ಕರ್ನಾಟಕದಲ್ಲಿ ಬುಧವಾರ ವಿಪಕ್ಷ ನಾಯಕರು ನಡೆಸಿದ ಚರ್ಚೆ ಏನು?
Recommended Video

ಬೆಂಗಳೂರು, ಮೇ 24 : ಬುಧವಾರ ಕರ್ನಾಟಕದ ರಾಜಧಾನಿ ಬೆಂಗಳೂರಿನ ಮೇಲೆ ದೇಶದ ಚಿತ್ತವಿತ್ತು. ಕಾರಣ ರಾಷ್ಟ್ರ ರಾಜಕಾರಣದ ವಿಪಕ್ಷಗಳ ಎಲ್ಲಾ ನಾಯಕರು ರಾಜ್ಯಕ್ಕೆ ಆಗಮಿಸಿದ್ದರು. ಎಲ್ಲರ ಸಮ್ಮುಖದಲ್ಲಿ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದರು. ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದಿತು.
ಎಚ್.ಡಿ.ಕುಮಾರಸ್ವಾಮಿ ಪ್ರಮಾಣ ವಚನ ಸಮಾರಂಭಕ್ಕೆ ಸೋನಿಯಾ ಗಾಂಧಿ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಹಲವು ನಾಯಕರು ಆಗಮಿಸಿದ್ದರು.
ಪ್ರಮಾಣ ವಚನ ಸಮಾರಂಭದ ಬಳಿಕ ಎಲ್ಲಾ ನಾಯಕರು ಪರಸ್ಪರ ಮಾತುಕತೆ ನಡೆಸಿದ್ದಾರೆ. ಕರ್ನಾಟಕದಲ್ಲಿ ಬುಧವಾರ ನಡೆದ ಮಾತುಕತೆ ಏನು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ ಹೇಳಿದ್ದಾರೆ.

'ಕರ್ನಾಟಕದಲ್ಲಿ ಸೇರಿದ್ದ ಎಲ್ಲಾ ವಿರೋಧ ಪಕ್ಷದವರು ದೇಶದಲ್ಲಿನ ಇಂಧನ ಬೆಲೆ ಏರಿಕೆ ಪರಿಣಾಮ ಜನಸಾಮಾನ್ಯರು ಮತ್ತು ರೈತರ ಮೇಲೆ ಆಗುತ್ತಿದೆ ಎಂದು ಚರ್ಚೆ ನಡೆಸಿದೆವು' ಎಂದು ಮಮತಾ ಬ್ಯಾನರ್ಜಿ ಗುರುವಾರ ಹೇಳಿದ್ದಾರೆ.
'ಬೆಲೆ ಏರಿಕೆ ತಗ್ಗಿಸಿ, ಜನರ ಮೇಲೆ ಆಗುತ್ತಿರುವ ಹೊರೆಯನ್ನು ಕಡಿಮೆ ಮಾಡಿ ಎಂದು ನಾನು ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತೇನೆ' ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.












Click it and Unblock the Notifications