ಚಿತ್ರಗಳು : ಕರ್ನಾಟಕದ ನಾಯಕರ ಯೋಗ ಪ್ರದರ್ಶನ

Posted By:
Subscribe to Oneindia Kannada

ಬೆಂಗಳೂರು, ಜೂನ್ 21 : ಜಿಟಿ-ಜಿಟಿ ಮಳೆಯ ನಡುವೆಯೇ ಕರ್ನಾಟಕದಲ್ಲಿ ಎರಡನೇ ವಿಶ್ವಯೋಗ ದಿನಾಚರಣೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ವಿವಿಧ ರಾಜಕೀಯ ನಾಯಕರು ಬೇರೆ-ಬೇರೆ ಸ್ಥಳಗಳಲ್ಲಿ ಯೋಗ ಪದರ್ಶನ ನೀಡುವ ಮೂಲಕ ಯೋಗ ದಿಚಾಚರಣೆಗೆ ಸಾಕ್ಷಿಯಾದರು.

ಆಯುಷ್ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ಒಲಂಪಿಕ್ ಅಸೋಸಿಯೇಷನ್ ಶ್ವಾಸ ಸಂಸ್ಥೆ ಸಹಯೋಗದಲ್ಲಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ವಿಶ್ವ ಯೋಗದಿನವನ್ನು ಆಯೋಜಿಸಲಾಗಿತ್ತು. ಬಾಲಿವುಡ್ ನಟಿ ಬಿಪಾಶಾ ಬಸು ಕಾರ್ಯಕ್ರಮದಲ್ಲಿ ಯೋಗ ಪ್ರದರ್ಶನ ನೀಡಿದರು. [ಇಚ್ಛಾಶಕ್ತಿ ಪ್ರಚೋದಿಸಲು ಶಾಸ್ತ್ರಬದ್ಧ ಯೋಗಾಸನ, ಪ್ರಾಣಾಯಾಮ]

ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 'ಯೋಗ ಬಲ್ಲವನಿಗೆ ರೋಗವಿಲ್ಲ. ಎಲ್ಲರೂ ದಿನಕ್ಕೆ ಒಂದು ಗಂಟೆಯನ್ನು ಯೋಗಾಭ್ಯಾಸಕ್ಕಾಗಿ ಮೀಸಲಾಗಿಡೋಣ' ಎಂದು ಕರೆ ನೀಡಿದರು. [ಯೋಗ ಬಲ್ಲವನಿಗೆ ರೋಗವಿಲ್ಲ : ಸಿದ್ದರಾಮಯ್ಯ]

ಬೆಂಗಳೂರಿನಲ್ಲಿ ಕೇಂದ್ರ ಸಚಿವರಾದ ಅನಂತ ಕುಮಾರ್, ಡಿ.ವಿ.ಸದಾನಂದ ಗೌಡ, ಅರಮನೆ ಮೈದಾನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ, ಕೇಂದ್ರ ಸಚಿವ ಜಿ.ಎಂ.ಸಿದ್ದೇಶ್ವರ ಯೋಗ ಮಾಡಿದರು. ಕರ್ನಾಟಕದಲ್ಲಿನ ಯೋಗ ದಿನಾಚರಣೆ ಚಿತ್ರಗಳು ಇಲ್ಲಿವೆ......

ಯೋಗ ಮಾಡಿದ ಸಿದ್ದರಾಮಯ್ಯ

ಯೋಗ ಮಾಡಿದ ಸಿದ್ದರಾಮಯ್ಯ

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶ್ವಾಸಗುರು ಶ್ರೀವಚನಾನಂದ ಸ್ವಾಮೀಜಿ, ನಟಿ ಬಿಪಶಾ ಬಸು ಜೊತೆ ಯೋಗ ಮಾಡಿದರು.

ಯೋಗ ಮಾಡಿದ ಬಿ.ಎಸ್.ಯಡಿಯೂರಪ್ಪ

ಯೋಗ ಮಾಡಿದ ಬಿ.ಎಸ್.ಯಡಿಯೂರಪ್ಪ

ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಯೋಗ ಪ್ರದರ್ಶಿಸಿದರು.

ಬಿಪಶಾ ಬಸು ಯೋಗ

ಬಿಪಶಾ ಬಸು ಯೋಗ

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ 2ನೇ ವಿಶ್ವ ಯೋಗದಿನವನ್ನು ಆಯೋಜಿಸಲಾಗಿತ್ತು. ಬಾಲಿವುಡ್ ನಟಿ ಬಿಪಾಶಾ ಬಸು ಕಾರ್ಯಕ್ರಮದಲ್ಲಿ ಯೋಗ ಪ್ರದರ್ಶನ ನೀಡಿದರು.

ಯೋಗ ಮಾಡಿದ ಅನಂತ ಕುಮಾರ್

ಯೋಗ ಮಾಡಿದ ಅನಂತ ಕುಮಾರ್

ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ಮತ್ತು ಕೇಂದ್ರ ಸಚಿವ ಅನಂತ ಕುಮಾರ್ ಅವರು ಕಂಠೀರವ ಕ್ರೀಡಾಂಗಣದಲ್ಲಿ ಯೋಗ ಪ್ರದರ್ಶನ ನೀಡಿದರು.

ಮೈಸೂರಿನಲ್ಲಿ ಪ್ರತಾಪ್ ಸಿಂಹ ಯೋಗ ಪ್ರದರ್ಶನ

ಮೈಸೂರಿನಲ್ಲಿ ಪ್ರತಾಪ್ ಸಿಂಹ ಯೋಗ ಪ್ರದರ್ಶನ

ಮೈಸೂರು ಅರಮನೆ ಮುಂಭಾಗದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಮತ್ತು ಕೇಂದ್ರ ಸಚಿವ ಜಿ.ಎಂ.ಸಿದ್ದೇಶ್ವರ ಅವರು ಯೋಗ ಪ್ರದರ್ಶನ ನೀಡಿದರು.

ಗೌಡರ ಯೋಗ ಪ್ರದರ್ಶನ

ಗೌಡರ ಯೋಗ ಪ್ರದರ್ಶನ

ಬೆಂಗಳೂರು ಉತ್ತರ ಕ್ಷೇತ್ರದ ಸಂಸದ ಮತ್ತು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರು ಕಂಠೀರವ ಕ್ರೀಡಾಂಗಣದಲ್ಲಿ ಯೋಗ ಪ್ರದರ್ಶನ ನೀಡಿದರು.

ಶೆಟ್ಟರ್ ಯೋಗ ಪ್ರದರ್ಶನ

ಶೆಟ್ಟರ್ ಯೋಗ ಪ್ರದರ್ಶನ

ಹುಬ್ಬಳ್ಳಿಯ ಜಿಮಖಾನಾ ಮೈದಾನದಲ್ಲಿ ಬಿಜೆಪಿಯಿಂದ ಏರ್ಪಡಿಸಿದ್ದ ವಿಶ್ವ ಯೋಗ ದಿನಾಚರಣೆಯಲ್ಲಿ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಯೋಗ ಮಾಡಿದರು.

ಎಚ್.ಕೆ.ಪಾಟೀಲ್ ಯೋಗ ಪ್ರದರ್ಶನ

ಎಚ್.ಕೆ.ಪಾಟೀಲ್ ಯೋಗ ಪ್ರದರ್ಶನ

ಗದಗದಲ್ಲಿ ಮಂಗಳವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಎಚ್.ಕೆ.ಪಾಟೀಲ್ ಯೋಗ ಪ್ರದರ್ಶನ ನೀಡಿದರು.

ಧಾರವಾಡ ಸಂಸದ ಜೋಶಿ ಯೋಗ

ಧಾರವಾಡ ಸಂಸದ ಜೋಶಿ ಯೋಗ

ಹುಬ್ಬಳ್ಳಿಯ ಜಿಮಖಾನಾ ಮೈದಾನದಲ್ಲಿ ಧಾರವಾಡದ ಸಂಸದ ಪ್ರಹ್ಲಾದ್ ಜೋಶಿ ಯೋಗ ಮಾಡಿದರು.

ಶ್ರೀರಾಮುಲು ಯೋಗ ಪ್ರದರ್ಶನ

ಶ್ರೀರಾಮುಲು ಯೋಗ ಪ್ರದರ್ಶನ

ಬಳ್ಳಾರಿ ಸಂಸದ ಮತ್ತು ಬಿಜೆಪಿ ನಾಯಕ ಬಿ.ಶ್ರೀರಾಮುಲು ಅವರು ಬಳ್ಳಾರಿಯಲ್ಲಿ ವಿಶ್ವಯೋಗ ದಿನಾಚರಣೆಯಲ್ಲಿ ಯೋಗ ಮಾಡಿದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Karnataka government had invited Bipasha Basu to participate in Yoga Day celebration 2016. Chief Minister Siddaramaiah, Bipasha Basu and others performed yoga at the event at Kanteerava Stadium Bengaluru on June 21, 2016.
Please Wait while comments are loading...