ಕಾಂಗ್ರೆಸ್ ಸರ್ಕಾರದ 5ನೇ ಗ್ಯಾರಂಟಿ ‘ಯುವನಿಧಿ’ ಬಗ್ಗೆ ಮಹತ್ವದ ಮಾಹಿತಿ
ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರ ಪಡೆಯುವಲ್ಲಿ 5 ಗ್ಯಾರಂಟಿ ಯೋಜನೆಗಳ ಆಶ್ವಾಸನೆ ದೊಡ್ಡ ಪಾತ್ರವನ್ನೇ ವಹಿಸಿತ್ತು. ಇದೇ ಕಾರಣಕ್ಕೆ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಯುದ್ಧವೂ ನಡೆಯುತ್ತಿದೆ. ಅದರಲ್ಲೂ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನೇ ಈಗ ಬಿಜೆಪಿ ಅಸ್ತ್ರ ಮಾಡ್ಕೊಂಡು ನಿತ್ಯ ವಾಗ್ದಾಳಿ ನಡೆಸುತ್ತಿದೆ. ಈ ಸಮಯದಲ್ಲೇ ಲೋಕಸಭೆ ಚುನಾವಣೆಯೂ ಬಂದಿದೆ, ಹೀಗಿದ್ದಾಗ ಕಾಂಗ್ರೆಸ್ ಸರ್ಕಾರದ 5ನೇ ಗ್ಯಾರಂಟಿ 'ಯುವನಿಧಿ' ಬಗ್ಗೆ ಮಹತ್ವದ ಮಾಹಿತಿ ಹೊರಬಿದ್ದಿದೆ.
ಕರ್ನಾಟಕಕ್ಕೆ ಮಾತ್ರ ಸೀಮಿತವಾಗಿದ್ದ ಬಿಜೆಪಿ ಮತ್ತು ಕಾಂಗ್ರೆಸ್ ಗ್ಯಾರಂಟಿ ವಾರ್ ಇದೀಗ ದೇಶದ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಅದರಲ್ಲೂ ಲೋಕಸಭೆ ಚುನಾವಣೆಗೆ ಮುನ್ನ ಮತ್ತೊಮ್ಮೆ, ಗ್ಯಾರಂಟಿ ವಾರ್ ಬಲು ಜೋರಾಗುತ್ತಿದೆ. ಇದು ಕಾಂಗ್ರೆಸ್ ನಾಯಕರಿಗೆ ಅಸ್ತ್ರ ಕೊಟ್ಟಂತಾಗಿದೆ. ಎರಡೂ ಪಕ್ಷಗಳ ನಾಯಕರ ನಡುವೆ ಈ ವಿಚಾರಕ್ಕೆ ಭರ್ಜರಿ ಫೈಟಿಂಗ್ ನಡೆಯುತ್ತಿದೆ. ಈ ಮಧ್ಯೆ ಕರ್ನಾಟಕದ ಕಾಂಗ್ರೆಸ್ ಸರ್ಕಾರ ತನ್ನ 5 ಮತ್ತು ಕೊನೆಯ ಗ್ಯಾರಂಟಿ ಯೋಜನೆಯನ್ನ ಜಾರಿಗೆ ತಂದಿದ್ದು, 'ಯುವನಿಧಿ' ಬಗ್ಗೆ ಮಹತ್ವದ ಮಾಹಿತಿ ಇಲ್ಲಿದೆ ಮುಂದೆ ಓದಿ.

'ಯುವನಿಧಿ' ಯೋಜನೆ ಬಗ್ಗೆ ಗಮನಿಸಿ!
ಹೌದು ಕರ್ನಾಟಕ ರಾಜ್ಯದ ಮಹತ್ವಾಕಾಂಕ್ಷಿ ಯೋಜನೆ 'ಯುವನಿಧಿ' ಯೋಜನೆಯಡಿ ಪದವಿ ಅಥವಾ ಸ್ನಾತಕೊತ್ತರ ಪದವಿ ಮತ್ತು ಡಿಪ್ಲೊಮಾ ವ್ಯಾಸಾಂಗ ಮಾಡಿದ್ದ ನಿರುದ್ಯೋಗಿ ಯುವಕ ಮತ್ತು ಯುವತಿಯರಿಗೆ ಬೆಂಬಲ ಸಿಕ್ಕಿದೆ. 2022-23ನೇ ಶೈಕ್ಷಣಿಕ ವರ್ಷದಲ್ಲಿ ವ್ಯಾಸಂಗ ಮಾಡಿ 2023ರಲ್ಲಿ ಪಾಸ್ ಆಗಿ ಅರ್ಹತೆ ಹೊಂದಿದ್ದ ಅಭ್ಯರ್ಥಿಗಳು ಈಗಾಗಲೆ ಸೇವಾ ಸಿಂಧು ಪೋರ್ಟಲ್ ಮೂಲಕ ನೋಂದಣಿ ಆಗಿದ್ದಾರೆ. ರಿಸಲ್ಟ್ ನಂತರ ನಿರುದ್ಯೋಗಿ ಆಗಿ 180 ದಿವಸ ಪೂರೈಸಿದ್ದ ಅಭ್ಯರ್ಥಿಗಳಿಗೆ ಜನವರಿ 2024 ರಂದು ನೇರ ನಗದು ವರ್ಗಾವಣೆ ಮಾಡಲಾಗಿರುತ್ತದೆ.
ಅಭ್ಯರ್ಥಿಗಳು ಈ ಪ್ರಯೋಜನವನ್ನ ಪ್ರತಿ ತಿಂಗಳು ಪಡೆಯಬೇಕಿದ್ರೆ, ಪ್ರತಿ ತಿಂಗಳು ಕೂಡ ತಾನು ನಿರುದ್ಯೋಗಿ ಎಂದು, ವ್ಯಾಸಂಗ ಮುಂದುವರೆಸುತ್ತಿಲ್ಲ ಎಂದು & ಸ್ವಯಂ ಉದ್ಯೋಗಿ ಕೂಡ ಅಲ್ಲವೆಂದು ಸ್ವಯಂ ಘೋಷಣೆ ಮಾಡಬೇಕಾಗಿರುತ್ತೆ. ಪ್ರಸ್ತಕ ಫೆಬ್ರವರಿ ತಿಂಗಳಲ್ಲಿ, ದಿನಾಂಕ: 29-02-2024 ರವರೆಗೆ ಸೇವಾ ಸಿಂಧು ಪೋರ್ಟಲ್‌ನಲ್ಲಿ ಸ್ವಯಂ ಘೋಷಣೆ ಪ್ರಮಾಣ ಪತ್ರವನ್ನ ಸಲ್ಲಿಸಲು ಅವಕಾಶ ಕಲ್ಪಿಸಲಾಗಿರುತ್ತದೆ.
ಹೇಗೆ ಅಪ್‌ಡೇಟ್ ಮಾಡಬೇಕು?
ಪ್ರಯೊಜನೆ ಪಡೆಯುತ್ತಿರುವ ಅರ್ಹ ಅಭ್ಯರ್ಥಿಗಳು ಪ್ರತಿ ತಿಂಗಳು ಸ್ವಯಂ ಘೋಷಣೆ ಮಾಡದೇ ಇದ್ದಲ್ಲಿ ಅಂತಹ ಅಭ್ಯರ್ಥಿಗಳಿಗೆ ನೇರ ನಗದು ವರ್ಗಾವಣೆಯನ್ನು ಮಾಡಲಾಗಲ್ಲ ಎಂಬುದಾಗಿ ತಿಳಿಸಲಾಗಿದೆ. ಈಗಾಗಲೇ ನೋಂದಾಯಿಸಿಕೊಂಡ ಅಭ್ಯರ್ಥಿಗಳಿಗೆ, ಜನವರಿ 2024 ರಲ್ಲಿ ನೇರ ಹಣ ವರ್ಗಾವಣೆ ಮಾಡಲಾಗಿದ್ದು, ಮುಂದಿನ ತಿಂಗಳು ಪ್ರಯೋಜನ ಪಡೆದುಕೊಳ್ಳಲು ಸ್ವಯಂ ಘೋಷಣೆ ಮಾಡಬೇಕಾಗಿರುವ ಕುರಿತು ಎಸ್‌ಎಂಎಸ್ ಸಂದೇಶವನ್ನು ಅಭ್ಯರ್ಥಿಗಳಿಗೆ ರವಾನೆ ಮಾಡಲಾಗಿರುತ್ತದೆ.

ಅಭ್ಯರ್ಥಿಗಳು ಕಡ್ಡಾಯವಾಗಿ ಆಧಾರ್ ಸೀಡೆಡ್ ಬ್ಯಾಂಕ್ ಖಾತೆ ಹೊಂದಿರಬೇಕು ಅಭ್ಯರ್ಥಿಗಳು ಸ್ವಯಂ ಘೋಷಣೆ ಮಾಡಿಕೊಳ್ಳಲು https://sevasindhugs.karnataka.gov.in ವೆಬ್ ಸೈಟ್ ವೀಕ್ಷಿಸಬಹುದು, ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ ಆಗಿರುವ 080-25189112 ಸಂಪರ್ಕಿಸಬಹುದು ಎಂದು ಕೈಗಾರಿಕಾ ತರಬೇತಿ & ಉದ್ಯೋಗ ಇಲಾಖೆ ಆಯುಕ್ತರು ಮಾಹಿತಿ ನೀಡಿದ್ದಾರೆ.












Click it and Unblock the Notifications