ರಾಯಚೂರಿನಲ್ಲಿ ಭೀಕರ ಅಪಘಾತ: ಒಂದೇ ಕುಟುಂಬದ ಐವರ ದುರ್ಮರಣ
ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಬೂದಿಹಾಳ ಕ್ಯಾಂಪ್ ಬಳಿ ನಿನ್ನೆ ರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ (ಮೇ 19) ಒಂದೇ ಕುಟುಂಬದ ಐವರು ಮರಣಹೊಂದಿದ ಹೃದಯವಿದ್ರಾವಕ ಘಟನೆ ನಡೆದಿದೆ.
ರಾಯಚೂರು, ಮೇ 20: ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಬೂದಿಹಾಳ ಕ್ಯಾಂಪ್ ಬಳಿ ನಿನ್ನೆ ರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ (ಮೇ 19) ಒಂದೇ ಕುಟುಂಬದ ಐವರು ಮರಣಹೊಂದಿದ ಹೃದಯವಿದ್ರಾವಕ ಘಟನೆ ನಡೆದಿದೆ.

ಮೃತರನ್ನು ಹುಸೇನ್ ಪಾಷಾ (35), ಮಾಲಾನಾ (30), ಸಾಬಿರಾ (14), ಗುಲಾಬಿ(5), ಮೆಹಬೂಬ್ (3) ಎಂದು ಗುರುತಿಸಲಾಗಿದೆ. ಐವರೂ ಕೊಪ್ಪಳ ಜಿಲ್ಲೆಯ ಗಂಗಾವತಿ ಮೂಲದವರಾಗಿದ್ದು, ತಮ್ಮ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಎದುರಿನಲ್ಲಿ ಹೋಗುತ್ತಿದ್ದ ಲಾರಿಯನ್ನು ಓವರ್ ಟೇಕ್ ಮಾಡುವ ಸಂದರ್ಭದಲ್ಲಿ ಘಟನೆ ನಡೆದಿದೆ.
ಕಾರಿನಲ್ಲಿದ್ದ ಇನ್ನೊಬ್ಬ ಮಗುವಿಗೆ ತೀವ್ರ ಗಾಯಗಳಾಗಿದ್ದು ಆಸ್ಪತ್ರೆಗೆ ಸೇರಿಸಲಾಗಿದೆ.












Click it and Unblock the Notifications