ಮುಂದಿನ 5 ದಿನ ರಾಜ್ಯದ 16 ಜಿಲ್ಲೆಗಳಲ್ಲಿ ಮಳೆ ಬರುವ ಸಾಧ್ಯತೆ
ಬೆಂಗಳೂರು, ಏಪ್ರಿಲ್ 7: ಕರ್ನಾಟಕದ 16 ಜಿಲ್ಲೆಗಳಲ್ಲಿ ಮುಂದಿನ 5 ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಏಪ್ರಿಲ್ 8 ರಿಂದ 12ರವರೆಗೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ.
ಏಪ್ರಿಲ್ 11ರವರೆಗೆ ರಾಜ್ಯದ 14 ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ
ಏಪ್ರಿಲ್ 11 ಹಾಗೂ 12 ರಂದು ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿಯಲ್ಲಿ ಮಳೆಯಾಗುವ ಮುನ್ಸೂಚನೆ ಇದೆ. ಕಲಬುರಗಿಯಲ್ಲಿ ಅತಿ ಗರಿಷ್ಠ ಅಂದರೆ 41.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ 5 ದಿನ ಮಳೆ
ರಾಜ್ಯದ ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮುಂದಿನ 5 ದಿನಗಳ ಕಾಲ ಮಳೆಯಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಬೆಂಗಳೂರಿನ ವಾತಾವರಣ ಹೇಗಿದೆ?
ಬೆಂಗಳೂರಿನಲ್ಲಿ ಶುಭ್ರ ಆಕಾಶವಿದ್ದು, 36 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶವಿದೆ. ಬೆಂಗಳೂರು ನಗರದಲ್ಲಿ 34.8 ಡಿಗ್ರಿ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಎಚ್ಎಎಲ್ನಲ್ಲಿ 34.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕರ್ನಾಟಕ ತಾಪಮಾನ: ಯಾವ ಊರಲ್ಲಿ ಹೆಚ್ಚು ಬಿಸಿಲು, ಎಲ್ಲಿ ತಂಪು?

ಉತ್ತರ ಒಳನಾಡಿನಲ್ಲಿ ಮಳೆ
ಉತ್ತರ ಒಳನಾಡಿನಲ್ಲಿ ಏಪ್ರಿಲ್ 8 ರಿಂದ 10ರವರೆಗೂ ಒಣಹವೆ ಇರಲಿದ್ದು, ಏಪ್ರಿಲ್ 11 ಹಾಗೂ 12 ರಂದು ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿಯಲ್ಲಿ ಮಳೆಯಾಗಲಿದೆ.

ಕರಾವಳಿ ಜಿಲ್ಲೆ
ಏಪ್ರಿಲ್ 8 ರಿಂದ 10ರವರೆಗೆ ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಮಳೆಯಾಗಲಿದೆ, ಏಪ್ರಿಲ್ 11 ಹಾಗೂ 12 ರಂದು ಉತ್ತರ ಕನ್ನಡದಲ್ಲೂ ಮಳೆಯಾಗುವ ಸಾಧ್ಯತೆ ಇದೆ.