ಚಿತ್ರಗಳು : ಬೆಂಗಳೂರಲ್ಲಿ ಜೆಡಿಎಸ್ ಬೃಹತ್ ಪ್ರತಿಭಟನೆ

Posted By:
Subscribe to Oneindia Kannada

ಬೆಂಗಳೂರು, ಏಪ್ರಿಲ್ 04 : ಭ್ರಷ್ಟಾಚಾರ ನಿಗ್ರಹ ದಳ ರಚನೆ ಮತ್ತು ವಿದ್ಯುತ್ ದರ ಏರಿಕೆ ಖಂಡಿಸಿ ಜೆಡಿಎಸ್ ಸೋಮವಾರ ಬೃಹತ್ ಪ್ರತಿಭಟನೆ ನಡೆಸಿತು. ಎಸಿಬಿ ರಚನೆ ನಿರ್ಧಾರ ವಾಪಸ್ ಪಡೆಯುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ರಾಜ್ಯಪಾಲ ವಜುಭಾಯಿ ವಾಲಾ ಅವರಿಗೆ ದೂರು ನೀಡಲಾಯಿತು.

ಮೌರ್ಯ ಸರ್ಕಲ್‌ನಿಂದ ಫ್ರೀಡಂ ಪಾರ್ಕ್ ತನಕ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡರ ನೇತೃತ್ವದಲ್ಲಿ ಬೃಹತ್ ಜಾಥಾ ನಡೆಯಿತು. ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ಹಲವು ಶಾಸಕರು, ನೂರಾರು ಕಾರ್ಯಕರ್ತರು ಇದರಲ್ಲಿ ಪಾಲ್ಗೊಂಡಿದ್ದರು. [ಎಸಿಬಿ ರದ್ದುಪಡಿಸಲು ಎಎಪಿಯಿಂದ ಕೇಶಮುಂಡನ, ಮುಷ್ಕರ]

jds

ಎಸಿಬಿ ರಚನೆ ವಿರೋಧಿಸುವ ಮತ್ತು ವಿದ್ಯುತ್ ದರ ಹೆಚ್ಚಿಸಿರುವುದನ್ನು ಖಂಡಿಸಿರುವ ಬ್ಯಾನರ್‌ಗಳನ್ನು ಹಿಡಿದ ಪ್ರತಿಭಟನಾಕಾರರು, ಕಾಂಗ್ರೆಸ್ ಸರ್ಕಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಘೋಷಣೆಗಳನ್ನು ಕೂಗಿದರು. ಎಸಿಬಿ ರಚನೆ ಪ್ರಸ್ತಾಪವನ್ನು ಕೈ ಬಿಡಬೇಕು ಎಂದು ಒತ್ತಾಯಿಸಿದರು. [ಭ್ರಷ್ಟಾಚಾರ ನಿಗ್ರಹ ದಳಕ್ಕೆ ಮತ್ತಷ್ಟು ಅಧಿಕಾರಿಗಳ ನೇಮಕ]

-
-
-
-
-
-

ಭ್ರಷ್ಟರನ್ನು ರಕ್ಷಿಸುತ್ತಿದ್ದಾರೆ : ಫ್ರೀಡಂಪಾರ್ಕ್‌ನಲ್ಲಿ ಸಮಾವೇಶ ಉದ್ದೇಶಿಸಿ ಮಾತನಾಡಿದ ಎಚ್.ಡಿ.ದೇವೇಗೌಡ ಅವರು, 'ಎಸಿಬಿ ರಚನೆ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭ್ರಷ್ಟರನ್ನು ರಕ್ಷಿಸಲು ಹೊರಟಿದ್ದಾರೆ' ಎಂದು ಆರೋಪಿಸಿದರು. [ಎಸಿಬಿ ರಚನೆ : ಸಿದ್ದರಾಮಯ್ಯ ಸ್ಪಷ್ಟನೆಗಳು]

'ಲೋಕಾಯುಕ್ತವನ್ನು ದುರ್ಬಲಗೊಳಿಸಿ ತಮ್ಮ ಸರ್ಕಾರದ ಸಚಿವರು, ಕಾಂಗ್ರೆಸ್ ಮುಖಂಡರ ರಕ್ಷಣೆಗಾಗಿ ಎಸಿಬಿ ರಚಿಸಲಾಗಿದೆ. ಭ್ರಷ್ಟಾಚಾರಿಗಳನ್ನು ರಕ್ಷಿಸಲು ಎಸಿಬಿ ರಚನೆ ಮಾಡಿದ್ದಾರೆ' ಎಂದು ದೂರಿದರು. [ಕರ್ನಾಟಕದಲ್ಲಿ ವಿದ್ಯುತ್ ದರಗಳು ಏರಿಕೆ]

ಎಚ್.ಡಿ.ಕುಮಾರಸ್ವಾಮಿ, ಶಾಸಕ ಜಿ.ಟಿ.ದೇವೇಗೌಡ, ಶರವಣ, ವೈಎಸ್‌ವಿ ದತ್ತಾ, ಗೋಪಾಲಯ್ಯ, ಬಿಬಿಎಂಪಿ ಉಪಮೇಯರ್ ಹೇಮಲತಾ ಸೇರಿದಂತೆ ಹಲವು ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ನಂತರ ರಾಜಭವನಕ್ಕೆ ತೆರಳಿದ ದೇವೇಗೌಡ, ಕುಮಾರಸ್ವಾಮಿ ಮತ್ತು ಇತರ ನಾಯಕರು, ರಾಜ್ಯಪಾಲ ವಜುಭಾಯಿ ವಾಲ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲು ತೀರ್ಮಾನಿಸಿದ್ದರು. ಆದರೆ, ರಾಜ್ಯಪಾಲರು ವಿಶ್ರಾಂತಿ ಪಡೆಯುತ್ತಿದ್ದ ಕಾರಣ, ದೇವೇಗೌಡ ಸೇರಿದಂತೆ ಇತರ ನಾಯಕರನ್ನು ವಾಪಸ್ ಕಳಿಸಲಾಗಿತ್ತು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
Karnataka : Opposition Janata Dal (Secular) on Monday staged protests in Bengaluru and demanded for withdrawal of the Anti-Corruption Bureau (ACB).
Please Wait while comments are loading...