ರಾಜ್ಯದಲ್ಲಿ ಸರ್ಕಾರದಿಂದ ಕಾರ್ಮಿಕರ ಕನಿಷ್ಠ ವೇತನ ಹೆಚ್ಚಳ; ಯಾವಾಗ? ಇಲ್ಲಿದೆ ಅಪ್ಡೇಟ್
ಕರ್ನಾಟಕ, ಏಪ್ರಿಲ್, 4: ಕರ್ನಾಟಕ ಸರ್ಕಾರವು ರಾಜ್ಯದ ಕಾರ್ಮಿಕರಿಗೆ ಸಿಹಿಸುದ್ದಿಯನ್ನು ನೀಡುತ್ತಲೇ ಇರುತ್ತದೆ. ಹಾಗೆಯೇ ಇದೀಗ ವೇತನ ಹೆಚ್ಚಳ ಮಾಡಲು ಮುಂದಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹಾಗಾದ್ರೆ ಎಷ್ಟು ಹಾಗೂ ಯಾವಾಗ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ರಾಜ್ಯ ಸರ್ಕಾರವು ಕೌಶಲಯುಕ್ತ ಮತ್ತು ಕೌಶಲ್ಯ ರಹಿತ ಕಾರ್ಮಿಕರ ಕನಿಷ್ಠ ವೇತನ ಹೆಚ್ಚಳ ಮಾಡಲು ಮುಂದಾಗಿದೆ. ಶೀಘ್ರದಲ್ಲೆ ಈ ಬಗ್ಗೆ ಅಧಿಸೂಚನೆ ಹೊರಡಿಸುವ ನಿರೀಕ್ಷೆಯಿದೆ. ಒಂದು ವೇಳೆ, ಕರಡು ಪ್ರಸ್ತಾವನೆಯಲ್ಲಿ ಉಲ್ಲೇಖಿಸಿದಷ್ಟೇ ಪ್ರಮಾಣದಲ್ಲಿ ಕನಿಷ್ಠ ವೇತನ ಹೆಚ್ಚಳ ಮಾಡಿದರೆ, ಕಾರ್ಮಿಕರಿಗೆ ದೇಶದಲ್ಲಿಯೇ ಅತಿ ಹೆಚ್ಚು ಕನಿಷ್ಠ ವೇತನ ನೀಡುವ ರಾಜ್ಯ ಎಂಬ ಕೀರ್ತಿಗೆ ಪಾತ್ರ ಆಗಲಿದೆ.

ಒಟ್ಟು 82 ವಿವಿಧ ಕೆಲಸಗಳಿಗೆ ಕಾರ್ಮಿಕರ ಕನಿಷ್ಠ ವೇತನ ಅನ್ವಯ ಆಗಲಿದೆ. ಈ ಬಗ್ಗೆ 2022ರಲ್ಲಿ ಕರಡು ಅಧಿಸೂಚನೆ ಹೊರಡಿಸಲಾಗಿತ್ತು. ಕರಡು ಅಧಿಸೂಚನೆಯನ್ನು ಕರ್ನಾಟಕ ಕನಿಷ್ಠ ವೇತನ ಸಲಹಾ ಮಂಡಳಿಗೆ ಕಳುಹಿಸಲಾಗುವುದು. ಮಂಡಳಿಯು ಅನುಮೋದನೆ ನೀಡಿದರೆ, ಶೀಘ್ರದಲ್ಲೇ ಸರ್ಕಾರ ಅಧಿವೇಶನ ಹೊರಡಿಸುವ ನಿರೀಕ್ಷೆಯಿದೆ ಎಂದು ಹೇಳಲಾಗುತ್ತಿದೆ.
ವೇತನ ಪರಿಷ್ಕರಣೆಯಿಂದಾಗಿ ಸಂಘಟಿತ ಮತ್ತು ಅಸಂಘಟಿತ ವಲಯಗಳ ಕಾರ್ಮಿಕರಿಗೆ ಪ್ರಯೋಜನ ಆಗಲಿದೆ. ಇದೀಗ ರಾಜ್ಯದಲ್ಲಿ ಕೌಶಲ ಸಹಿತ ಮತ್ತು ಕೌಶಲರಹಿತ ಕಾರ್ಮಿಕರ ಕನಿಷ್ಠ ವೇತನ ತಿಂಗಳಿಗೆ 12,000 ರೂಪಾಯಿ ಇದೆ. ಹೆಚ್ಚಳ ಆದರೆ, ಇದು 20,000 ರೂಪಾಯಿಗೆ ಹೆಚ್ಚಾದಂತಾಗಲಿದೆ.
ಕರ್ನಾಟಕದಲ್ಲಿ ಸಂಘಟಿತ ಮತ್ತು ಅಸಂಘಟಿತ ಸೇರಿದಂತೆ ವಿವಿಧ ವಲಯಗಳ ಸುಮಾರು 1.7 ಕೋಟಿ ಕಾರ್ಮಿಕರಿದ್ದಾರೆ. ಕನಿಷ್ಠ ವೇತನವನ್ನು ಇನ್ನೂ ಅಂತಿಮ ಮಾಡಲಾಗಿಲ್ಲ. ಪ್ರಸ್ತಾವನೆ ಅನುಮೋದನೆಗಾಗಿ ಕನಿಷ್ಠ ವೇತನ ಸಲಹಾ ಮಂಡಳಿಗೆ ಕಳುಹಿಸಬೇಕಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ.
ಕನಿಷ್ಠ ವೇತನ ಕಡಿಮೆ ಇರಬೇಕು ಎಂದು ಉದ್ಯೋಗದಾತರು ಬಯಸಿದ್ದರು. ನಾವು ಎಲ್ಲರ ಹಿತಾಸಕ್ತಿಯನ್ನು ಪರಿಗಣಿಸುತ್ತೇವೆ ಎಂದು ಕಾರ್ಮಿಕ ಇಲಾಖೆ ಮೂಲಗಳು ತಿಳಿಸಿವೆ. ಅಲ್ಲದೆ, ಕನಿಷ್ಠ ವೇತನವನ್ನು ತಿಂಗಳಿಗೆ 35,000 ರೂಪಾಯಿಗೆ ಹೆಚ್ಚಳ ಮಾಡಬೇಕು ಎನ್ನುವ ಆಗ್ರಹಗಳನ್ನು ಕೂಡ ಕಾರ್ಮಿಕ ಸಂಘಟನೆಗಳು ಮಾಡುತ್ತಲೇ ಇವೆ.
ರೈತರಿಗೆ ಗುಡ್ ನ್ಯೂಸ್: ಬೆಳೆಹಾನಿ ಪರಿಹಾರ ಸಂಬಂಧಿಸಿದಂತೆ ಗುಡ್ ನ್ಯೂಸ್‌ವೊಂದನ್ನು ನೀಡಿದೆ. ರಾಜ್ಯ ಸರ್ಕಾರದಿಂದ ಪ್ರಕೃತಿ ವಿಕೋಪಗಳಿಂದ ಉಂಟಾಗುವ ಹಾನಿಗಳಿಗೆ ಪರಿಹಾರ ಪಾವತಿಸಲು ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ ಜಿಲ್ಲಾಧಿಕಾರಿಗಳಿಗೆ ಹಾಗೂ ನಿರ್ದೇಶಕರು, ಕೆಎಸ್‌ಎನ್‌ಡಿಸಿ ಅವರಿಗೆ ಅನುದಾನ ಬಿಡುಗಡೆ ಮಾಡಿ ಆದೇಶಿಸಿದೆ. ಈ ಮೂಲಕ ನೆರೆಹಾನಿಯಿಂದ ಬೆಳೆಹಾನಿಗೊಳಗಾದ ರೈತರಿಗೆ ಶುಭ ಸುದ್ದಿ ನೀಡಿದೆ.












Click it and Unblock the Notifications