ರಾಯಚೂರಿನಲ್ಲೂ 3 ತಿಂಗಳಲ್ಲಿ 70 ಮಕ್ಕಳು ಸಾವು!

Posted By:
Subscribe to Oneindia Kannada

ರಾಯಚೂರು, ಆಗಸ್ಟ್ 23: ಕೋಲಾರ ಜಿಲ್ಲೆಯಲ್ಲಿ ಮಕ್ಕಳ ಸರಣಿ ಸಾವಿನ ಬೆನ್ನಲ್ಲಿಯೇ ರಾಯಚೂರು ಜಿಲ್ಲೆಯಲ್ಲೂ ಇಂಥದೇ ದುರಂತ ಸಂಭವಿಸಿರುವುದು ಬೆಳಕಿಗೆ ಬಂದಿದೆ.

ಕೋಲಾರದಲ್ಲೂ ಗೋರಖ್ ಪುರ ಮಾದರಿ ದುರಂತ: 3 ತಿಂಗಳಲ್ಲಿ 33 ಸಾವು!

ಕಳೆದ ಮೂರು ತಿಂಗಳಲ್ಲಿ ಬರೊಬ್ಬರಿ 70 ಮಕ್ಕಳು ಸಾವನ್ನಪ್ಪಿರುವುದು ತಿಳಿದು ಬಂದಿದೆ. ಜಿಲ್ಲೆಯಲ್ಲಿ ಮಕ್ಕಳ ಸರಣಿ ಸಾವು ಸಂಭವಿಸಿರುವುದಕ್ಕೆ ಅಪೌಷ್ಟಿಕತೆಯೇ ಕಾರಣ ಎನ್ನುವ ಶಂಕೆಗಳು ವ್ಯಕ್ತವಾಗಿವೆ.

In the last 3 months 70 children have died in Raichur

ಕಳೆದೆರೆಡು ವರ್ಷಗಳಲ್ಲಿ 1514 ಮಕ್ಕಳು ಸಾವನ್ನಪ್ಪಿದ್ದು, ಮತ್ತೊಂದೆಡೆ ಇಲ್ಲಿನ ರಿಮ್ಸ್ ಆಸ್ಪತ್ರೆ ಇದ್ದು ಇಲ್ಲದಂತಾಗಿರುವುದಕ್ಕೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಮಕ್ಕಳ ಸಾವಿಗೆ ಕಾರಣ ಏನು ಎಂಬುವುದನ್ನು ತಿಳಿಯುವಲ್ಲಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವಿಫವಾಗಿದೆ.

ರಾಜ್ಯ ಸರ್ಕಾರ ಕೂಡಲೇ ಎಚ್ಚೆತ್ತು ರಾಜ್ಯದಲ್ಲಿ ಸಂಭವಿಸುತ್ತಿರುವ ಮಕ್ಕಳ ಸರಣಿ ಸಾವಿನ ಬಗ್ಗೆ ಗಮನಹರಿಸಿ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
In the last 3 months 70 children have died in Raichur. Total of 1514 children have died in Raichur in the last 2 years.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ