ಕರ್ನಾಟಕದಲ್ಲಿ ಇನ್ಮುಂದೆ 4 ವರ್ಷ ಮೇಲ್ಪಟ್ಟವರಿಗೆ ಹೆಲ್ಮೆಟ್ ಕಡ್ಡಾಯ

ಬೆಂಗಳೂರು, ಅಕ್ಟೋಬರ್ 20: ಕರ್ನಾಟಕದಲ್ಲಿ ಇನ್ನುಮುಂದೆ 4 ವರ್ಷ ಮೇಲ್ಪಟ್ಟವರಿಗೆ ಹೆಲ್ಮೆಟ್ ಕಡ್ಡಾಯವಾಗಲಿದೆ. ಹೆಲ್ಮೆಟ್ ಧರಿಸದಿದ್ದರೆ ಮೂರು ತಿಂಗಳು ಚಾಲನಾ ಪರಿವಾನಗಿ ರದ್ದು ಮಾಡಲಾಗುವುದು, ಹಳೆಯ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ.

ನಿಯಮದ ಪ್ರಕಾರ ನಾಲ್ಕು ವರ್ಷದ ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯ ಮಾಡಲಾಗಿದೆ.ದ್ವಿಚಕ್ರವಾಹನಗಳಲ್ಲಿ ಸಂಚರಿಸುವ ನಾಲ್ಕು ವರ್ಷ ಮೇಲ್ಪಟ್ಟ ಎಲ್ಲರೂ ಹೆಲ್ಮೆಟ್ ಧರಿಸಬೇಕಿದೆ.

ಹೆಲ್ಮೆಟ್ ಹಾಕದ ಚಾಲಕನಿಗೆ ದಂಡ ವಿಧಿಸುವುದರ ಜತೆಗೆ ಚಾಲನಾ ಪರವಾನಗಿಯನ್ನು ಮೂರು ತಿಂಗಳುಗಳ ಕಾಲ ಅಮಾನತುಗೊಳಿಸುವ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು ಎಂದು ರಾಜ್ಯ ಸರ್ಕಾರ ಆದೇಶಿಸಿದೆ.

In Karnataka Helmet Mandatory For Children Above 4 Years

ಕೇಂದ್ರ ಮೋಟಾರು ವಾಹನ ಕಾಯ್ದೆಯ ಅನ್ವಯ ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸುವುದು ಕಡ್ಡಾಯವಾಗಿದೆ. ಕರ್ನಾಟಕ ಮೋಟಾರು ವಾಹನ ನಿಯಮ ಅನ್ವಯ ರಾಜ್ಯದಲ್ಲಿ ಎಲ್ಲಾ ದ್ವಿಚಕ್ರವಾಹನ ಸವಾರರು ಹೆಲ್ಮೆಟ್ ಕಡ್ಡಾಯವಾಗಿ ಧರಿಸಬೇಕಿದೆ. ಸುಪ್ರೀಂ ಕೋರ್ಟ್ ರಸ್ತೆ ಸುರಕ್ಷತಾ ಸಮಿತಿ ನಿರ್ದೇಶನದ ಮೇರೆಗೆ ರಾಜ್ಯದಲ್ಲಿ ದ್ವಿಚಕ್ರವಾಹನದಲ್ಲಿ ಪ್ರಯಾಣಿಸುವ ನಾಲ್ಕು ವರ್ಷ ಮೇಲ್ಪಟ್ಟ ಎಲ್ಲರಿಗೂ ಕಡ್ಡಾಯವಾಗಿ ಹೆಲ್ಮೆಟ್ ಧರಿಸುವ ನಿಯಮ ಕಟ್ಟುನಿಟ್ಟಾಗಿ ಜಾರಿಗೊಳಿಸಲು ಸೂಚಿಸಲಾಗಿದೆ.

ಮೋಟಾರು ವಾಹನ ಕಾಯ್ದೆ 2019ರ ಅನ್ವಯ ಹೆಲ್ಮೆಟ್ ರಹಿತ ವಾಹನ ಚಲಾವಣೆಗೆ 1000 ರೂ.ದಂಡ ಮತ್ತು ಮೂರು ತಿಂಗಳುಗಳ ಕಾಲ ಅವರ ಡಿಎಲ್ ಅನ್ನು ಅಮಾನತುಗೊಳಿಸಬಹುದು. ಆದರೆ, ರಾಜ್ಯದಲ್ಲಿ ದಂಡವನ್ನು 500ಕ್ಕೆ ಇಳಿಸಲಾಗಿತ್ತಾದರೂ ಡಿಎಲ್ ಅಮಾನತುಗೊಳಿಸಲು ಇಲಾಖೆ ಒಪ್ಪಿಗೆ ಸೂಚಿಸಿರಲಿಲ್ಲ.

ಆದರೆ, ಇದೀಗ ಹೆಲ್ಮೆಟ್ ರಹಿತ ವಾಹನ ಚಲಾವಣೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಈ ಕಾನೂನನ್ನು ಕಟ್ಟುನಿಟ್ಟಾಗಿ ಪಾಲಿಸಲು ಇಲಾಖೆ ಮುಂದಾಗಿದೆ ಎನ್ನಲಾಗುತ್ತಿದೆ.

ರಾಜ್ಯದ ಅಧಿಕಾರಿಗಳ ಜೊತೆಯಲ್ಲಿ ಅಕ್ಟೋಬರ್ 14 ರಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಿದ್ದ ಈ ಸಮಿತಿ ಸಂಚಾರಿ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಸೂಚಿಸಿದ್ದಾರೆ ಎಂದು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+