ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ: ಕೊರೊನಾದಿಂದ ಗುಣಮುಖರಾದ 151 ಮಂದಿಗೆ ಕ್ಷಯರೋಗ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 21: ರಾಜ್ಯದಲ್ಲಿ ಕೊರೊನಾದಿಂದ ಗುಣಮುಖರಾದ 151 ಮಂದಿಯಲ್ಲಿ ಕ್ಷಯರೋಗ ಕಾಣಿಸಿಕೊಂಡಿರುವ ಕುರಿತು ಮಾಹಿತಿ ಲಭ್ಯವಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಆಗಸ್ಟ್ 16 ರಿಂದ ಸೆಪ್ಟೆಂಬರ್ 11 ರ ನಡುವೆ ಒಂದು ಬಾರಿ ಮನೆ-ಮನೆಗೆ ಸಮೀಕ್ಷೆ ನಡೆಸಿದ್ದು, ಒಟ್ಟು 7,66,137 ಜನರನ್ನು ಪರೀಕ್ಷಿಸಿದೆ.

 ಡೆಂಗ್ಯೂ ಮಾದರಿಯ ಮತ್ತೊಂದು ಸೋಂಕು ಪತ್ತೆ, ಜನತೆಗೆ ಆತಂಕ ಡೆಂಗ್ಯೂ ಮಾದರಿಯ ಮತ್ತೊಂದು ಸೋಂಕು ಪತ್ತೆ, ಜನತೆಗೆ ಆತಂಕ

ಕರ್ನಾಟಕದಲ್ಲಿ ಒಂದು ತಿಂಗಳ ಕಾಲ ನಡೆದ ಕ್ಷಯರೋಗ ಸಮೀಕ್ಷೆಯಲ್ಲಿ ಒಟ್ಟು 225 ಜನರು ಈ ಕಾಯಿಲೆಯಿಂದ ಬಳಲುತ್ತಿದ್ದಾರೆ. 225 ರಲ್ಲಿ ಕೋವಿಡ್ ನಿಂದ ಚೇತರಿಸಿಕೊಂಡ 151 ರೋಗಿಗಳಲ್ಲಿ ಟಿಬಿ ಪತ್ತೆಯಾಗಿದೆ.

In Karnataka Tuberculosis Detected In 151 Covid-Recovered Patients

ಟಿಬಿ ಕಾಣಿಸಿಕೊಂಡಿರುವ 151 ಜನರಿಗೆ ಈ ವರ್ಷದ ಜನವರಿ ಮತ್ತು ಜೂನ್ ನಡುವೆ ಕೋವಿಡ್‌ ಸೋಂಕು ತಗುಲಿತ್ತು. ಅವರು ಆರು ತಿಂಗಳ ಕಾಲ ನಿರಂತರವಾಗಿ ಕ್ಷಯರೋಗ ಚಿಕಿತ್ಸೆಗೆ ಒಳಗಾಗಿದ್ದಾರೆ. ಅವರು ತಮ್ಮ ಮಾತ್ರೆಗಳನ್ನು ಕಳೆದುಕೊಂಡರೆ ಆಶಾ ಕಾರ್ಯಕರ್ತರು ಅವರ ಮನೆಗಳಿಗೆ ಭೇಟಿ ಮಾಡಿ ಮಾತ್ರೆ ನೀಡುತ್ತಾರೆ.

ಬಳಸಿದ ಟ್ಯಾಬ್ಲೆಟ್ ಸ್ಟ್ರಿಪ್‌ಗಳನ್ನು ಅವರು ಹಿಂದಿರುಗಿಸಬೇಕು. ನಾವು ಅದನ್ನು ಪರಿಶೀಲಿಸುತ್ತೇವೆ. ಅಲ್ಲದೆ, ಕೇಂದ್ರ ಸರ್ಕಾರದ ಯೋಜನೆಯ ಭಾಗವಾಗಿ ಪೌಷ್ಠಿಕಾಂಶ ವೆಚ್ಚಕ್ಕಾಗಿ 500 ರೂ.ಗಳನ್ನು ಅವರಿಗೆ ನೀಡಲಾಗುತ್ತದೆ "ಎಂದು ಟಿಬಿಯ ರಾಜ್ಯ ಜಂಟಿ ನಿರ್ದೇಶಕ ಡಾ.ರಮೇಶ್ ರೆಡ್ಡಿ ಅವರು ಹೇಳಿದ್ದಾರೆ.

ಬೆಂಗಳೂರು ನಗರದಲ್ಲಿ(44), ಬಳ್ಳಾರಿ(25), ಮೈಸೂರು(14), ಚಿತ್ರದುರ್ಗ(13), ಕಲಬುರಗಿ(13) ಮತ್ತು ಕೊಪ್ಪಳ(13)ದಲ್ಲಿ ಅತಿಹೆಚ್ಚು ಟಿಬಿ ಪ್ರಕರಣಗಳು ವರದಿಯಾಗಿವೆ. ವಿಜಯಪುರ, ಕೋಲಾರ ಮತ್ತು ಯಾದಗಿರಿಯಲ್ಲಿ ಯಾವುದೇ ಟಿಬಿ ಪ್ರಕರಣಗಳು ವರದಿಯಾಗಿಲ್ಲ.

ಅಷ್ಟೇ ಅಲ್ಲದೇ, ಬೆಂಗಳೂರಿನಲ್ಲಿ ಡೆಂಗ್ಯೂ ಮಾದರಿಯ ಮತ್ತೊಂದು ಸೋಂಕು ಪತ್ತೆಯಾಗಿದೆ. ಕಟ್ಟಡ ನಿರ್ಮಾಣಕ್ಕೆ ಹತ್ತಿರವಿರುವ ಪ್ರದೇಶಗಳು ಕೈಗಾರಿಕಾ ಪ್ರದೇಶಗಳ ಬಳಿ ಇರುವವರು ಈ ರೀತಿಯ ವೈರಲ್ ಜ್ವರಕ್ಕೆ ಹೆಚ್ಚು ದುರ್ಬಲರಾಗಿರುತ್ತಾರೆ ಹಾಗೂ ಹರಡುವ ಸಾಮರ್ಥ್ಯ ಹೊಂದಿರುತ್ತವೆ.

ಈ ರೀತಿಯ ಜ್ವರವನ್ನು ಹಲವು ಮಂದಿ ಡೆಂಗ್ಯೂ ಎಂದು ತಪ್ಪಾಗಿ ಭಾವಿಸುವುದುಂಟು ಆದರೆ ಡೆಂಗ್ಯೂಗೆ ಟೆಸ್ಟ್ ಮಾಡಿಸಿದರೆ ನೆಗೆಟಿವ್ ವರದಿ ಬರುತ್ತದೆ.

ಕೊಲಂಬಿಯಾ ಏಷ್ಯಾ, ಹೆಬ್ಬಾಳ (ಮಣಿಪಾಲ್ ಹಾಸ್ಪೆಟಲ್ಸ್) ನ ಸಲಹೆಗಾರರಾಗಿರುವ ಡಾ.ಇರ್ಫಾನ್ ಜಾವೀದ್ ಖಾಜಿ, ತಾವು ಪ್ರತಿ 5 ರೋಗಿಗಳ ಪೈಕಿ ಒಬ್ಬರಲ್ಲಿ ಈ ರೀತಿಯ ಕಡಿಮೆ ಪ್ಲೇಟ್ ಲೆಟ್ ಇರುವ ವೈರಲ್ ಫೀವರ್ ಇರುವ ಪ್ರಕರಣಗಳನ್ನು ನೋಡುತ್ತಿರುವುದಾಗಿ ಹೇಳಿದ್ದಾರೆ.

ಸಾಮಾನ್ಯವಾದ ರೋಗಲಕ್ಷಣಗಳೆಂದರೆ ಮೈಯಾಲ್ಜಿಯಾ, ಜ್ವರ, ತಲೆನೋವು, ಕೆಲವೊಮ್ಮೆ ಮೇಲ್ಭಾಗದ ಶ್ವಾಸೇಂದ್ರಿಯ ಸೋಂಕು ಮತ್ತು GI ರೋಗಲಕ್ಷಣಗಳೊಂದಿಗೆ ಸಂಬಂಧಿಸಿದೆ.

ವೈರಸ್‌ಗಳೊಂದಿಗೆ ಕಲುಷಿತ ನೀರು ಥ್ರಂಬೋಸೈಟೋಪೆನಿಯಾದೊಂದಿಗೆ ವೈರಲ್ ಜ್ವರಕ್ಕೆ ಕಾರಣವಾಗಬಹುದು, ಮಕ್ಕಳಿಂದ 70 ವರ್ಷದವರವರೆಗೂ ಈ ಜ್ವರ ಕಾಣಿಸಿಕೊಳ್ಳಬಹುದು ಎನ್ನುತ್ತಾರೆ ಡಾ.ಖಾಜಿ

ಜನತೆ ಈ ರೀತಿಯ ಜ್ವರ ಬಂದಲ್ಲಿ ಅದನ್ನು ಕೋವಿಡ್-19 ಎಂದು ಗೊಂದಲಕ್ಕೀಡಲು ಪ್ರಾರಂಭಿಸಿದ್ದಾರೆ ಎನ್ನುತ್ತಾರೆ ಏಸ್ತರ್ ಆರ್ ವಿ ಆಸ್ಪತ್ರೆಯ ಆಂತರಿಕ ವೈದ್ಯ ವಿಭಾಗದ ಡಾ. ಎಸ್ ಎನ್ ಅರವಿಂದ ಹೇಳಿದ್ದಾರೆ.

ಋತು ಬದಲಾವಣೆಯಾಗಿರುವುದು, ವೀಕೆಂಡ್ ಗಳಲ್ಲಿ ಜನತೆ ಸಣ್ಣಪುಟ್ಟ ಪಾರ್ಟಿಗಳಿಗೆ ತೆರಳುವುದು ಈ ವೈರಾಣು ಜ್ವರ ಹರಡುವುದಕ್ಕೆ ಪ್ರಮುಖ ಕಾರಣಗಳಾಗಿವೆ ಎಂದು ಅರವಿಂದ ತಿಳಿಸಿದ್ದಾರೆ.

ಸಾಮಾನ್ಯವಾಗಿ ವೈರಲ್ ಜ್ವರಕ್ಕೆ ನೀಡುವ ಚಿಕಿತ್ಸೆಯನ್ನೇ ಈ ವೈರಾಣು ಜ್ವರ ಎದುರಿಸುತ್ತಿರುವವರಿಗೂ ನೀಡಲಾಗುತ್ತದೆ. ಈ ವೈರಾಣು ಜ್ವರದಿಂದ ಶ್ವಾಸಕೋಶ, ಕಿಡ್ನಿ, ಲಿವರ್ ಗೆ ಹಾನಿಯಾಗಿದ್ದರೆ ಮಾತ್ರ ಚಿಕಿತ್ಸೆಯ ವಿಧಾನ ಬದಲಾವಣೆಯಾಗುತ್ತದೆ.

Recommended Video

108 ವಾಹನದಲ್ಲೇ ಅವಳಿ ಹೆಣ್ಣುಮಕ್ಕಳಿಗೆ ಜನ್ಮ ನೀಡಿದ ತಾಯಿ | Oneindia Kannada

English summary
The month-long tuberculosis survey in Karnataka found 225 people affected by the disease. Of the 225, 151 cases are Covid-19 recovered patients and 74 are contacts of such patients.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X