Government Employees: ಸರ್ಕಾರಿ ನೌಕರರಿಗೆ ಪಿಂಚಣಿ ಸೌಲಭ್ಯ : ಸರ್ಕಾರದಿಂದ ಮಹತ್ವದ ಆದೇಶ!
ಬೆಂಗಳೂರು, ಡಿಸೆಂಬರ್ 06: ಸರ್ಕಾರಿ ನೌಕರರು ಹೊಸ ಪಿಂಚಣಿ ಯೋಜನೆ (ಎನ್ಪಿಎಸ್) ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆ (ಒಪಿಎಸ್) ಮರು ಜಾರಿಗೊಳಿಸಬೇಕು ಎಂದು ರಾಜ್ಯ ಸರ್ಕಾರವನ್ನ ಸರ್ಕಾರಿ ನೌಕರರು ಒತ್ತಾಯಿಸುತ್ತಿದ್ದಾರೆ. ಹಳೆ ಪಿಂಚಣಿ ಯೋಜನೆ ಮರು ಜಾರಿ ಒಂದು ಕಡೆಯಾದರೇ. ಇತ್ತ ನಿವೃತ್ತಿ ಹೊಂದುವ ರಾಜ್ಯ ಸರ್ಕಾರಿ ನೌಕರರಿಗೆ ಪಿಂಚಣಿ ಸೌಲಭ್ಯ ಕುರಿತು ರಾಜ್ಯ ಸರ್ಕಾರ ಮಹತ್ವ ಆದೇಶವನ್ನ ಹೊರಡಿಸಿದೆ.
ಸರ್ಕಾರಿ ನೌಕರರ ವಯೋ ನಿವೃತ್ತಿ ಮತ್ತು ಸ್ವ-ಇಚ್ಛಾ ನಿವೃತ್ತಿ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಡಿಜಿಟಲ್ ಮಾಡಲು ರಾಜ್ಯ ಸರ್ಕಾರ ಹೆಜ್ಜೆ ಇಟ್ಟಿದೆ. ಖಜಾನೆ-2ರ ತಂತ್ರಾಂಶದ ಮುಖಾಂತರ ಮಹಾಲೇಖಪಾಲರಿಗೆ ವಯೋ ನಿವೃತ್ತಿ/ಸ್ವ- ಇಚ್ಛಾ ನಿವೃತ್ತಿ ಹೊಂದುವ ನೌಕರರ ಪಿಂಚಣಿ ಅರ್ಜಿಗಳನ್ನು ಸಲ್ಲಿಸುವ ಪ್ರಕ್ರಿಯೆಯನ್ನು ಅನುಷ್ಠಾನಗೊಳಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಉಲ್ಲೇಖಿತ ಸರ್ಕಾರದ ಆದೇಶದಲ್ಲಿ, ಖಜಾನೆ-2ರ ತಂತ್ರಾಂಶದ ಮುಖಾಂತರ ಪ್ರಾಯೋಗಿಕವಾಗಿ, ಏಪ್ರಿಲ್ 2025 ರಿಂದ ಮೂರು ತಿಂಗಳ ಕಾಲ ರಾಜ್ಯದ ಎಲ್ಲಾ ಹಣ ಸೆಳೆಯುವ ಮತ್ತು ಬಟವಾಡೆ ಅಧಿಕಾರಿಗಳು (ಡಿಡಿಓ), ವಯೋನಿವೃತ್ತಿ ಹಾಗೂ ಸ್ವ-ಇಚ್ಛಾ ನಿವೃತ್ತಿ ಹೊಂದುವ ನೌಕರರ ಪಿಂಚಣಿಗೆ ಸಂಬಂಧಿಸಿದ ಅರ್ಜಿಗಳನ್ನು ಆನ್ಲೈನ್ ನಲ್ಲಿ ದಾಖಲಿಸಿ ಮಂಜೂರು ಮಾಡುವುದು ಮತ್ತು ಭೌತಿಕವಾಗಿ ಸಿದ್ಧಪಡಿಸಿರುವ ಅರ್ಜಿ ಹಾಗೂ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಮಹಾಲೇಖಪಾಲರಿಗೆ ನಿಯಮಾನುಸಾರ ಸಲ್ಲಿಸಲು ಆದೇಶಿಸಿದೆ. ಪ್ರಾಯೋಗಿಕ ಹಂತವು ಯಶಸ್ವಿಯಾದಲ್ಲಿ, ಖಜಾನೆ-2ರ ತಂತ್ರಾಂಶದ ಮುಖಾಂತರ ಪಿಂಚಣಿ ಅರ್ಜಿಗಳನ್ನು ಮಹಾಲೇಖಪಾಲರಿಗೆ ಸಲ್ಲಿಸಲು ಮುಂದುವರೆಸುವುದು ಎಂದು ಸಹ ಆದೇಶಿಸಿದೆ.
ಆದಾಗ್ಯೂ, ಸರ್ಕಾರ ನೀಡಿದ ಸ್ಪಷ್ಟ ಸೂಚನೆಗಳ ಹೊರತಾಗಿಯೂ, ಗಮನಾರ್ಹ ಸಂಖ್ಯೆಯ ಡಿಡಿಓಗಳು ಪಿಂಚಣಿ ದಾಖಲೆಗಳನ್ನು ಭೌತಿಕವಾಗಿ ಸಲ್ಲಿಸುವುದನ್ನು ಮುಂದುವರೆಸಿರುವುದನ್ನು ಗಮನಿಸಲಾಗಿದೆ. ಇದು ಪ್ರಕ್ರಿಯೆಯನ್ನು ವಿಳಂಬಗೊಳಿಸುವುದಲ್ಲದೆ, ePPO ಯೋಜನೆಯಡಿಯಲ್ಲಿ ಪಾವತಿಗಾಗಿ ಸಕಾಲಿಕ ಪಿಂಚಣಿ ದೃಢೀಕರಣ ಮತ್ತು ಎಲೆಕ್ಟ್ರಾನಿಕ್ ದತ್ತಾಂಶ ಪ್ರಸರಣಕ್ಕಾಗಿ ಮಹಾಲೇಖಪಾಲರ ಕಚೇರಿ ಮತ್ತು ಖಜಾನೆಯ ನಡುವಿನ ತಡರಹಿತ ಸಂಯೋಜನೆಗೆ ಅಡ್ಡಿಪಡಿಸುತ್ತದೆ ಎಂದು ಮಹಾಲೇಖಪಾಲರು ಉಲ್ಲೇಖಿತ ಪತ್ರದಲ್ಲಿ ತಿಳಿಸಿ, ಡಿಜಿಟಲ್ ಪರಿಸರ ವ್ಯವಸ್ಥೆಗೆ ಈ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಅಳವಡಿಸುವ ಸಲುವಾಗಿ ಈ ಕೆಳಗಿನ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿರುತ್ತಾರೆ.
1) ದಿನಾಂಕ:01.12.2025 ರಿಂದ ಜಾರಿಗೆ ಬರುವಂತೆ. ವಯೋ ನಿವೃತ್ತಿ ಪ್ರಕರಣಗಳಿಗೆ ಸಂಬಂಧಿಸಿದಂತೆ. ಮಹಾಲೇಖಪಾಲರ ಕಚೇರಿಯಲ್ಲಿ ಭೌತಿಕವಾಗಿ ಸಲ್ಲಿಸಿದ ಯಾವುದೇ ಪಿಂಚಣಿ ಪತ್ರಗಳನ್ನು ಸ್ವೀಕರಿಸಲಾಗುವುದಿಲ್ಲ.
ii) ಮೇಲೆ ಉಲ್ಲೇಖಿಸಲಾದ ಸರ್ಕಾರಿ ಆದೇಶದಲ್ಲಿನ ಸೂಚನೆಗಳನ್ನು ಅನುಸರಿಸದೇ ಸೇವಾ ವಹಿಯೊಂದಿಗೆ ಭೌತಿಕ ರೂಪದಲ್ಲಿ ಸಲ್ಲಿಸಲಾಗುವ ಪ್ರಸ್ತಾವನೆಗಳನ್ನು ಪರಿಗಣಿಸಲಾಗುವುದಿಲ್ಲ.
II) ಮಹಾಲೇಖಪಾಲರ ಕಚೇರಿಯಲ್ಲಿ ಭೌತಿಕ ಸೇವಾವಹಿ ಮತ್ತು ನಮೂನೆ-7 ರ ಮುದ್ರಿತ ಪ್ರತಿಯೊಂದಿಗೆ ನಿಗದಿತ ಆನ್ಲೈನ್ ಪ್ರಕ್ರಿಯೆಯ ಮೂಲಕ ಸಲ್ಲಿಸಲಾಗುವ ಪಿಂಚಣಿ ಪ್ರಸ್ತಾವನೆಗಳನ್ನು ಮಾತ್ರ ಸ್ವೀಕರಿಸಲಾಗುವುದು.
v) ನಮೂನೆ-7 ರ ಮುದ್ರಿತ ಪ್ರತಿ ಮತ್ತು ಭೌತಿಕ ಸೇವಾವಹಿಯನ್ನು ಆನ್ಲೈನ್ನಲ್ಲಿ ಸಲ್ಲಿಸಿದ ನಂತರವೇ ಪಿಂಚಣಿ ಪ್ರಸ್ತಾವನೆಯನ್ನು ಪರಿಶೀಲಿಸುವ ಪ್ರಕ್ರಿಯೆಯು ಪ್ರಾರಂಭವಾಗುತ್ತದೆ ಹಾಗೂ ಸದರಿ ಈ ಪ್ರಕ್ರಿಯೆಯನ್ನು ಸದರಿ ದಿನಾಂಕದಿಂದಲೇ ಪರಿಗಣಿಸಲಾಗುವುದು.
v) ಎಲ್ಲಾ ನಿವೃತ್ತ/ನಿವೃತ್ತಿ ಹೊಂದಿದ ನೌಕರರುಗಳಿಗೆ ನೇಮಕಾತಿ ದಿನಾಂಕದಿಂದ ತಿಂಗಳ ಕೊನೆಯ ಕೆಲಸದ ದಿನಾಂಕ ಅವಧಿಯನ್ನು ಒಳಗೊಂಡಂತೆ ವೇತನ ನಿಗದಿಯನ್ನು ಆಯಾ ಡಿಡಿಓಗಳು ಕಡ್ಡಾಯವಾಗಿ ಮಾಡಿರಬೇಕು ಮತ್ತು ಸರಿಯಾದ ಅಂತಿಮ ವೇತನವನ್ನು ಸೆಳೆದಿರಬೇಕು. ಈ ವಿವರಗಳನ್ನು, ಸರಿಯಾಗಿ ಭರ್ತಿ ಮಾಡಿದ ನಮೂನೆ-7 ರ ಜೊತೆಗೆ, ಕಡ್ಡಾಯ ದಾಖಲೆಗಳನ್ನು ಅಪ್ ಲೋಡ್ ಮಾಡಬೇಕು.
vi) ಈ ಅನುಷ್ಠಾನವು. ವಯೋನಿವೃತ್ತಿ ಪ್ರಕರಣಗಳಿಗೆ ಮಾತ್ರ ಸೀಮಿತವಾಗಿದೆ ಮತ್ತು ಕಾಲಾನಂತರದಲ್ಲಿ ಇತರ ವರ್ಗದ ಪಿಂಚಣಿ ಪ್ರಕರಣಗಳಿಗೆ ವಿಸ್ತರಿಸಲಾಗುವುದು.
3. ಮೇಲ್ಕಂಡಂತೆ, ಮಹಾಲೇಖಪಾಲರು ನೀಡಿರುವ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಸರ್ಕಾರದ ಆದೇಶದಲ್ಲಿನ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ, ರಾಜ್ಯದ ಎಲ್ಲಾ ಡಿಡಿಓ/ಪಿಂಚಣಿ ಮಂಜೂರಾತಿ ಪ್ರಾಧಿಕಾರಿಗಳಿಗೆ ಸೂಚಿಸಲಾಗಿದೆ. ಸೂಚನೆಗಳ ಯಾವುದೇ ಉಲ್ಲಂಘನೆಯಿಂದಾಗಿ ನಿವೃತ್ತಿ ವೇತನದ ಪ್ರಾಧಿಕರಣವು ವಿಳಂಬವಾದಲ್ಲಿ, ಸದರಿ ವಿಳಂಬಕ್ಕೆ ಸಂಬಂಧಿಸಿದ ಡಿಡಿಓ/ಪಿಂಚಣಿ ಮಂಜುರಾತಿ ಪ್ರಾಧಿಕಾರಿಗಳನ್ನು ಹೊಣೆಗಾರರೆಂದು ಪರಿಗಣಿಸಲಾಗುವುದು.
-
BMTC: ಉಚಿತ ಬಸ್ ಪ್ರಯಾಣದ ಹೊರೆ, ಆರ್ಥಿಕ ಸಂಕಷ್ಟದಲ್ಲಿ ಬಿಎಂಟಿಸಿ; ಸರ್ಕಾರದಿಂದ ₹850 ಕೋಟಿ ಪಾವತಿ ವಿಳಂಬ -
12 ಕೋಟಿ ರೂ ಡ್ರಗ್ಸ್ ಜಪ್ತಿ: ಗಂಧದ ನಾಡು 'ಗಾಂಜಾ ಬೀಡು' ಮಾಡಿದ ಕಾಂಗ್ರೆಸ್ ಸರ್ಕಾರ; R ಅಶೋಕ -
Siddaramaiah: ಶಿಸ್ತು, ಪ್ರಾಮಾಣಿಕತೆ ಮತ್ತು ಮಾನವೀಯತೆ ಪೊಲೀಸ್ ಸೇವೆಯ ಆಧಾರ: ಸಿದ್ದರಾಮಯ್ಯ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು











Click it and Unblock the Notifications