ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವೀರಶೈವ ಲಿಂಗಾಯತ ಸೇರಿದಂತೆ 2ಎ ವಂಚಿತರಾದ ಎಲ್ಲ ಸಮುದಾಯಕ್ಕೆ ಮೀಸಲಾತಿ ಸಿಗಲಿ: ಮುರುಗೇಶ್ ನಿರಾಣಿ

|
Google Oneindia Kannada News

ಬೆಂಗಳೂರು, ಡಿಸೆಂಬರ್ 6: ವೀರಶೈವ ಲಿಂಗಾಯತ ಸೇರಿದಂತೆ 2ಎ ವಂಚಿತರಾದ ಎಲ್ಲ ಸಮುದಾಯಕ್ಕೆ ಮೀಸಲಾತಿ ಸಿಗಲಿ ಎಂದು ಬೃಹತ್ ಹಾಗೂ ಸಣ್ಣ ಕೈಗಾರಿಕೆ ಸಚಿವ ಮುರುಗೇಶ್ ಹೇಳಿದರು.

ಮಂಗಳವಾರ ಬೆಂಗಳೂರು ಪ್ರೆಸ್ ಕ್ಲಬ್ ಏರ್ಪಡಿಸಿದ್ದ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡುವ ಸಂಬಂಧ ಸರ್ಕಾರ ಸಕಾರಾತ್ಮಕವಾದ ನಿರ್ಧಾರಗಳನ್ನು ತೆಗೆದುಕೊಂಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈಗಾಗಲೇ ಹಿಂದುಳಿದ ವರ್ಗಗಳ ಆಯೋಗ ನೀಡುವ ವರದಿ ಮೇಲೆ ಮುಂದಿನ ಕ್ರಮವನ್ನು ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ.

ಪಂಚಮಸಾಲಿ ಸಮುದಾಯದ ಜೊತೆಗೆ ವೀರಶೈವ, ಲಿಂಗಾಯತ ಸಮುದಾಯದಲ್ಲಿರುವ ಸಣ್ಣ ಸಣ್ಣ ಸಮುದಾಯಕ್ಕೂ ಮೀಸಲಾತಿ ಸಿಗಬೇಕೆಂಬುದು ನಮ್ಮ ಆಶಯ. ಈಗಲೂ ನಮ್ಮ ಸಮುದಾಯದಲ್ಲಿ ಕೆಲವರಿಗೆ ಸೂಕ್ತವಾದ ಸಂವಿಧಾನ ಬದ್ಧ ಸ್ಥಾನಮಾನಗಳು ಸಿಕ್ಕಿಲ್ಲ. ನನ್ನ ಪ್ರಕಾರ ಸಮಸ್ತ ವೀರಶೈವ ಸಮುದಾಯಕ್ಕೆ ಮೀಸಲಾತಿ ಅಗತ್ಯ. ಹಿಂದುಳಿದ ವರ್ಗಗಳ ಆಯೋಗ ವರದಿ ಕೊಟ್ಟ ತಕ್ಷಣ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುರುಗೇಶ್ ನಿರಾಣಿ ಹೇಳಿದರು.

Including Veerashaiva Lingayath All Small Communities Should Include In 2a Reservation says murugesh nirani

ಇನ್ನೂ ಕಮಿಷನ್ ಆರೋಪ ರಾಜಕೀಯ ಆರೋಪ ಕುರಿತಾಗಿ ಮಾತನಾಡಿದ ನಿರಾಣಿ ಅವರು, ಇದೊಂದು ಆಧಾರರಹಿತ ಆರೋಪ. ಇದರಲ್ಲಿ ಸತ್ಯಾಂಶ ಇಲ್ಲ ಎಂದು ಪರೋಕ್ಷವಾಗಿ
ಪ್ರತಿಪಕ್ಷಗಳ ಆರೋಪಕ್ಕೆ ತಿರುಗೇಟು ನೀಡಿದರು.

ಇನ್ನೂ ಈ ಸಂದರ್ಭದಲ್ಲ ನವೆಂಬರ್ ತಿಂಗಳಲ್ಲಿ ನಡೆದ ಹೂಡಿಕೆದಾರರ ಸಮಾವೇಶದಲ್ಲಿ ಸುಮಾರು 9.81 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆಯಾಗಿವೆ. ಉದ್ದಿಮೆಗಳಿಗೆ ಬೇಕಾದ ನೀರು, ಭೂಮಿ, ವಿದ್ಯುತ್, ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡಲು ಈಗಾಗಲೇ ಸಂಬಂಧಪಟ್ಟ ಇಲಾಖೆಗಳ ಜೊತೆ ಸಮನ್ವಯ ಸಮಿತಿಯನ್ನು ರಚಿಸಿದ್ದೇವೆ. ಇದು ನಮ್ಮ ನಿರೀಕ್ಷೆಗೂ ಮೀರಿ ಅನುಷ್ಠಾನವಾಗುತ್ತದೆ ಎಂದು ಸಂತಸವನ್ನು ವ್ಯಕ್ತಪಡಿಸಿದರು.

ರಾಜ್ಯದಲ್ಲಿ 2 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆ ಮಾಡಲು ಉದ್ಯಮಿಗಳು ಮುಂದೆ ಬಂದಿದ್ದರೂ ನಾವು ಅವರ ಜೊತೆ ಎಂಒಯು ಮಾಡಿಕೊಂಡಿಲ್ಲ. ಈಗಾಗಲೇ ಮಾಡಿಕೊಂಡಿರುವ ತಿಳುವಳಿಕೆ ಒಪ್ಪಂದ ಪತ್ರಕ್ಕೆ (ಎಂಒಯು) ಆದ್ಯತೆ ಕೊಡುತ್ತೇವೆ. ಕೇವಲ ಅಂಕಿ-ಸಂಖ್ಯೆಗಳನ್ನು ಹೆಚ್ಚಿಸಲು ಒಪ್ಪಂದ ಮಾಡಿಕೊಳ್ಳುವ ಪ್ರವೃತ್ತಿ ನಮ್ಮಲ್ಲಿ ಇಲ್ಲ ಎಂದು ಸ್ಪಷ್ಟಪಡಿಸಿದರು .

ಪ್ರಮಾಣ ಪತ್ರ ಆಧಾರಿತ ತಿಳುವಳಿ ಮಾಡಿಕೊಂಡಿರುವವರ ಜೊತೆ ಒಪ್ಪಂದ ಮಾಡಿಕೊಂಡಿದ್ದೇವೆ. ಅಂದರೆ ಯಾರು ನಮ್ಮ ರಾಜ್ಯದಲ್ಲಿ ಖಚಿತವಾಗಿ ಹೂಡಿಕೆ ಮಾಡಿ ಉದ್ಯಮಗಳನ್ನು ಆರಂಭಿಸುತ್ತಾರೋ ಅಂತಹವರಿಗೆ ಮಾತ್ರ ಆದ್ಯತೆ ಕೊಟ್ಟಿದ್ದೇವೆ. ಹಿಂದಿನ ಸರ್ಕಾರಗಳ ಕೆಲವು ತಪ್ಪುಗಳಿಂದಾಗಿ ಯೋಜನೆಗಳು ಅನುಷ್ಠಾನವಾಗಲಿಲ್ಲ ಎಂದು ನಿರಾಣಿ ಬೇಸರ ವ್ಯಕ್ತಪಡಿಸಿದರು.

Including Veerashaiva Lingayath All Small Communities Should Include In 2a Reservation says murugesh nirani

ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಶೇ. 90ರಷ್ಟು ಟಯರ್-2 ಮತ್ತು 3 ನಗರಗಳಲ್ಲಿ ಹೂಡಿಕೆಯಾಗಿವೆ. 2 ಮತ್ತು 3ನೇ ಹಂತದ ನಗರಗಳಲ್ಲಿ ಬಂಡವಾಳ ಹೂಡಿಕೆಗೆ ಗಮನಹರಿಸಿದ್ದೇವೆ ಎಂದರು.

50 ಕೋಟಿಗೂ ರೂ. ಹೆಚ್ಚು ಬಂಡವಾಳ ಹೂಡಿಕೆಯ 7 ಪ್ರಮುಖ ಬೃಹತ್ ಮತ್ತು ಮದ್ಯಮ ಯೋಜನೆಗಳಿಗೆ ಅನುಮೋದನೆ ನೀಡಿದ್ದು, 852.06 ಕೋಟಿ ರೂ. ಬಂಡವಾಳ ಹೂಡಿಕೆಯಾಗಿ 3560 ಜನರಿಗೆ ಉದ್ಯೋಗ ಅವಕಾಶ ಲಭಿಸಲಿದೆ.

15 ಕೋಟಿ ರೂ. 50 ಕೋಟಿ ರೂ. ಯೊಳಗಿನ 48 ಹೊಸ ಯೋಜನೆಗಳಿಗೆ ಸಮಿತಿಯು ಅನುಮೋದನೆ ನೀಡಿದ್ದು, ಒಟ್ಟು 923.9 ಕೋಟಿ ರೂ. ಬಂಡವಾಳ ಹೂಡಿಕೆಯಾಗಿ 4444 ಜನರಿಗೆ ಉದ್ಯೋಗಗಳು ಸಿಗಲಿವೆ. ಹೆಚ್ಚುವರಿ ಬಂಡವಾಳ ಹೂಡಿಕೆಯ ನಾಲ್ಕು ಯೋಜನೆಗಳಿಂದ 852.73 ಕೋಟಿ ರೂ. ಬಂಡವಾಳ ಹೂಡಿಕೆಯಾಗಿ ಅಂದಾಜು 1460 ಜನರಿಗೆ ಉದ್ಯೋಗ ಅವಕಾಶ ಸಿಗಲಿವೆ ಎಂದು ವಿವರಿಸಿದರು.

English summary
Including Veerashaiva Lingayath All Small Communities Should Include In 2a Reservation says murugesh nirani,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X