48 ಗಂಟೆಗಳಲ್ಲಿ ರಾಜ್ಯದಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಹೈ ಅಲರ್ಟ್

ಬೆಂಗಳೂರು, ನವೆಂಬರ್ 10: ಮುಂದಿನ 48 ಗಂಟೆಗಳಲ್ಲಿ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು, ಮೈಸೂರು, ಕೊಡಗು,ಬೆಳಗಾವಿ ಸೇರಿದಂತೆ ಹಲವೆಡೆ ಶನಿವಾರ ಧಾರಾಕಾರ ಮಳೆ ಸುರಿದಿದೆ. ಬೆಂಗಳೂರಲ್ಲಿ ಸುಮಾರು ಒಂದೂವರೆ ಗಂಟೆಗಳ ಕಾಲ ಮಳೆ ಸುರಿದಿದೆ.

ಬೆಳಗ್ಗೆಯಿಂದ ನಗರದಲ್ಲಿ ಬಿಸಿಲು ಇತ್ತು. ಸಂಜೆ ವೇಳೆ ಮೋಡ ಕವಿದ ವಾತಾವರಣ ಕಾಣಿಸಿಕೊಂಡಿತ್ತು. ರಾತ್ರಿ 9ರ ಸುಮಾರಿಗೆ ಜಿಟಿ ಜಿಟಿ ಮಳೆ ಆರಂಭವಾಗಿ ಸುಮಾರು 10.30ರವರೆಗೂ ಸುರಿದಿತ್ತು.

ಬುಲ್ ಬುಲ್ ಚಂಡಮಾರುತದ ಪ್ರಭಾವ ಎಲ್ಲೆಡೆ ಗೋಚರವಾಗುತ್ತಿದೆ. ಮೈಸೂರಿನಲ್ಲೂ ಗುಡುಗು ಮಿಂಚಿನಿಂದ ಕೂಡಿದ ಮಳೆ ಸುರಿಯಿತು.ಸಂಜೆ ಆರಂಭವಾದ ಮಳೆ ತಡರಾತ್ರಿವರೆಗೂ ಸುರಿದಿದೆ.

ಬೆಂಗಳೂರಲ್ಲಿ ಭಾನುವಾರವೂ ಮಳೆ ಸಾಧ್ಯತೆ

ಬೆಂಗಳೂರಲ್ಲಿ ಭಾನುವಾರವೂ ಮಳೆ ಸಾಧ್ಯತೆ

ಇಂದಿರಾನಗರ, ಎಂಜಿ ರಸ್ತೆ, ಶಿವಾಜಿನಗರ, ಚಾಮರಾಜಪೇಟೆ, ಜಯನಗರ, ಹನುಮಂತನಗರ, ಗಿರಿನಗರ, ಬಸವನಗುಡಿ, ವಿಜಯನಗರ, ಬಸವೇಶ್ವರನಗರ, ರಾಜಾಜಿನಗರ, ಯಶವಂತಪುರ, ಮತ್ತಿಕೆರೆ, ಪೀಣ್ಯ, ವಿದ್ಯಾರಣ್ಯಪುರ, ಹೆಬ್ಬಾಳ ಸುತ್ತಮುತ್ತಲಿನ ಪ್ರದೇಶದಲ್ಲಿ ಹೆಚ್ಚು ಮಳೆಯಾಗಿದೆ. ಭಾನುವಾರವೂ ಕೂಡ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

 ಎಲ್ಲೆಲ್ಲಿ 48 ಗಂಟೆಗಳಲ್ಲಿ ಮಳೆ

ಎಲ್ಲೆಲ್ಲಿ 48 ಗಂಟೆಗಳಲ್ಲಿ ಮಳೆ

ಮುಂದಿನ 48 ಗಂಟೆಗಳಲ್ಲಿ ಮಂಡ್ಯ, ಬೆಳಗಾವಿ, ಬೆಂಗಳೂರಿನಲ್ಲಿ ಹೆಚ್ಚು ಮಳೆ ಬೀಳಲಿದೆ. ಶನಿವಾರ ಮಂಡ್ಯದ ಕೃಷ್ಟರಾಜಸಾಗರದಲ್ಲಿ ಅತಿ ಹೆಚ್ಚು ಅಂದರೆ 16 ಸೆಂ.ಮೀ ಮಳೆಯಾಗಿದೆ. ಶ್ರೀರಂಗಪಟ್ಟಣದಲ್ಲಿ 8 ಸೆಂ.ಮೀ, ಹಾರಂಗಿ, ಮೈಸೂರು, ಕೊಳ್ಳೇಗಾಲ, ಯಳಂದೂರು, ಮಳವಳ್ಳಿ, ಕುಶಾಲನಗರ, ಕೃಷ್ಣರಾಜಪೇಟೆಯಲ್ಲಿ ಹೆಚ್ಚು ಮಳೆಯಾಗಿದೆ.

ಉತ್ತರ ಕರ್ನಾಟಕದಲ್ಲಿ ಒಣಹವೆ

ಉತ್ತರ ಕರ್ನಾಟಕದಲ್ಲಿ ಒಣಹವೆ

ಕರ್ನಾಟಕದ ಕರಾವಳಿ ಭಾಗ, ಮೈಸೂರು ಇನ್ನು ಕೆಲವಡೆ ಮಾತ್ರ ಮಳೆಯಾಗಲಿದ್ದು, ಉತ್ತರ ಕರ್ನಾಟಕದಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬುಲ್ ಬುಲ್ ಚಂಡಮಾರುತದ ಪ್ರಭಾವ

ಬುಲ್ ಬುಲ್ ಚಂಡಮಾರುತದ ಪ್ರಭಾವ

ಬುಲ್‌ಬುಲ್ ಚಂಡಮಾರುತದ ಪ್ರಭಾವ ಕರ್ನಾಟಕದಲ್ಲೂ ಕಾಣಿಸಿಕೊಂಡಿದೆ. ಇನ್ನು ಕೊಲ್ಕತ್ತ, ಬಂಗ್ಲಾದೇಶ, ಪಶ್ಚಿಮ ಬಂಗಾಳ ಸೇರಿದಂತೆ ಹಲವೆಡೆ ಭಾರಿ ಅನಾಹುತವನ್ನೇ ಸೃಷ್ಟಿಸುವ ಮಟ್ಟಿಗೆ ಚಂಡಮಾರುತ ಸನ್ನದ್ಧವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+