ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ!

|
Google Oneindia Kannada News

ಬೆಂಗಳೂರು, ಜು. 22: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಕುರಿತು ಚರ್ಚೆ ಮತ್ತಷ್ಟು ಜೋರಾಗುತ್ತಿದೆ. ಇದೇ ವಿಚಾರದ ಹಿನ್ನೆಲೆಯಲ್ಲಿ ತಮ್ಮ ಪರವಾಗಿ ಯಾರೂ ಕೂಡ ಪ್ರತಿಭಟನೆ ಮಾಡುವುದಾಗಲಿ ಅಥವಾ ಹೇಳಿಕೆಗಳನ್ನು ಕೊಡುವುದಾಗಲಿ ಮಾಡಬಾರದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಆಪ್ತರು ಹಾಗೂ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ಈ ಎಲ್ಲ ಬೆಳವಣಿಗೆಗಳ ಮಧ್ಯೆ ಇಂದು ಮಹತ್ವದ ಸಂಪುಟ ಸಭೆಯೂ ನಡೆಯಲಿದೆ. ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳುವ ಸಾಧ್ಯತೆಯಿದೆ.

ಇಂದಿನ ಸಂಪುಟ ಸಭೆಯಲ್ಲಿ ಆಡಳಿತಾತ್ಮಕ ನಿರ್ಧಾರಗಳನ್ನು ಕೈಗೊಳ್ಳುವ ಮೊದಲು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಎರಡು ವಿಚಾರಗಳನ್ನು ಪ್ರಸ್ತಾಪಿಸುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಮೊದಲನೆಯದಾಗಿ ಜುಲೈ 26ಕ್ಕೆ ರಾಜ್ಯ ಸರ್ಕಾರ ಎರಡು ವರ್ಷ ಪೂರೈಸಲಿದೆ. ಹೀಗಾಗಿ ಈ ಎರಡು ವರ್ಷಗಳಲ್ಲಿ ಸಹಕಾರ ಕೊಟ್ಟಿರುವ ಎಲ್ಲ ಸಚಿವರಿಗೆ ಯಡಿಯೂರಪ್ಪ ಧನ್ಯವಾದಗಳನ್ನು ಹೇಳಲಿದ್ದಾರೆ ಎನ್ನಲಾಗಿದೆ. ಅದಾದ ಬಳಿಕ ನಾಯಕತ್ವ ಬದಲಾವಣೆ ಕುರಿತು ನಡೆಯುತ್ತಿರುವ ಚರ್ಚೆಗಳ ಕುರಿತು ಸ್ವತಃ ಸಿಎಂ ಯಡಿಯೂರಪ್ಪ ಅವರು ಸಂಪುಟ ಸಭೆಯಲ್ಲಿ ಪ್ರಸ್ತಾಪಿಸುವ ಸಾಧ್ಯತೆಗಳಿವೆ.

ಅಭಿಮಾನಿಗಳು, ಆಪ್ತರಲ್ಲಿ ಮಹತ್ವದ ಮನವಿ ಮಾಡಿದ ಮುಖ್ಯಮಂತ್ರಿ ಯಡಿಯೂರಪ್ಪ!ಅಭಿಮಾನಿಗಳು, ಆಪ್ತರಲ್ಲಿ ಮಹತ್ವದ ಮನವಿ ಮಾಡಿದ ಮುಖ್ಯಮಂತ್ರಿ ಯಡಿಯೂರಪ್ಪ!

ಅದರೊಂದಿಗೆ ಹಲವು ಆಡಳಿತಾತ್ಮಕ ನಿರ್ಣಯಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಪ್ರಮುಖವಾಗಿ ಕಂದಾಯ ಇಲಾಖೆಯ ತಹಶೀಲ್ದಾರ್ ಹುದ್ದೆೆಗೆ ಇತರೆ ಇಲಾಖೆಯ ಅಧಿಕಾರಿಗಳನ್ನು ನೇಮಿಸುವ ಬಗ್ಗೆ ಮಹತ್ವದ ತೀರ್ಮಾನ ಚರ್ಚೆಗೆ ಬರುವ ಸಾಧ್ಯತೆ ಇದೆ. ಅದರೊಂದಿಗೆ ರಾಜ್ಯ ಸರ್ಕಾರಿ ನೌಕರರಿಗೆ ಆರೋಗ್ಯ ಸಂಜಿವಿನಿ ಯೋಜನೆ ಅಡಿಯಲ್ಲಿ ನಗದು ರಹಿತ ವೈದ್ಯಕೀಯ ಸೌಲಭ್ಯ ಒದಗಿಸುವುದು. ರಾಜ್ಯದ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಆರ್ಥಿಕವಾಗಿ ಹಿಂದುಳಿದ ಸಮುದಾಯಗಳಿಗೆ ವಸತಿ ಇಲಾಖೆ ಮೂಲಕ 6 ಲಕ್ಷ ಮನೆ ನಿರ್ಮಾಣ ಮಾಡುವ ಕುರಿತು ಸಂಪುಟದಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ.

Important State Cabinet Meeting Will be held in vidhanasoudha today on july 22

ರಾಜ್ಯ ನಾಗರಿಕ ಸೇವಾ ನಿಯಮಗಳಲ್ಲಿ ಹಿಂದುಳಿದ ವರ್ಗಗಳ ಕಲ್ಯಾಾಣ ಇಲಾಖೆಯ ಸೇವಾ ನಿಯಮಗಳ ವಿಧೆಯಕ ತಿದ್ದುಪಡಿ ಮಾಡುವ ಕುರಿತು ಚರ್ಚೆ ಸಾಧ್ಯತೆ ಇದೆ. ಕೃಷಿ ವಿಶ್ವ ವಿದ್ಯಾಲಯಗಳಲ್ಲಿ ಅತ್ಯಾಾಧುನಿಕ ತಂತ್ರಜ್ಞಾನದ ಆವಿಷ್ಕಾಾರ ಅಳವಡಿಕೆ ಮಾಡಲು ಖಾಸಗಿ ಕಂಪನಿ ಸಹಭಾಗಿತ್ವದಲ್ಲಿ ಅಭಿವೃದ್ಧಿ ಕೇಂದ್ರ ಸ್ಥಾಪಿಸುವ ಕುರಿತು ಚರ್ಚಿಸುವ ಸಾಧ್ಯತೆ ಇದೆ.

Important State Cabinet Meeting Will be held in vidhanasoudha today on july 22

ಜುಲೈ 26ಕ್ಕೆ ರಾಜ್ಯ ಬಿಜೆಪಿ ಸರ್ಕಾರಕ್ಕೆ ಎರಡು ವರ್ಷ ತುಂಬಲಿದೆ. ಇದೇ ಸಂದರ್ಭದಲ್ಲಿ ನಾಯಕತ್ವ ಬದಲಾವಣೆ ಮಾಡಲು ಬಿಜೆಪಿ ಹೈಕಮಾಂಡ್ ತೀರ್ಮಾನ ಮಾಡಿದೆ ಎನ್ನಲಾಗಿದೆ. ಆ ವಿಚಾರವನ್ನು ಯಡಿಯೂರಪ್ಪ ಅವರಿಗೆ ಹೈಕಮಾಂಡ್ ತಿಳಿಸಿದೆ ಎನ್ನಲಾಗುತ್ತಿದೆ. ಹೀಗಾಗಿ ಇಂದು ನಡೆಯುವ ರಾಜ್ಯ ಸಚಿವ ಸಂಪುಟ ಸಭೆ ಮಹತ್ವ ಪಡೆದುಕೊಂಡಿದೆ.

English summary
Important State Cabinet meeting will be held in the Vidhanasoudha today. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X