ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿದ್ಯಾರ್ಥಿಗಳಿಗೆ ಶೇ.54.74ರಷ್ಟು ಪಠ್ಯ ಪುಸ್ತಕ ಪೂರೈಕೆ: ಸರ್ಕಾರ ಮಾಹಿತಿ

|
Google Oneindia Kannada News

ಬೆಂಗಳೂರು, ಆಗಸ್ಟ್ 31: ರಾಜ್ಯದಲ್ಲಿ ಸರ್ಕಾರಿ, ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ಶೇ.54.74ರಷ್ಟು ಪಠ್ಯ ಪುಸ್ತಕ ಪೂರೈಕೆಯಾಗಿದೆ ಎಂದು ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.

ವಿಚಾರಣೆ ವೇಳೆ ಸರ್ಕಾರಿ ವಕೀಲರು ಹಾಜರಾಗಿ, ರಾಜ್ಯದಲ್ಲಿ ಶಾಲಾ ಪಠ್ಯಪುಸ್ತಕಗಳ ಮುದ್ರಣ ಕಾರ್ಯ ಭರದಿಂದ ಸಾಗಿದೆ. ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ಈವರೆಗೆ ಶೇ.54.74ರಷ್ಟು ಪಠ್ಯ ಪುಸ್ತಕ ಪೂರೈಸಲಾಗಿದೆ. ಮುಂದಿನ 20 ದಿನಗಳಲ್ಲಿ ಎಲ್ಲಾ ಪಠ್ಯ ಪುಸ್ತಕ ಪೂರೈಕೆ ಮಾಡಲಾಗುವುದು ಎಂದು ಹೈಕೋರ್ಟ್‌ಗೆ ಭರವಸೆ ನೀಡಿದರು.

ಶಾಲೆ ಆರಂಭಿಸಲು ಸರ್ಕಾರದ ಮಹತ್ವದ ತೀರ್ಮಾನದ ಹಿಂದಿನ ಕಾರಣಗಳಿವು! ಶಾಲೆ ಆರಂಭಿಸಲು ಸರ್ಕಾರದ ಮಹತ್ವದ ತೀರ್ಮಾನದ ಹಿಂದಿನ ಕಾರಣಗಳಿವು!

ಈ ಹೇಳಿಕೆ ದಾಖಲಿಸಿಕೊಂಡ ನ್ಯಾಯಪೀಠ, ಪಠ್ಯಪುಸ್ತಕ ಪೂರೈಕೆ ಕಾರ್ಯವನ್ನು 20 ದಿನಗಳಲ್ಲಿ ಪೂರ್ಣಗೊಳಿಸಬೇಕು. ಪುನಃ ಸಮಯ ಕೇಳುವಂತಿಲ್ಲ ಎಂದು ಸರ್ಕಾರಕ್ಕೆ ನಿರ್ದೇಶಿಸಿ ವಿಚಾರಣೆಯನ್ನು ಮುಂದೂಡಿತು.

In Karnataka 54.74 Percent Textbooks Are Distributed Says Govt

ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ಈವರೆಗೆ ಶೇ.54.74ರಷ್ಟು ಪಠ್ಯ ಪುಸ್ತಕ ಪೂರೈಸಲಾಗಿದೆ ಎಂದು ಹೈಕೋರ್ಟ್'ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ.

ಎ.ಎ. ಸಂಜೀವ್‌ ನಾರಾಯಣ ಹಾಗೂ ಇತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್‌ಚಂದ್ರ ಶರ್ಮಾ ಅವರಿದ್ದ ವಿಭಾಗೀಯ ನ್ಯಾಯಪೀಠಕ್ಕೆ ಸರ್ಕಾರ ಈ ಮಾಹಿತಿ ನೀಡಿದೆ.

ಸರ್ಕಾರಿ ಶಾಲಾ ಮಕ್ಕಳಿಗೆ ಪಠ್ಯಪುಸ್ತಕ ಪೂರೈಕೆ ವಿಚಾರವಾಗಿ ಸರ್ಕಾರಿ ವಕೀಲರು ಹೈಕೋರ್ಟ್​ಗೆ ಹೇಳಿಕೆ ನೀಡಿದ್ದಾರೆ. ಈವರೆಗೆ ಶೇಕಡಾ 54.74 ರಷ್ಟು ಪಠ್ಯ ಪುಸ್ತಕ ಒದಗಿಸಲಾಗಿದೆ. ಉಳಿದ ಪಠ್ಯ ಪುಸ್ತಕಗಳ ಪ್ರಿಂಟಿಂಗ್ ಪ್ರಗತಿಯಲ್ಲಿದೆ. 20 ದಿನಗಳಲ್ಲಿ ಎಲ್ಲ ಪಠ್ಯ ಪುಸ್ತಕ ಪೂರೈಕೆ ಮಾಡಲಾಗುವುದು ಎಂದು ಸರ್ಕಾರಿ ವಕೀಲರು ಹೈಕೋರ್ಟ್​​ಗೆ ಹೇಳಿಕೆ ನೀಡಿದ್ದಾರೆ. ಸರ್ಕಾರದ ಹೇಳಿಕೆ ದಾಖಲಿಸಿಕೊಂಡು ಹೈಕೋರ್ಟ್ ಸಮಯ ನೀಡಿದೆ. ಹೈಕೋರ್ಟ್ ಸರ್ಕಾರಕ್ಕೆ 20 ದಿನ ಸಮಯ ನೀಡಿದೆ.

ಪಠ್ಯಪುಸ್ತಕ ವಿತರಿಸದೇ 9 ಹಾಗೂ 10ನೇ ತರಗತಿ ಮಕ್ಕಳಿಗೆ ಭೌತಿಕ ತರಗತಿಗಳನ್ನು ಆರಂಭ ಮಾಡಿರುವುದಕ್ಕೆ ಸರ್ಕಾರದ ವಿರುದ್ಧ ಹೈಕೋರ್ಟ್ ಮಂಗಳವಾರ ಅಸಮಾಧಾನ ವ್ಯಕ್ತಪಡಿಸಿದ್ದು, ಈ ಕುರಿತಂತೆ ಆ.30ರೊಳಗೆ ವಿವರಣೆ ನೀಡುವಂತೆ ನಿರ್ದೇಶನ ನೀಡಿದೆ.

ನಗರದ ವಕೀಲರಾದ ಎ.ಎ. ಸಂಜೀವ್ ನರೈನ್ ಹಾಗೂ ಇತರರು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಹಿರಿಯ ನ್ಯಾಯಮೂರ್ತಿ ಬಿ.ವಿ. ನಾಗರತ್ನ ನೇತೃತ್ವದ ವಿಭಾಗೀಯ ನ್ಯಾಯಪೀಠ, ಈ ನಿರ್ದೇಶನ ನೀಡಿದೆ.

ವಿಚಾರಣೆ ವೇಳೆ ಪೀಠವು ಸರ್ಕಾರಿ ಪರ ವಕೀಲರಿಗೆ ಶಾಲಾ ಮಕ್ಕಳಿಗೆ ಪಠ್ಯ ಪುಸ್ತಕ ಪೂರೈಕೆ ಯಾವ ಹಂತದಲ್ಲಿದೆ ಎಂದು ಪ್ರಶ್ನಿಸಿತು. ಇದಕ್ಕೆ ಸರ್ಕಾರಿ ವಕೀಲರು ಉತ್ತರಿಸಿ, ಹಂತ-ಹಂತವಾಗಿ ಪಠ್ಯ ಪುಸ್ತಕಗಳನ್ನು ಪೂರೈಸಲಾಗುವುದು. ಸೆಪ್ಟಂಬರ್ ಕೊನೆ ವೇಳೆಗೆ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯ ಪೀಠ, ತರಗತಿಗಳು ಆರಂಭವಾಗುವುದಕ್ಕಿಂತ ಮುಂಚೆ ಪಠ್ಯ ಪುಸ್ತಕಗಳ ವ್ಯವಸ್ಥೆ ಮಾಡಿಕೊಳ್ಳಬೇಕಿತ್ತು. ಈಗಾಗಲೇ ರಾಜ್ಯದಲ್ಲಿ 9 ರಿಂದ 12ನೇ ವರೆಗೆ ತರಗತಿಗಳನ್ನು ಪ್ರಾರಂಭಿಸಲಾಗಿದೆ. ಪಠ್ಯ ಪುಸ್ತಕಗಳಿಲ್ಲದೆ ವಿದ್ಯಾರ್ಥಿಗಳು ಶಾಲೆಗೆ ಹೋಗುವ ಪ್ರಕ್ರಿಯೆ ಅರ್ಥಹೀನ. ಇದರಿಂದ ಮಕ್ಕಳ ಮತ್ತು ಸರ್ಕಾರದ ಉದ್ದೇಶ ಸಾಫಲ್ಯಗೊಳ್ಳುವುದಿಲ್ಲ.

Recommended Video

ಈತ ತರಕಾರಿ ಮಾರೋಕೆ‌ ಬಂದ್ರೆ ಜನ ಹೆದರಿಕೊಂಡು ತರಕಾರಿ ಕೊಂಡ್ಕೊಳ್ತಾರೆ | Oneindia Kannada

ಆದ್ದರಿಂದ, ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮಕ್ಕಳಿಗೆ ಪಠ್ಯ ಪುಸ್ತಕಗಳನ್ನು ಪೂರೈಸುವ ವ್ಯವಸ್ಥೆಯ ಕುರಿತು ಆಗಸ್ಟ್ 30ರೊಳಗಿನ ವಸ್ತುಸ್ಥುತಿ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು. ಅದೇ ರೀತಿ ಪಿಯು ಪಠ್ಯ ಪುಸ್ತಕಗಳು ಸಕಾಲದಲ್ಲಿ ಮತ್ತು ಸುಲಭವಾಗಿ ವಿದ್ಯಾರ್ಥಿಗಳಿಗೆ ಮಾರುಕಟ್ಟೆಯಲ್ಲಿ ಲಭ್ಯವಾಗುವಂತೆ ನೋಡಿಕೊಳ್ಳಬೇಕು ಎಂದು ಸರ್ಕಾರಕ್ಕೆ ನಿರ್ದೇಶಿಸಿತು.

English summary
he state government on Monday informed the Karnataka High Court that 54.74 per cent of textbooks of the 70.82 printed for Classes 1 to 10 so far, have been supplied to students on August 25, 2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X