• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಜೆಪಿಯಲ್ಲಿ ಭಾರಿ ಬೆಳವಣಿಗೆ: ಅರಣ್ಯ ಸಚಿವ ಅರವಿಂದ ಲಿಂಬಾವಳಿ ರಾಜೀನಾಮೆ!

|
Google Oneindia Kannada News

ಬೆಂಗಳೂರು, ಫೆ. 23: ಮಹತ್ವದ ಬೆಳವಣಿಗೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಅವರು ಭಾರತೀಯ ಜನತಾ ಪಕ್ಷದ ಕರ್ನಾಟಕ ರಾಜ್ಯ ಉಪಾಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ರವಾನಿಸಿದ್ದಾರೆ. ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿ ಪಕ್ಷದ ಸಂಘಟನೆಯಲ್ಲಿ ಮಹತ್ವದ ಪಾತ್ರ ನಿರ್ವಹಿಸುತ್ತಿದ್ದ ಅರವಿಂದ್ ಲಿಂಬಾವಳಿ ಅವರ ಅನುಪಸ್ಥಿತಿ ರಾಜ್ಯ ಘಟಕದಲ್ಲಿ ಎದ್ದು ಕಾಣಲಿದೆ. ಈಗಾಗಲೇ ತಮ್ಮ ರಾಜೀನಾಮೆ ಪತ್ರವನ್ನು ಕಟೀಲ್ ಅವರಿಗೆ ಕಳುಹಿಸಿರುವುದಾಗಿ ಅರವಿಂದ್ ಲಿಂಬಾವಳಿ ತಿಳಿಸಿದ್ದಾರೆ.

ಭಾರತೀಯ ಜನತಾ ಪಾರ್ಟಿಯಲ್ಲಿ ಒಬ್ಬ ವ್ಯಕ್ತಿ, ಒಂದು ಹುದ್ದೆ ಎನ್ನುವ ಸಿದ್ಧಾಂತವಿದೆ. ಈಗ ಸಚಿವನಾಗಿ ಅಧಿಕಾರ ವಹಿಸಿಕೊಂಡಿದ್ದೇನೆ. ಹೀಗಾಗಿ ಒಬ್ಬರಿಗೆ ಒಂದೇ ಹುದ್ದೆ ಎಂಬ ನಯಮದಂತೆ ಪಕ್ಷದ ರಾಜ್ಯ ಉಪಾಧ್ಯಕ್ಷ ಹುದ್ದೆಗೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ.

Recommended Video

   ಗುಜರಾತ್ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿಗೆ ಭರ್ಜರಿ ಗೆಲುವು-ಕೇಂದ್ರ ಗೃಹಸಚಿವ ಅಮಿತ್ ಶಾ ಸಂತಸ | Oneindia Kannada

   ಪಕ್ಷ ಸಂಘಟನೆಗೆ ಅವಕಾಶ ಮಾಡಿ ಕೊಟ್ಟಿದ್ದಕ್ಕಾಗಿ ಧನ್ಯವಾದಗಳು ಎಂದು ಅವರು ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರಿಗೆ ಸಲ್ಲಿಸಿರುವ ತಮ್ಮ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ. ಪಕ್ಷದ ರಾಜ್ಯ ಉಪಾದ್ಯಕ್ಷನಾಗಿ ಜವಾಬ್ದಾರಿ ನಿರ್ವಹಿಸಿದ ಅಧಿಯಲ್ಲಿ ಸಲಹೆ ಸಹಕಾರ ನೀಡಿದ್ದಕ್ಕಾಗಿ ಧನ್ಯವಾದ ಎಂದು ರಾಜೀನಾಮೆ ಪತ್ರದಲ್ಲಿ ಲಿಂಬಾವಳಿ ಹೇಳಿದ್ದಾರೆ.

   English summary
   In a significant development, Kannada and Culture Minister Arvind Limbavali has resigned from his post as Vice President of Karnataka State of the Bharatiya Janata Party. Know more.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X