ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಟ್ವೀಟ್‌ನಲ್ಲೇ ಕಿರಿಯ ಬಸವರಾಜ ಬೊಮ್ಮಾಯಿ ಕಿವಿ ಹಿಂಡಿದ ಸಿದ್ದರಾಮಯ್ಯ!

|
Google Oneindia Kannada News

ಬೆಂಗಳೂರು, ಅಕ್ಟೋಬರ್ 14; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್‌ಗಳಿಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. "ನಾನು ಕಾನೂನು ಕ್ರಮಕ್ಕೆ ಮುಂದಾಗಬಹುದು. ಕಿರಿಯರಿದ್ದೀರಿ ತಿದ್ದಿಕೊಳ್ಳಿ ಎಂದಷ್ಟೇ ಹೇಳಬಲ್ಲೆ" ಎಂದು ಟ್ವೀಟ್ ಮೂಲಕ ಕಿವಿ ಹಿಂಡಿದ್ದಾರೆ.

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ನಡೆದ ಹಿಂದೂ ಸಂಘಟನೆಯ ನಾಯಕರ ಹತ್ಯೆ, ಟಿಪ್ಪು ಜಯಂತಿ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದರು. "ನಾನು ನಿಮ್ಮಿಂದ ಆಡಳಿತ ಮತ್ತು ಪೊಲೀಸಿಂಗ್ ಬಗ್ಗೆ ತಿಳಿಯಬೇಕಿಲ್ಲ" ಎಂದು ಹೇಳಿದ್ದರು.

ಸಿದ್ದರಾಮಯ್ಯ ಕಾಂಗ್ರೆಸ್ ಮುಳುಗಿಸಲು ಪ್ಲಾನ್ ಮಾಡುತ್ತಿದ್ದಾರೆ; ಎಚ್‌ಡಿಕೆ ಸಿದ್ದರಾಮಯ್ಯ ಕಾಂಗ್ರೆಸ್ ಮುಳುಗಿಸಲು ಪ್ಲಾನ್ ಮಾಡುತ್ತಿದ್ದಾರೆ; ಎಚ್‌ಡಿಕೆ

ಗುರುವಾರ ಸಿದ್ದರಾಮಯ್ಯ ಸರಣಿ ಟ್ವೀಟ್ ಮೂಲಕ ಬಸವರಾಜ ಬೊಮ್ಮಾಯಿಗೆ ಉತ್ತರ ಕೊಟ್ಟಿದ್ದಾರೆ. "ನಾನೇ ಹಿಂದೂಗಳನ್ನು ಕೊಲ್ಲಿಸಿದೆ ಎಂದು ನಿಮ್ಮ ಪರಿವಾರದ ಕೂಗುಮಾರಿಗಳ ರೀತಿ ಆರೋಪ ಮಾಡಿದ್ದೀರಿ. ಈ ಆರೋಪಕ್ಕಾಗಿ ನಾನು ಕಾನೂನುಕ್ರಮಕ್ಕೆ ಮುಂದಾಗಬಹುದು. ಕಿರಿಯರಿದ್ದೀರಿ ತಿದ್ದಿಕೊಳ್ಳಿ ಎಂದಷ್ಟೇ ಹೇಳಬಲ್ಲೆ" ಎಂದು ತಿಳಿಸಿದ್ದಾರೆ.

ಕಲಬುರಗಿ; ಸಿದ್ದರಾಮಯ್ಯ ಸಭೆ ವೇಳೆ ಕಂಪಿಸಿದ ಭೂಮಿ! ಕಲಬುರಗಿ; ಸಿದ್ದರಾಮಯ್ಯ ಸಭೆ ವೇಳೆ ಕಂಪಿಸಿದ ಭೂಮಿ!

"ಗೃಹ ಸಚಿವರಾಗಿದ್ದ ನೀವು ಈಗ ಮುಖ್ಯಮಂತ್ರಿಯಾಗಿದ್ದೀರಿ. ನನ್ನ ಸರ್ಕಾರದ ಕಾಲದಲ್ಲಿ ನೂರಾರು ಹಿಂದೂಗಳ ಹತ್ಯೆಯಾಯಿತು ಎಂದು ಕಾಗಕ್ಕ-ಗುಬ್ಬಕ್ಕ ಕತೆ ಹೇಳುತ್ತಾ ಕೂರಬೇಡಿ" ಎಂದು ಮುಖ್ಯಮಂತ್ರಿ ಬಸವರಾ ಬೊಮ್ಮಾಯಿಗೆ ಸಲಹೆಯನ್ನು ಸಿದ್ದರಾಮಯ್ಯ ನೀಡಿದ್ದಾರೆ.

ಸಿದ್ದರಾಮಯ್ಯ, ಡಿಕೆಶಿ, ಎಚ್‌ಡಿಕೆಗೆ ಒಂದು ಮಾತು ಹೇಳಿದ ಈಶ್ವರಪ್ಪ! ಸಿದ್ದರಾಮಯ್ಯ, ಡಿಕೆಶಿ, ಎಚ್‌ಡಿಕೆಗೆ ಒಂದು ಮಾತು ಹೇಳಿದ ಈಶ್ವರಪ್ಪ!

ಕೋಮುವಾದಿದ ಪಕ್ಷಕ್ಕೆ ಸೇರಿಕೊಂಡಿದ್ದು ಏಕೆ?

ಕೋಮುವಾದಿದ ಪಕ್ಷಕ್ಕೆ ಸೇರಿಕೊಂಡಿದ್ದು ಏಕೆ?

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ನನ್ನಿಂದ ಆಡಳಿತವನ್ನಾಗಲಿ, ಪೊಲೀಸಿಂಗ್ ಆಗಲಿ ಕಲಿಯಬೇಕಿಲ್ಲ ಎಂದು ಹೇಳಿದ್ದೀರಿ, ಧನ್ಯವಾದಗಳು. ನನ್ನಿಂದಾಗಲಿ, ನಿಮ್ಮ ತಂದೆ ಎಸ್.ಆರ್.ಬೊಮ್ಮಾಯಿ ಅವರಿಂದಾಗಲಿನೀವು ಏನಾದರೂ ಕಲಿತಿದ್ದರೆ, ಕೇವಲ ಅಧಿಕಾರಕ್ಕಾಗಿ ಕೋಮುವಾದಿ ಪಕ್ಷದ ಜೊತೆ ಹೇಗೆ ಸೇರಿಕೊಳ್ಳುತ್ತಿದ್ದೀರಿ ಅಲ್ಲವೇ?" ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

"ಹಿಂದೂಗಳ ಹತ್ಯೆ ಬಗ್ಗೆ ಕಣ್ಣೀರು ಸುರಿಸುತ್ತಿರುವ ಬಸವರಾಜ ಬೊಮ್ಮಾಯಿ ಅವರೇ, ಹೊನ್ನಾವರದ ಪರೇಶ್ ಮೇಸ್ತಾ ಹತ್ಯೆಯ ಪ್ರಕರಣ ತನಿಖೆಯನ್ನು ಸಿಬಿಐ ನಡೆಸುತ್ತಿದೆ, ನಿಮ್ಮ ಪ್ರಭಾವ ಬೀರಿ ಶೀಘ್ರವಾಗಿ ಈ ಹತ್ಯೆಯ ಅಪರಾಧಿಗಳನ್ನು ಪತ್ತೆಹಚ್ಚಿ ಶಿಕ್ಷಿಸಿ ಒಬ್ಬ ಹಿಂದು ಯುವಕನ ಸಾವಿಗೆ ನ್ಯಾಯಕೊಡಿಸಲು ಪ್ರಯತ್ನಿಸುವಿರಾ?" ಎಂದು ಹೇಳಿದ್ದಾರೆ.

ನಗೆಪಾಟಲಿಗೀಡಾಗಿದ್ದು ನೆನಪಿದೆಯೇ?

'2013-18ರ ಅವಧಿಯಲ್ಲಿ ಕೋಮು ಸಂಘರ್ಷದಲ್ಲಿ ಹತ್ಯೆಗೀಡಾಗಿದ್ದ ಹತ್ತು ಹಿಂದುಗಳ ಹತ್ಯೆಯ ಆರೋಪಿಗಳು ಎಸ್ ಡಿಪಿಐ/ಪಿಎಫ್ಐ ಸಂಘಟನೆಯವರು. ಹನ್ನೊಂದು ಮುಸ್ಲಿಮ್ ಮತ್ತು ಹತ್ತು ಹಿಂದುಗಳ ಹತ್ಯೆಯ ಆರೋಪಿಗಳು ಭಜರಂಗದಳ ಮತ್ತು ಹಿಂದು ಜಾಗರಣಾ ವೇದಿಕೆಗೆ ಸೇರಿದವರು'

'ನಾನು ಮುಖ್ಯಮಂತ್ರಿಯಾಗಿದ್ದಾಗ ಹತ್ಯೆಗೀಡಾಗಿದ್ದಾರೆಂದು ಆರೋಪಿಸಿ ನಿಮ್ಮ ಪಕ್ಷದವರೇ ಕೇಂದ್ರ ಸರ್ಕಾರಕ್ಕೆ ಕಳಿಸಿದ್ದ ಪಟ್ಟಿಯಲ್ಲಿದ್ದ ಜೀವಂತವಾಗಿ ಇರುವ ಅಶೋಕ್ ಪೂಜಾರಿ ಅವರ ಹೆಸರನ್ನು ಸೇರಿಸಿರುವ ನಿಮ್ಮ ಪಕ್ಷ ತನ್ನ ಬಣ್ಣ ತಾನೇ ಬಯಲು ಮಾಡಿಕೊಂಡು ನಗೆಪಾಟಲಿಗೀಡಾಗಿದ್ದು ನೆನಪಿದೆಯೇ?' ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

ಕತೆ ಹೇಳುತ್ತಾ ಕೂರಬೇಡಿ

'ಬಸವರಾಜ ಬೊಮ್ಮಾಯಿ ಅವರೇ, ನೀವು ಗೃಹಸಚಿವರಾಗಿದ್ದವರು, ಈಗ ಮುಖ್ಯಮಂತ್ರಿ ಆಗಿದ್ದೀರಿ. ನನ್ನ ಸರ್ಕಾರದ ಕಾಲದಲ್ಲಿ ನೂರಾರು ಹಿಂದೂಗಳ ಹತ್ಯೆಯಾಯಿತು ಎಂದು ಕಾಗಕ್ಕ-ಗುಬ್ಬಕ್ಕ ಕತೆ ಹೇಳುತ್ತಾ ಕೂರಬೇಡಿ, ನಾವೇ ಪ್ರಕಟಿಸಿದ ಅಧಿಕೃತ ಮಾಹಿತಿ ಕೊಡುತ್ತೇನೆ. ತನಿಖೆ ಮಾಡಿ ಜನರಿಗೆ ಸತ್ಯ ತಿಳಿಸಿ'

ದಕ್ಷಿಣ ಕನ್ನಡದ ಪ್ರಕಾಶ್ ಕುಳಾಯಿ, ಕೇಶವ ಶೆಟ್ಟಿ, ಹರೀಶ್ ಪೂಜಾರಿ, ಬ್ರಹ್ಮಾವರದ ಪ್ರವೀಣ್ ಪೂಜಾರಿ, ಚಿಕ್ಕಮಗಳೂರಿನ ಕಲ್ಲಪ್ಪ ಹಂಡಿಬಾಗ್ ಮತ್ತು ಧನ್ಯಶ್ರೀ ಹಾಗೂ ವಿಜಯಪುರದ ದಾನಮ್ಮ ಹತ್ಯೆಯ ಆರೋಪಿಗಳನ್ನು ಕೂಡಾ ದಯವಿಟ್ಟು ಶಿಕ್ಷಿಸಿ. ಬಸವರಾಜ ಬೊಮ್ಮಾಯಿ ಅವರೇ ಇವರೆಲ್ಲರೂ ಹಿಂದುಗಳು ಎನ್ನುವುದು ನೆನಪಲ್ಲಿರಲಿ' ಎಂದು ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದಾರೆ.

ನ್ಯಾಯ ಕೊಡಿಸಲು ಪ್ರಯತ್ನಿಸಿ

ನ್ಯಾಯ ಕೊಡಿಸಲು ಪ್ರಯತ್ನಿಸಿ

'ಹಿಂದೂಗಳ ಹತ್ಯೆ ಬಗ್ಗೆ ಕಣ್ಣೀರು ಸುರಿಸುತ್ತಿರುವ ಬಸವರಾಜ ಬೊಮ್ಮಾಯಿ ಅವರೇ, ಹೊನ್ನಾವರದ ಪರೇಶ್ ಮೇಸ್ತಾ ಹತ್ಯೆಯ ಪ್ರಕರಣ ತನಿಖೆಯನ್ನು ಸಿಬಿಐ ನಡೆಸುತ್ತಿದೆ, ನಿಮ್ಮ ಪ್ರಭಾವ ಬೀರಿ ಶೀಘ್ರವಾಗಿ ಈ ಹತ್ಯೆಯ ಅಪರಾಧಿಗಳನ್ನು ಪತ್ತೆಹಚ್ಚಿ ಶಿಕ್ಷಿಸಿ ಒಬ್ಬ ಹಿಂದು ಯುವಕನ ಸಾವಿಗೆ ನ್ಯಾಯಕೊಡಿಸಲು ಪ್ರಯತ್ನಿಸುವಿರಾ?'

'ಮಂಗಳೂರಿನ ವಿನಾಯಕ ಬಾಳಿಗಾ ಅವರ ಹತ್ಯೆಯ ಪ್ರಮುಖ ಆರೋಪಿಯಾದ ನರೇಶ್ ಶೆಣೈಯ ಖಾಸಾ ದೋಸ್ತ್ ನಿಮ್ಮ ಪಕ್ಷದ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಕಟ್ಟಾ ಹಿಂದೂ ಆಗಿದ್ದ ಬಾಳಿಗಾ ಅವರ ಕೊಲೆಗಡುಕರನ್ನು ಶಿಕ್ಷಿಸಲು ಹೋರಾಡುತ್ತಿರುವ ಸೋದರಿಯರಿಗೆ ದಯವಿಟ್ಟು ನೀವಿಬ್ಬರೂ ಕೂಡಿ ನ್ಯಾಯ ಕೊಡಿಸಿ ಬಸವರಾಜ ಬೊಮ್ಮಾಯಿ' ಎಂದು ಹೇಳಿದ್ದಾರೆ.

Recommended Video

IPL ಚಾಂಪಿಯನ್ ತಂಡಕ್ಕೆ ಸಿಕ್ಕ ಬಹುಮಾನ ಮೊತ್ತವೆಷ್ಟು? RCBಗೆ ಎಷ್ಟು ಸಿಕ್ತು? | Oneindia Kannada

ಕುಣಿದಾಡಿದ ಫೋಟೋಗಳನ್ನು ನೋಡಿ

'ಬಸವರಾಜ ಬೊಮ್ಮಾಯಿ ಅವರೇ, ನೀವು ಮತ್ತು ನಿಮ್ಮ ಪಕ್ಷದ ನಾಯಕರು ಆಗಾಗ ಟಿಪ್ಪು ಸುಲ್ತಾನ ಹೆಸರಿನ ಜಪ ಮಾಡುವ ಮೊದಲು ನಿಮ್ಮದೇ ನಾಯಕರಾದ ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಆರ್. ಅಶೋಕ ಸೇರಿದಂತೆ ನಿಮ್ಮದೇ ಪಕ್ಷದ ನಾಯಕರು ಟಿಪ್ಪು ವೇಷ ಹಾಕಿ ಖಡ್ಗಹಿಡಿದು ಕುಣಿದಾಡಿದ ಪೋಟೊಗಳನ್ನು ನೋಡಿ ಕಣ್ತುಂಬಿಕೊಳ್ಳಿ' ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

English summary
In a tweet opposition leader Siddaramaiah said that like an ignorant, you have alleged that I got Hindus killed. Being chief minister of Karnataka you should have thought through before making such loose comments. I can file a defamation case for this but I will just advise you to correct yourself.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X