ಸರ್ಕಾರಿ ಶಾಲೆ ಅವ್ಯವಸ್ಥೆ ಕುರಿತು ವಿಡಿಯೋ ಬಿಡುಗಡೆ ಮಾಡಿದ ಡಿಕೆಶಿ
ಬೆಂಗಳೂರು, ನವೆಂಬರ್ 14: ದೇಶಾದ್ಯಂತ ಮಕ್ಕಳ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಮಕ್ಕಳ ಭವಿಷ್ಯವನ್ನು ಉತ್ತಮವಾಗಿ ರೂಪಿಸಲು ಮೂಲಭೂತ ಹಕ್ಕಾದ ಶಿಕ್ಷಣವನ್ನು ಉತ್ತಮ ರೀತಿಯಲ್ಲಿ ಒದಗಿಸುವುದು ಸರ್ಕಾರದ ಆದ್ಯ ಕರ್ತವ್ಯವಾಗಿದೆ. ಆದರೆ ರಾಜ್ಯದಲ್ಲಿ ಸರ್ಕಾರಿ ಶಾಲೆಗಳ ಅವ್ಯವಸ್ಥೆ, ಆ ಮೂಲಕ ಮಕ್ಕಳ ಮೇಲಾಗುವ ವ್ಯತಿರಿಕ್ತ ಪರಿಣಾಮದ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ತಮ್ಮ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ವಿಡಿಯೋ ಬಿಡುಗಡೆ ಮಾಡಿದ್ದಾರೆ.
ವಿಡಿಯೋದಲ್ಲಿ ಕರ್ನಾಟಕದ ಪ್ರಸ್ತುತ ಶಿಕ್ಷಣ ಪರಿಸ್ಥಿತಿಯ ಮೇಲೆ ಬೆಳಕು ಚೆಲ್ಲಲಾಗಿದೆ. ಶಿಕ್ಷಣ ಇಲಾಖೆ ಏಕೀಕೃತ ಜಿಲ್ಲಾ ಶಿಕ್ಷಣ ವ್ಯವಸ್ಥೆ ವರದಿಯನ್ನು ಬಿಡುಗಡೆ ಮಾಡಿದ್ದು, ವರದಿಯಲ್ಲಿ ರಾಜ್ಯ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಸಂಖ್ಯೆ ಹೆಚ್ಚಿದ್ದರೂ ಶಿಕ್ಷಕರ ಸಂಖ್ಯೆ ಕಡಿಮೆಯಿರುವುದು ಉಲ್ಲೇಖವಾಗಿದೆ. ಇದು ಶಿಕ್ಷಣದ ಗುಣಮಟ್ಟದ ಮೇಲೆ ಪರಿಣಾಮ ಬೀರುವುದರಲ್ಲಿ ಅನುಮಾನವಿಲ್ಲ.
ರಾಜ್ಯದಲ್ಲಿ ಒಟ್ಟು ಶಾಲೆಗಳ ಸಂಖ್ಯೆ 76,450. ಅದರಲ್ಲಿ 49,679 ಸರ್ಕಾರಿ ಶಾಲೆಗಳು, 7,110 ಸರ್ಕಾರಿ ಅನುದಾನಿತ ಶಾಲೆಗಳು, 19,650 ಖಾಸಗಿ ಅನುದಾನರಹಿತ ಮಾನ್ಯತೆ ಪಡೆದ ಶಾಲೆಗಳಿವೆ. ರಾಜ್ಯದ ಶಾಲೆಗಳಲ್ಲಿ ದಾಖಲಾತಿ ಸಂಖ್ಯೆ 2021ರಲ್ಲಿ 1.18 ಕೋಟಿ ಇದ್ದದ್ದು 2022ರ ವೇಳೆಗೆ 1.20 ಕೋಟಿಯಾಗಿದೆ. 2021-22ನೇ ಸಾಲಿನಲ್ಲಿ 8 ಲಕ್ಷಕ್ಕೂ ಹೆಚ್ಚು ಹೊಸ ವಿದ್ಯಾರ್ಥಿನಿಯರು ದಾಖಲಾಗುವುದರ ಜೊತೆಗೆ ಇದೇ ಸಾಲಿನಲ್ಲಿ ಎಸ್ಸಿ, ಎಸ್ಟಿ, ಒಬಿಸಿ ಮತ್ತು ಸಿಡಬ್ಲ್ಯೂಎಸ್ಎನ್ ಅಡಿಯಲ್ಲಿ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಳವಾಗಿರುವುದು ಆಶಾದಾಯಕ ಬೆಳವಣಿಗೆಯಾಗಿದೆ.

2020-21 ಯುಡಿಐಎಸ್ಇ+ ವರದಿಗೆ ಹೋಲಿಸಿದರೆ, ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಸಂಖ್ಯೆ 2.08 ಲಕ್ಷದಿಂದ 1.99 ಲಕ್ಷಕ್ಕೆ ಇಳಿಕೆಯಾಗಿದ್ದು, ಪ್ರಾಥಮಿಕ ಹಂತದಲ್ಲಿ ಸುಮಾರು 23 ವಿದ್ಯಾರ್ಥಿಗಳಿಗೆ ಓರ್ವ ಶಿಕ್ಷಕರು ಇರುವಂತಾಗಿರುವುದು ಕಳವಳಕಾರಿಯಾಗಿದೆ.
ಕರ್ನಾಟಕದಲ್ಲಿ 47,608 ಸರ್ಕಾರಿ ಶಾಲೆಗಳಿವೆ. 45.42 ಲಕ್ಷ ವಿದ್ಯಾರ್ಥಿಗಳು ಓದುತ್ತಿದ್ದು, ಒಟ್ಟು 2.5 ಲಕ್ಷ ತರಗತಿಗಳಿವೆ. ಈ ಪೈಕಿ 40 ಸಾವಿರ ತರಗತಿಗಳನ್ನು ತುರ್ತು ರಿಪೇರಿ ಮಾಡಿಸಬೇಕಿದ್ದು, ಮಕ್ಕಳ ಹಿತಾಸಕ್ತಿಗೆ ಸರ್ಕಾರ ಮುಂದಾಗಬೇಕಿದೆ.
ರಾಜ್ಯದಲ್ಲಿ ಆರ್‌ಟಿಇ ಮೂಲೆಗುಂಪಾಗಿರುವುದು ದುರದೃಷ್ಟಕರ. ಅಂಕಿ ಅಂಶಗಳ ಪ್ರಕಾರ ಆರ್‌ಟಿಇ ಮಾನದಂಡಗಳನ್ನು ಅನುಸರಿಸುವಲ್ಲಿ ರಾಜ್ಯವು ಶೇಕಡಾ 23.6ರಷ್ಟು ಕಡಿಮೆ ಅನುಸರಣೆ ದರ ಹೊಂದಿದೆ. ಸರ್ಕಾರಿ ಶಾಲೆಗಳಲ್ಲಿ ನೀರು, ವಿದ್ಯುತ್‌ನಂತಹ ಸೌಲಭ್ಯಗಳ ಕೊರತೆ ಹೆಚ್ಚಳವಾಗಿರುವುದು ಜಡ್ಡುಗಟ್ಟಿದ ವ್ಯವಸ್ಥೆಗೆ ಹಿಡಿದ ಕೈಗನ್ನಡಿಯಾಗಿದೆ.

ಕಲ್ಯಾಣ ಕರ್ನಾಟಕ ಭಾಗ; ಕಲ್ಯಾಣ-ಕರ್ನಾಟಕದ 8,028 ಪ್ರಾಥಮಿಕ ಶಾಲೆಗಳ ಪೈಕಿ 1,234 ಶಾಲೆಗಳು ಮತ್ತು 4,663 ತರಗತಿ ಕೊಠಡಿಗಳು ಶಿಥಿಲಾವಸ್ಥೆಯಲ್ಲಿವೆ. ಒಟ್ಟು 1,193 ಪ್ರೌಢಶಾಲೆಗಳ ಪೈಕಿ 237 ಶಾಲೆಗಳು ಮತ್ತು 762 ತರಗತಿ ಕೊಠಡಿಗಳು ಶಿಥಿಲಾವಸ್ಥೆಯಲ್ಲಿವೆ. ಕಲಬುರಗಿಯಲ್ಲಿ 187, ಬಳ್ಳಾರಿಯಲ್ಲಿ 168, ಕೊಪ್ಪಳದಲ್ಲಿ 118, ರಾಯಚೂರಿನಲ್ಲಿ 100, ಯಾದಗಿರಿಯಲ್ಲಿ 97 ತರಗತಿ ಕೊಠಡಿಗಳು ಶಿಥಿಲಾವಸ್ಥೆಯಲ್ಲಿದೆ.
ಇನ್ನು, ಶಿವಮೊಗ್ಗ ಜಿಲ್ಲೆಯಲ್ಲಿ 2,001 ಸರ್ಕಾರಿ ಶಾಲೆಗಳಿದ್ದು, 11,842 ತರಗತಿ ಕೊಠಡಿಗಳಿವೆ. ಅವುಗಳಲ್ಲಿ ಸುಮಾರು 2,000 ತರಗತಿ ಕೊಠಡಿಗಳಿಗೆ ನಿರ್ವಹಣಾ ಕಾರ್ಯದ ಅಗತ್ಯವಿದೆ. ದಾವಣಗೆರೆ ಜಿಲ್ಲೆಯಲ್ಲಿ ಬಹಳಷ್ಟು ಕೊಠಡಿಗಳು ತರಗತಿ ನಡೆಸಲು ಯೋಗ್ಯವಾಗಿಲ್ಲ. ಜಿಲ್ಲೆಯಲ್ಲಿ 72 ತರಗತಿ ಕೊಠಡಿಗಳನ್ನು ಕೆಡವಲು ಗುರುತಿಸಲಾಗಿದೆ. ಚಿತ್ರದುರ್ಗದ ಸರ್ಕಾರಿ ಬಾಲಕರ ಪ್ರೌಢಶಾಲೆ ಮತ್ತು ಜೂನಿಯರ್ ಕಾಲೇಜು ಕಟ್ಟಡ ಯಾವಾಗ ಬೀಳುತ್ತದೆಯೋ ಗೊತ್ತಿಲ್ಲ.
ಈ ಎಲ್ಲ ಅಂಶಗಳನ್ನು ಕೆಪಿಸಿಸಿ ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ಅವರು ಬಿಡುಗಡೆಗೊಳಿಸಿರುವ ವಿಡಿಯೋದಲ್ಲಿ ವಿವರವಾಗಿ ತಿಳಿಸಲಾಗಿದ್ದು, ಶಾಲೆಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿ ಮಕ್ಕಳ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಸರ್ಕಾರದ ಗಮನ ಸೆಳೆಯಲಾಗಿದೆ.
ಅಲ್ಲದೇ 2023ರಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಸರ್ಕಾರಿ ಶಾಲೆಗಳ ಪರಿಸ್ಥಿತಿಯನ್ನು ಸುಧಾರಿಸುವುದು ನಮ್ಮ ಮೊದಲ ಆದ್ಯತೆ ಎಂದು ಅವರು ತಿಳಿಸಿದ್ದಾರೆ.
-
ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ -
IPL 2026 Free Ticket: ರಾಜ್ಯದ ಶಾಸಕರಿಗೆ ಪ್ರತಿ ಪಂದ್ಯಕ್ಕೂ 3 ಟಿಕೆಟ್ ಉಚಿತ; ಡಿ.ಕೆ.ಶಿವಕುಮಾರ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ












Click it and Unblock the Notifications