ಗೌರಿಬಿದನೂರಿನಲ್ಲಿ ತಿರಂಗಾ ಯಾತ್ರೆಯಲ್ಲಿ ಪಾಲ್ಗೊಂಡ ಸ್ಮೃತಿ ಇರಾನಿ
ಚಿಕ್ಕಬಳ್ಳಾಪುರ, ಆಗಸ್ಟ್ 23 : ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿ ಮಂಗಳವಾರ ಬಿಜೆಪಿಯ ತಿರಂಗಾ ಯಾತ್ರೆ ನಡೆಯಿತು. ಕೇಂದ್ರ ಜವಳಿ ಖಾತೆ ಸಚಿವೆ ಸ್ಮೃತಿ ಇರಾನಿ ಅವರು ಯಾತ್ರೆಯಲ್ಲಿ ಪಾಲ್ಗೊಂಡಿದ್ದರು.
ಭಾರತೀಯ ಜನತಾ ಪಾರ್ಟಿ ಹಾಗೂ ಬಿಜೆಪಿ ಯುವ ಮೋರ್ಚಾ ಗೌರಿಬಿದನೂರು ಮಂಡಲ ಜಂಟಿಯಾಗಿ ಮಂಗಳವಾರ ತಿರಂಗಾ ಯಾತ್ರೆ ಆಯೋಜಿಸಿತ್ತು. ಬೆಂಗಳೂರು ಕೇಂದ್ರ ಕ್ಷೇತ್ರದ ಸಂಸದ ಪಿ.ಸಿ.ಮೋಹನ್ ಅವರು ಈ ಯಾತ್ರೆಯಲ್ಲಿ ಪಾಲ್ಗೊಂಡು ಬೈಕ್ ಓಡಿಸಿದರು.[ಮಂಗಳೂರಲ್ಲಿ ಅಮಿತ್ ಶಾ : ಚಿತ್ರಗಳು]

ಸ್ವಾತಂತ್ರ್ಯ ಬಂದು 70 ವರ್ಷಗಳಾದ ಹಿನ್ನೆಲೆಯಲ್ಲಿ ದೇಶಕ್ಕಾಗಿ ದುಡಿದವರನ್ನು ನೆನಪಿಸಿಕೊಳ್ಳುವ ಸಲುವಾಗಿ ಬಿಜೆಪಿ ದೇಶದಾದ್ಯಂತ ತಿರಂಗಾ ಯಾತ್ರೆ ಹಮ್ಮಿಕೊಂಡಿದೆ. ಗೌರಿಬಿದನೂರಿನಲ್ಲಿ ಇಂದು ಬೈಕ್ ಜಾಥಾ ನಡೆಸುವ ಮೂಲಕ ತಿರಂಗಾ ಯಾತ್ರೆ ನಡೆಸಲಾಯಿತು.[ಚಿತ್ರಗಳು : ಕರ್ನಾಟಕದಲ್ಲಿ ಬಿಜೆಪಿಯ ತಿರಂಗಾ ಯಾತ್ರೆ]
ಎನ್.ಆರ್.ಪುರದಲ್ಲಿ ತಿರಾಂಗ ಯಾತ್ರೆ : ಬಿಜೆಪಿ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರದಲ್ಲಿ ಮಂಗಳವಾರ ಆಯೋಜಿಸಿದ್ದ ತಿರಂಗಾ ಯಾತ್ರೆಯಲ್ಲಿ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರು ಪಾಲ್ಗೊಂಡಿದ್ದರು.

ಭಾನುವಾರ ಮಂಗಳೂರಿಗೆ ಆಗಮಿಸಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ತಿರಂಗಾ ಯಾತ್ರೆಯಲ್ಲಿ ಪಾಲ್ಗೊಂಡಿದ್ದರು.












Click it and Unblock the Notifications