ರಾಜ್ಯದಲ್ಲಿ ಅಪಘಾತದಿಂದ 24 ತಾಸಿನಲ್ಲಿ 51 ಮಂದಿ ಬಲಿ: ಹೆಚ್‌ ಡಿ ಕುಮಾರಸ್ವಾಮಿ ಕಳವಳ

ಬೆಂಗಳೂರು, ಮೇ 27: 24 ಗಂಟೆ ಅವಧಿಯಲ್ಲಿ ರಾಜ್ಯದ ವಿವಿಧೆಡೆ ಸಂಭವಿಸಿರುವ ರಸ್ತೆ ಅಪಘಾತಗಳಲ್ಲಿ 51 ಜನರು ಪ್ರಾಣ ಕಳೆದುಕೊಂಡಿರುವ ಸುದ್ದಿ ಓದಿ ನನಗೆ ಬಹಳ ಆಘಾತವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್‌ ರಾಜ್ಯಾಧ್ಯಕ್ಷರಾದ ಹೆಚ್‌ ಡಿ ಕುಮಾರಸ್ವಾಮಿ ಕಳವಳ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಕುಮಾರಸ್ವಾಮಿ ಅವರು, ರಸ್ತೆ ಸುರಕ್ಷತೆ ಬಗ್ಗೆ ಪೊಲೀಸರ ಜವಾಬ್ದಾರಿ ಜತೆಗೆ ನಾಗರಿಕರ ಹೊಣೆಗಾರಿಕೆ ಇರುತ್ತದೆ ಎನ್ನುವುದನ್ನು ಯಾರೂ ಮರೆಯಬಾರದು. ಅತಿ ವೇಗದಿಂದ ಒಂದು ಜೀವ ಹೋದರೆ ಒಂದು ಕುಟುಂಬವೇ ಅನಾಥವಾಗುತ್ತದೆ ಎನ್ನುವುದನ್ನು ನೆನಪಿಡಬೇಕು ಎಂದು ಹೇಳಿದ್ದಾರೆ.

In Last 24 Hours 51 Lives Lost In Road Accidents Know What HD Kumaraswamy Says

ಅತಿ ವೇಗ, ಅಜಾಗರೂಕತೆಯಿಂದಲೇ ಹೆಚ್ಚು ಅಪಘಾತಗಳು ಸಂಭವಿಸಿವೆ ಎನ್ನುವ ಅಂಶ ಆಘಾತಕಾರಿ. ವಾಹನ ಚಾಲಕರು ಎಚ್ಚರಿಕೆಯಿಂದ ವಾಹನ ಚಲಾಯಿಸಬೇಕು ಹಾಗೂ ರಸ್ತೆ ಸುರಕ್ಷತೆ ನಿಮಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಪೊಲೀಸ್ ವ್ಯವಸ್ಥೆ ಕೂಡ ಈ ನಿಯಮಗಳನ್ನು ಮತ್ತಷ್ಟು ಬಿಗಿಗೊಳಿಸಬೇಕು. ದುರಂತಗಳಲ್ಲಿ ಜೀವ ಕಳೆದುಕೊಂಡ ಎಲ್ಲಾ ನತದೃಷ್ಟರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಆ ಕುಟುಂಬಗಳಿಗೆ ಭಗವಂತ ಕರುಣಿಸಲಿ ಎಂದು ಸಂತಾಪ ಸೂಚಿಸಿದ್ದಾರೆ.

24 ಗಂಟೆ ಅವಧಿಯಲ್ಲಿ ರಸ್ತೆ ಅಪಘಾತದಲ್ಲಿ 51 ಸಾವು: ಅಲೋಕ್ ಕುಮಾರ್

ರಾಜ್ಯದಲ್ಲಿ ರಸ್ತೆ ಅಪಘಾತಗಳು ದಿನದಿಂದ ಹೆಚ್ಚುತ್ತಿವೆ. ಸಂಚಾರಿ ನಿಯಮಗಳನ್ನು ಪಾಲಿಸಿ, ಅತಿ ವೇಗದಿಂದ ವಾಹನ ಚಲಾಯಿಸದಿರಿ ಎಂದು ಟ್ರಾಫಿಕ್​ ಪೊಲೀಸರು ಅರಿವು ಮೂಡಿಸುತ್ತಿದ್ದರೂ, ಕೆಲ ಸವಾರರು ಮಾತ್ರ ನಿಯಮಗಳನ್ನು ಗಾಳಿಗೆ ತೂರಿ ವಾಹನ ಚಲಾಯಿಸುತ್ತಾರೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಸಂಭವಿಸಿದ ರಸ್ತೆ ಅಪಘತಕ್ಕೆ 51 ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಟ್ರಾಫಿಕ್ ಹಾಗೂ ರಸ್ತೆ ಸುರಕ್ಷತಾ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.

ರಾಜ್ಯದಲ್ಲಿ ಸಂಭವಿಸಿದ ರಸ್ತೆ ಅಪಘಾತಗಳ ಬಗ್ಗೆ ಟ್ವೀಟ್​ ಮಾಡಿದ ಅವರು, ಭಾನುವಾರ ಹಾಸನದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ 6 ಜನ ಪ್ರಾಣ ಕಳೆದುಕೊಂಡಿದ್ದಾರೆ. ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 51 ಮಂದಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಈ ಪೈಕಿ ಹಲವು ಪ್ರಕರಣಗಳು ಅತಿ ವೇಗ ಹಾಗೂ ಅಜಾಗರೂಕ ಚಾಲನೆಯಿಂದ ಸಂಭವಿಸಿದೆ. ರಸ್ತೆ ಸುರಕ್ಷತೆಗೆ ಎಲ್ಲ ಪಾಲುದಾರರಿಂದ ಜವಾಬ್ದಾರಿಯುತ ನಡವಳಿಕೆಯ ಅಗತ್ಯವಿದೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+