ಗುಡ್‌ನ್ಯೂಸ್‌; ಬೆಂಗಳೂರಿನಲ್ಲಿ ರಸ್ತೆಗಿಳಿದ 100 ಹೊಸ ಬಿಎಂಟಿಸಿ ಬಸ್‌ಗಳು: ಏಲ್ಲೆಲ್ಲಿ ಸಂಚಾರ?

ಬೆಂಗಳೂರು, ಸೆಪ್ಟೆಂಬರ್ 12: ಬೆಂಗಳೂರು ನಗರದ ಜನತೆಯ ಅನುಕೂಲಕ್ಕೆ ಇಂದು(ಗುರುವಾರ) ಮೊದಲ ಹಂತದ 100 ನೂತನ BMTC ಬಸ್ ಗಳನ್ನು ಲೋಕಾರ್ಪಣೆ ಮಾಡಿದ್ದೇವೆ. ಒಟ್ಟು 840 ನೂತನ‌ ಬಸ್ ಗಳು BMTC ಸೇರಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಬಳಿ ಸಾರಿಗೆ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 100 ನೂತನ BMTC ಬಸ್ ಗಳನ್ನು ಲೋಕಾರ್ಪಣೆ ಮಾಡಿದ ಬಳಿಕ ಮಾತನಾಡಿ, ಬೆಂಗಳೂರು ನಗರದಲ್ಲಿ ಜನಸಂಖ್ಯೆ ಹೆಚ್ಚುತ್ತಿದೆ. ಇಲ್ಲಿನ ಹೆಚ್ಚುತ್ತಿರುವ ಶ್ರಮಿಕ ವರ್ಗಗಳಿಗೆ ಅನುಕೂಲ ಮಾಡುವ ಉದ್ದೇಶದಿಂದ ನೂತನ‌ಬಸ್ ಗಳನ್ನು BMTC ಗೆ ಸೇರ್ಪಡೆಗೊಳಿಸುವ ಜೊತೆಗೆ ಹಿಂದಿನ ಸರ್ಕಾರ ಸ್ಥಗಿತಗೊಳಿಸಿದ್ದ ಇಂದಿರಾ ಕ್ಯಾಂಟೀನ್ ಗಳನ್ನು ಆರಂಭಿಸಿದ್ದಲ್ಲದೆ ನೂತನವಾಗಿ ಇನ್ನಷ್ಟು ಕ್ಯಾಂಟೀನ್ ಗಳನ್ನು ಆರಂಭಿಸುತ್ತಿದ್ದೇವೆ.

Inauguration Of 100 New BMTC Buses Of The First Phase Said CM Siddaramaiah

ಇದೇ ಶ್ರಮಿಕ ವರ್ಗದ ಅನುಕೂಲಕ್ಕಾಗಿ ಶಕ್ತಿ ಯೋಜನೆ ಸೇರಿದಂತೆ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ಯಶಸ್ವಿಯಾಗಿ ಮುಂದುವರೆಸುತ್ತಿದ್ದೇವೆ. ನಮ್ಮ ಸರ್ಕಾರ ಇರುವವರೆಗೂ ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ ಎಂದರು. ಬಡವರ ಮತ್ತು ಮಧ್ಯಮ ವರ್ಗದ ವಿರೋಧಿಯಾಗಿರುವ ಬಿಜೆಪಿ ಈ ಗ್ಯಾರಂಟಿ ಯೋಜನೆಗಳ ವಿರುದ್ಧ ಅಪಪ್ರಚಾರ ಮಾಡುತ್ತಿವೆ. ಈ ಅಪಪ್ರಚಾರಕ್ಕೆ ಕಿವಿಗೊಡಬೇಡಿ. ಈ ಗ್ಯಾರಂಟಿಗಳು ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿ ಆಗಲಿವೆ ಎಂದರು.

ಗೃಹಲಕ್ಷ್ಮಿ ಹಣದಿಂದ ಸಾವಿರಾರು ಕುಟುಂಬಗಳು ನಾನಾ ರೀತಿಯ ಅನುಕೂಲಗಳನ್ನು ಒದಗಿಸಿಕೊಳ್ಳುತ್ತಿರುವ ಬಗ್ಗೆ ಪ್ರತಿದಿನ ಮಾಧ್ಯಮಗಳು ತೋರಿಸುತ್ತಿವೆ. ನಾವು ಬಡವರಿಗೆ ಅಕ್ಕಿ ಕೊಡುವ ಯೋಜನೆಗೆ ಮುಂದಾದರೆ ಕೇಂದ್ರ ಸರ್ಕಾರ ನಮಗೆ ಅಕ್ಕಿ ಕೊಡದೆ ತೊಂದರೆ ನೀಡಿತು. ಆದರೆ ನಾವು ಅಕ್ಕಿಯ ಬದಲಿಗೆ, ಅಕ್ಕಿಯ ಹಣವನ್ನು ಜನರಿಗೆ ನೀಡಿ ನುಡಿದಂತೆ ನಡೆದಿದ್ದೇವೆ ಎಂದರು.‌

ರಾಜ್ಯದ ಪ್ರತೀ ಕುಟುಂಬಗಳಿಗೆ ಪ್ರತೀ ತಿಂಗಳಿಗೆ 4-5 ಸಾವಿರ ರೂಪಾಯಿ ಅನುಕೂಲ ಆಗುತ್ತಿದೆ. ಇದರಿಂದ ಲಕ್ಷಾಂತರ ಕುಟುಂಬಗಳಿಗೆ ಆರ್ಥಿಕ ಶಕ್ತಿ ನೀಡಿದ್ದೇವೆ ಎಂದರು. ನಮ್ಮ ಸರ್ಕಾರ ಬಂದ ಮೇಲೆ ನಾಲ್ಕು ಬಾರಿ ಹೊಸ ಬಸ್ ಗಳನ್ನು‌ ಖರೀದಿಸಿ ಸವಲತ್ತು ಒದಗಿಸಿದ್ದೇವೆ ಎಂದರು.

ಏಲ್ಲೆಲ್ಲಿ ಸಂಚಾರ?

ಹೊಸ ಬಸ್‌ಗಳನ್ನು ಹೆಚ್ಚು ಪ್ರಯಾಣಿಕರ ದಟ್ಟಣೆ ಇರುವ ಪ್ರದೇಶಗಳಲ್ಲಿ ಓಡಿಸಲು ನಿರ್ಧರಿಸಲಾಗಿದೆ. ಪ್ರಮುಖವಾಗಿ ಮೆಜೆಸ್ಟಿಕ್‌, ಕೆಆರ್‌ ಮಾರುಕಟ್ಟೆ, ಯಶವಂತಪುರ, ರಾಜಾಜಿನಗರ, ಮೈಸೂರು ರಸ್ತೆ, ಕೆಆರ್‌ ಪುರ ನಿಲ್ದಾಣಗಳಿಂದ ನಗರದ ಹೊರ ಭಾಗಗಗಳಿಗೆ ಹಾಗೂ ನಗರದ ಪ್ರಮುಖ ಸ್ಥಳಗಳಿಗೆ ಹೊಸ ಬಸ್‌ಗಳು ಸಂಚಾರ ನಡೆಸಲಿವೆ ಎಂದು ಬಿಎಂಟಿಸಿ ಮೂಲಗಳು ತಿಳಿಸಿವೆ.

ಇನ್ನೂ ಈ ವೇಳೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ವಸತಿ ಸಚಿವ ಜಮೀರ್ ಅಹಮದ್, ಇಂಧನ ಸಚಿನ ಕೆ.ಜೆ.ಜಾರ್ಜ್, ಕೆಕೆಆರ್ಡಿಬಿ ಅಧ್ಯಕ್ಷರಾದ ಅಜಯ್ ಸಿಂಗ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ನಸೀರ್ ಅಹಮದ್ ಅವರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+