರ್ಕಾರದ ಉಲ್ಲೇಖಿತ ಸುತ್ತೋಲೆಗಳನ್ವಯ ಹೊರಡಿಸಿದ್ದು ಇರುತ್ತದೆ, ತಾಲೂಕು, ಜಿಲ್ಲಾ ಹಾಗೂ ರಾಜ್ಯ ಮಟ್ಟದ ಕಾರ್ಯಕ್ರಮಗಳನ್ನು ಆಯೋಜಿಸುವಾಗ ಕಡ್ಡಾಯವಾಗಿ ಸದರಿ ಮಾನದಂಡಗಳನ್ನು ಅನುಸರಿಸಲು ಈಗಾಗಲೇ ಆಯುಕ್ತಾಲಯ ವ್ಯಾಪ್ತಿಯ ಎಲ್ಲ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನಗಳನ್ನು ನೀಡಿದ್ದು ಇರುತ್ತದೆ.

ಆದರೂ ಸಹ ಶಿಕ್ಷಣ ಇಲಾಖೆಯ ಅಧಿಕಾರಿಗಳು ಶಿಷ್ಟಾಚಾರವನ್ನು ಸಮರ್ಪಕವಾಗಿ ಪಾಲನೇ ಮಾಡದೇ ಇರುವ ಕುರಿತು ಪ್ರಕರಣಗಳು ಹಕ್ಕು ಬಾಧ್ಯತಾ ಸಮಿತಿಯಲ್ಲಿ ದಾಖಲಾಗುತ್ತಿವೆ. ಸರ್ಕಾರವು ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ನಿಯಮಾನುಸಾರ ಕ್ರಮ ಜರುಗಿಸಲು ಅವಕಾಶಗಳಿರುತ್ತವೆ ಎಂದು ತಿಳಿಸಿದ್ದಾರೆ. ಪ್ರಯುಕ್ತ, ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಸರ್ಕಾರದ ಸಭೆ/ಸಮಾರಂಭಗಳಲ್ಲಿ ಉಲ್ಲೇಖಿತ ಸುತ್ತೋಲೆಗಳಂತೆ ಕಡ್ಡಾಯವಾಗಿ ಶಿಷ್ಟಚಾರವನ್ನು ತಪ್ಪದೇ ಪಾಲಿಸಲು ಅಗತ್ಯ ಕ್ರಮ ವಹಿಸುವಂತೆ ಮತ್ತೊಮ್ಮೆ ಸೂಚಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+