ಎಸ್‌ಸಿ, ಎಸ್‌ಟಿ ಯುವಕ/ ಯುವತಿಯರ ವಿವಾಹಕ್ಕೆ ಪ್ರೋತ್ಸಾಹಧನ, ಷರತ್ತು
ಬೆಂಗಳೂರು, ಜನವರಿ 10: ಕರ್ನಾಟಕ ಸರ್ಕಾರ ಬಜೆಟ್‌ನಲ್ಲಿ ಘೋಷಣೆ ಮಾಡಿದಂತೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಯುವಕ/ ಯುವತಿರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದ ಒಳಗೆ ಅಂತರ್ ಜಾತಿ ವಿವಾಹವಾದಲ್ಲಿ ಪ್ರೋತ್ಸಾಹ ಧನ ನೀಡುವ ಬಗ್ಗೆ ಆದೇಶ ಹೊರಡಿಸಿದೆ.
ಈ ಕುರಿತು ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಗಿರಿಜಮ್ಮ ಸರ್ಕಾರದ ಅಧೀನ ಕಾರ್ಯದರ್ಶಿ-1, ಸಮಾಜ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದ್ದಾರೆ. 2017-18ನೇ ಸಾಲಿನಲ್ಲಿ ಆಯವ್ಯಯ ಭಾಷಣದ ಘೋಷಣೆ ಕಂಡಿಕೆ, ಆಯುಕ್ತರು ಸಮಾಜ ಕಲ್ಯಾಣ ಅವರ ಕಡತ ಸಂಖ್ಯೆ 4/4/2017ರ ಉಲ್ಲೇಖ ಮಾಡಿದ್ದಾರೆ.

2017-18ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಪರಿಶಿಷ್ಟ ಜಾತಿಯ/ ಪರಿಶಿಷ್ಟ ಪಂಗಡದ ಯುವಕ/ ಯುವತಿಯರು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸಮುದಾಯದ ಒಳಗೆ ಅಂತರ್ ಜಾತಿ ವಿವಾಹವಾದಲ್ಲಿ ಅಂತಹವರಿಗೆ ರೂ. 2 ಲಕ್ಷಗಳ ಪ್ರೋತ್ಸಾಹ ಧನ ನೀಡಲಾಗುವುದು ಎಂದು ಘೋಷಿಸಲಾಗಿದೆ.
ಆಯುಕ್ತರು, ಸಮಾಜ ಕಲ್ಯಾಣ ಇಲಾಖೆ ಮತ್ತು ನಿರ್ದೇಶಕರು, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಇವರ ಏಕ ಕಡತದಲ್ಲಿ ಪ್ರಸ್ತಾವನೆಗಳನ್ನು ಸಲ್ಲಿಸಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ನಡುವಿನ ಸಾಮಾಜಿಕ ಅಸಮಾನತೆಯನ್ನು ಹೋಗಲಾಡಿಸಲು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಸಮುದಾಯದ ಒಳಗೆ ಅಂತರ್‌ಜಾತಿ ವಿವಾಹವಾದ ಯುವಕ/ ಯುವತಿಯರಿಗೆ ರೂ. 2 ಲಕ್ಷಗಳ ಪ್ರೋತ್ಸಾಹ ಧನ ನೀಡಲು ಸರ್ಕಾರದ ಆದೇಶ ಹೊರಡಿಸುವಂತೆ ಕೋರಿರುತ್ತಾರೆ.
ಸದರಿ ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿ ಈ ಆದೇಶ ಹೊರಡಿಸಲಾಗಿದೆ. 2017-18ನೇ ಸಾಲಿನಲ್ಲಿ ಆಯವ್ಯಯ ಭಾಷಣದ ಘೋಷಣೆಯನ್ವಯ ಪರಿಶಿಷ್ಟ ಜಾತಿಯ/ ಪರಿಶಿಷ್ಟ ಪಂಗಡದ ಯುವಕ/ ಯುವತಿಯರು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಸಮುದಾಯದ ಒಳಗೆ ಅಂತರ್ ಜಾತಿ ವಿವಾಹವಾದಲ್ಲಿ ಅಂತಹವರಿಗೆ ರೂ. 2 ಲಕ್ಷಗಳ ಪ್ರೋತ್ಸಾಹ ಧನ ನೀಡಲು ಈ ಕೆಳಕಂಡ ಷರತ್ತುಗಳಗೆ ಒಳಪಟ್ಟು ಸರ್ಕಾರದ ಮಂಜೂರಾತಿ ನೀಡಲಾಗಿದೆ.
ಷರತ್ತುಗಳು
* ಅಂತರ್ ಜಾತಿ ವಿವಾಹವಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಯುವಕ/ ಯುವತಿಯರು ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಾಂಗಕ್ಕೆ ಸೇರಿದವರಾಗಿರಬೇಕು.
* ಈ ಸೌಲಭ್ಯ ಪಡೆಯುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಯುವತಿಯರ ವಯೋಮಾನವು ಕನಿಷ್ಟ 18 ವರ್ಷದಿಂದ ಗರಿಷ್ಟ 42 ವರ್ಷಗಳಾಗಿರತಕ್ಕದ್ದು. ಯುವಕನಿಗೆ ಕನಿಷ್ಠ 21 ವರ್ಷದಿಂದ ಗರಿಷ್ಟ 45 ವರ್ಷ ವಯಸ್ಸು ಆಗಿರತಕ್ಕದ್ದು.
* ಈ ಯೋಜನೆಯಡಿ ಪ್ರೋತ್ಸಾಹ ಧನ ಪಡೆಯಲು ದಂಪತಿಗಳ ಒಟ್ಟಾರೆ ವಾರ್ಷಿಕ ಆದಾಯವು ರೂ. 2 ಲಕ್ಷಗಳನ್ನು ಮೀರತಕ್ಕದ್ದಲ್ಲ.
* ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದ ಯುವಕ/ ಯುವತಿಯರು ಮದುವೆಯಾದ ಒಂದು ವರ್ಷದ ಅವಧಿಯೊಳಗೆ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಸಲ್ಲಿಸತಕ್ಕದ್ದು.
* ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದ ಯುವಕ/ ಯುವತಿಯರು ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಸಲ್ಲಿಸುವ ಮುಂಚೆ ಉಪ ನೋಂದಾಣಾಧಿಕಾರಿಗಳ ಕಛೇರಿಯಲ್ಲಿ ವಿವಾಹದ ಬಗ್ಗೆ ನೋಂದಾಯಿಸಿರಬೇಕು.
* ಈ ಸೌಲಭ್ಯವನ್ನು ಒಮ್ಮೆ ಮಾತ್ರ ಪಡೆಯಬಹುದಾಗಿದೆ.
* ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದ ಒಳಗೆ ಅಂತರ್ ಜಾತಿ ವಿವಾಹವಾದ ಯುವಕ ವಾಸ್ತವ್ಯವಿರುವ ಜಿಲ್ಲೆಯಲ್ಲಿ ಮಾತ್ರ ಅರ್ಜಿ ಸಲ್ಲಿಸತಕ್ಕದ್ದು.
* ರಾಜ್ಯ ಮತ್ತು ಕೇಂದ್ರ ಸರ್ಕಾರದ ಅಸ್ಪೃಶ್ಯತಾ ನಿವಾರಣಾ ಕಾರ್ಯಕ್ರಮದಡಿ ಅಂತರ್ ಜಾತಿ ವಿವಾಹ ಅಥವಾ ವಿಧವೆಯರ ಮರು ವಿವಾಹ ಯೋಜನೆಗಳಡಿ ಪ್ರೋತ್ಸಾಹ ಧನ ಪಡೆದವರು ಈ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಹರಲ್ಲ.
* ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದ ಯುವಕ/ ಯುವತಿಯರು ಸರಳ ವಿವಾಹ ಕಾರ್ಯಕ್ರಮದಡಿ ಮದುವೆಯಾದಲ್ಲ ಅಂತಹವರು ಈ ಯೋಜನೆಯಡಿಯಲ್ಲಿ ಸರಳ ವಿವಾಹದ ರೂ. 50.000 ಹೊರತುಪಡಿಸಿ ಉಳಿದ ರೂ.1.50 ಲಕ್ಷ ಪ್ರೋತ್ಸಾಹ ಧನವನ್ನು ಪಡೆಯಲು ಅರ್ಹರಿರುತ್ತಾರೆ.
* ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದ ಯುವಕ/ ಯುವತಿಯರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಭಾರತ ಸರ್ಕಾರದ ಅಧಿಸೂಚನೆಯಂತ ಪ್ರಕಟಿಸಲಾದ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಪಟ್ಟಯಲ್ಲಿ ಒಂದೇ ಸಂಖ್ಯೆಯಲ್ಲಿ ನಮೂದಿಸಿರುವ ಸಮನಾಂತರ ಜಾತಿಗಳ ಒಳಗೆ ಮದುವೆಯಾದಲ್ಲಿ ಈ ಪ್ರೋತ್ಸಾಹ ಧನ ಪಡೆಯಲು ಅರ್ಹರಿರುವುದಿಲ್ಲ.
* ಮಂಜೂರಾದ ಪ್ರೋತ್ಸಾಹಧನದ ಹಣವನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದ ಒಳಗೆ ವಿವಾಹವಾದ ದಂಪತಿಗಳ ಜಂಟಿ ಹೆಸರಿನಲ್ಲಿರುವ ಬ್ಯಾಂಕ್ ಖಾತೆಗೆ NEFTಮೂಲಕ ಜಮಾ ಮಾಡಲಾಗುತ್ತದೆ.
ಅನುಷ್ಠಾನ ವಿಧಾನ: ಈ ಆದೇಶವು ಹೊರಡಿಸಿದ ದಿನಾಂಕದಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದ ಒಳಗೆ ಅಂತರ್‌ಜಾತಿ ವಿವಾಹವಾದ ಯುವಕ/ ಯುವತಿಯರು ಈ ಸೌಲಭ್ಯ ಪಡೆಯಲು ಅರ್ಹರಿರುತ್ತಾರೆ.
ಈ ಸೌಲಭ್ಯದ ಬಗ್ಗೆ ಆಯಾ ಜಿಲ್ಲಾ ಮಟ್ಟದಲ್ಲಿ ಜಂಟಿ/ ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ/ ಜಿಲ್ಲಾ ಪರಿಶಿಷ್ಟ ಪಂಗಡಗಳ ಕಲ್ಯಾಣ ಅಧಿಕಾರಿ ಇವರು ವ್ಯಾಪಕ ಪ್ರಚಾರವನ್ನು ನೀಡಿ ಅರ್ಜಿಗಳನ್ನು ಆಹ್ವಾನಿಸಬೇಕು ಎಂದು ಸೂಚಿಸಲಾಗಿದೆ.
ಸೂಕ್ತ ದಾಖಲೆಗಳೊಂದಿಗೆ ಸಲ್ಲಿಕೆಯಾದ ಅರ್ಜಿಗಳನ್ನು ಪರಿಶೀಲಿಸಿ ಅಗತ್ಯವಿರುವ ಅನುದಾನದ ಬಗ್ಗೆ ಬೇಡಿಕೆಯನ್ನು ಆಯುಕ್ತರ ಕಛೇರಿ, ಸಮಾಜ ಕಲ್ಯಾಣ ಇಲಾಖೆ ಬೆಂಗಳೂರು/ ನಿರ್ದೇಶಕರು. ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ/ ಜಿಲ್ಲಾ ಪರಿಶಿಷ್ಟ ಪಂಗಡಗಳ ಕಲ್ಯಾಣಾಧಿಕಾರಿ, ಬೆಂಗಳೂರು ಇವರಿಗೆ ಸಲ್ಲಿಸತಕ್ಕದ್ದು
ಅನುದಾನ ಲಭ್ಯತೆಯ ಆಧಾರದಲ್ಲಿ ರೂ. 2 ಲಕ್ಷ ಪ್ರೋತ್ಸಾಹ ಧನವನ್ನು ಒಂದೇ ಕಂತಿನಲ್ಲಿ ದಂಪತಿಗಳ ಜಂಟಿ ಬ್ಯಾಂಕ್ ಖಾತೆಗೆ NEFT ಮೂಲಕ ಜಿಲ್ಲಾ ಮಟ್ಟದ ಜಂಟಿ/ ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಇವರು ಜಮಾ ಮಾಡುವುದು.
-
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಶೂಟಿಂಗ್ ವೇಳೆ ನನ್ನ ಖಾಸಗಿ ಭಾಗ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದ: ನಿರ್ದೇಶಕ ಸನೋಜ್ ಮಿಶ್ರಾ ವಿರುದ್ಧ ನಟಿ ಮೊನಾಲಿಸಾ ಆರೋಪ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral












Click it and Unblock the Notifications